ಸಿದ್ದರಾಮಯ್ಯ ಹೇಳುವುದೆಲ್ಲಾ ವೇದವಾಕ್ಯವಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜು.29: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವುದೆಲ್ಲಾ ವೇದವಾಕ್ಯವಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಸಿದ್ಧರಾಮಯ್ಯ ಅವರ ಕಾಲದಲ್ಲಿ 32 ಸರಣಿ ಕೊಲೆಗಳಾಗಿದ್ದವು. ಆಗ ಅವರು ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಎಲ್ಲಾ ವಿಷಯಗಳಲ್ಲಿ ರಾಜಕಾರಣವನ್ನು ಮಾಡಬಾರದು. ಅವರ ಹೇಳಿಕೆಗೆ ಹೆಚ್ಚಿನ ಮಹತ್ವವಿಲ್ಲ ಎಂದರು. ಶಾಸಕ ತನ್ವೀರ್ ಸೇಠ್ ಮೇಲೆ ಎಸ್‍ಡಿಪಿಐ ಹಾಗೂ ಪಿಎಫ್‍ಐ ಸಂಘಟನೆಯ ಸುಮಾರು 200 ಜನರನ್ನು ದಾಳಿ ನಡೆಸಿದ … Read more

ರಾಷ್ಟ್ರೀಯ  ತನಿಖಾ ದಳಕ್ಕೆ ಪ್ರವೀಣ್ ಹತ್ಯೆ ಪ್ರಕರಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜು. 29: ಸುಳ್ಯದ ಬಿಜೆಪಿ ಮುಖಂಡ  ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ  ತನಿಖಾ ದಳಕ್ಕೆ (NIA) ವಹಿಸಲು ತೀರ್ಮಾನಿಸಲಾಗಿದೆ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರಿನ  ಶಕ್ತಿಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಪ್ರವೀಣ್ ಹತ್ಯೆ ವ್ಯವಸ್ಥಿತವಾಗಿ ಆಗಿದೆ ಹಾಗೂ ಇದೊಂದು  ಅಂತರರಾಜ್ಯ ವಿಚಾರವಾಗಿದೆ. ಡಿಜಿ, ಐಜಿ ಅವರ ಬಳಿ ಚರ್ಚಿಸಲಾಗಿದ್ದು, ಅದರ ಸಂಪೂರ್ಣ ಮಾಹಿತಿಯನ್ನು ಪಡೆಯಲು ಸೂಚಿಸಲಾಗಿದೆ. ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದ್ದು, ಮಾಹಿತಿ ಪಡೆದ ನಂತರ ಗೃಹ … Read more

ಸೂತಕದ ಛಾಯೆ ನಡುವೆಯೇ ರಾಜ್ಯ ಬಿಜೆಪಿ ಸರ್ಕಾರದಿಂದ ನೂತನ ಯೋಜನೆಗಳ ಲೋಕಾರ್ಪಣೆ

ಎಸ್ ಸಿ /ಎಸ್ ಟಿ ಸಮುದಾಯಗಳಿಗೆ 75 ಯೂನಿಟ್ ಉಚಿತ ವಿದ್ಯುತ್ , ಸ್ವಯಂ ಉದ್ಯೋಗ ಯೋಜನೆ , 8000 ಶಾಲಾ ಕೊಠಡಿಗಳ ನಿರ್ಮಾಣ, ಸಮುದಾಯ ಆರೋಗ್ಯ ಕೇಂದ್ರಗಳಾಗಿ ಉನ್ನತೀಕರಣ, ‘ಸ್ತ್ರೀ ಸಾಮರ್ಥ್ಯ’ ಯೋಜನೆ, ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ, ಪುಣ್ಯಕೋಟಿ ದತ್ತು ಯೋಜನೆ, ವಿದ್ಯಾನಿಧಿ ಯೋಜನೆ.

ಪ್ರವೀಣ್ ಹತ್ಯೆ ಪ್ರಕರಣ – ದುಷ್ಕರ್ಮಿಗಳ ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜು. 27 : ಸಮಾಜದಲ್ಲಿ ಹಿಂಸೆ, ಕ್ಷೋಭೆ ಉಂಟು ಮಾಡುವಂತಹ ದುಷ್ಕೃತ್ಯವನ್ನು ಎಸಗಿರುವ ದುಷ್ಕರ್ಮಿಗಳನ್ನು ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಆರ್ ಟಿ ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿ, ಮಂಗಳೂರಿನಲ್ಲಿ ನಿನ್ನೆ ನಡೆದ ಪ್ರವೀಣ್ ಹತ್ಯೆ ವಿಚಾರವಾಗಿ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ.  ಅಪರಾಧಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಆದೇಶ ನೀಡಲಾಗಿದೆ. ಕೇರಳ ರಾಜ್ಯದ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿರಲಾಗಿದೆ. ಮಂಗಳೂರು ಹಾಗೂ ಕಾಸರಗೋಡು … Read more

25, 26 ಕ್ಕೆ ಸಿಎಂ ದೆಹಲಿ ಪ್ರವಾಸ – ಬಿಟ್ಟೂ ಬಿಡದೆ ಕಾಡುತ್ತಿರುವ ಸಂಪುಟ ವಿಸ್ತರಣೆ

ವರಿಷ್ಠರು ಪ್ರಸ್ತಾಪಿಸಿದರೆ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ  ಸುದ್ದಿ360, ಬೆಂಗಳೂರು:ಜು.21: ನೂತನ ರಾಷ್ಟ್ರಪತಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಜು. 24 ರಂದು ನವದೆಹಲಿಗೆ ತೆರಳಿತ್ತಿದ್ದೇನೆ. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಪ್ರಸ್ತಾಪಿಸಿದರೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಮಲೋಚನೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಪ್ರಧಾನಕಾರ್ಯದರ್ಶಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿ,  ವಿವಿಧ ಇಲಾಖೆಗಳ ನಿಯೋಗದೊಂದಿಗೆ ಜುಲೈ 24 ರಂದು ದೆಹಲಿ … Read more

‘ಸಿಎಂ ಆಗುವುದು ಡಿಕೆಶಿಯವರ ಬಹಳ ದಿನದ ಕನಸು – ಕೆಪಿಸಿಸಿ ಅಧ್ಯಕ್ಷರಾಗಿಯೇ ಸರಿಯಾಗಿ ಕೆಲಸ ಮಾಡಲು ಕಾಂಗ್ರೆಸ್ ಬಿಡುತ್ತಿಲ್ಲ’

ಸುದ್ದಿ360,ಮೈಸೂರು, ಜುಲೈ 20: ಡಿ.ಕೆ.ಶಿವಕುಮಾರ್ ಅವರಿಗೆ ತಾವು ಮುಖ್ಯಮಂತ್ರಿಯಾಗಬೇಕೆಂಬದು  ಬಹಳ ವರ್ಷಗಳ ಕನಸು. ಕೆಪಿಸಿಸಿ ಅಧ್ಯಕ್ಷರಾಗಿಯೇ ಸರಿಯಾಗಿ ಕೆಲಸ ಮಾಡಲು ಕಾಂಗ್ರೆಸ್ ಬಿಡುತ್ತಿಲ್ಲ. ಏನು ನಡೆಯುತ್ತಿದೆ ಎಂದು ನಾವು ಪ್ರತಿದಿನ ನೋಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮೈಸೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ‘ಮೊದಲು ಅವರ ತಟ್ಟೆಯಲ್ಲಿ ಏನಿದೆ ಎಂದು ನೋಡಿಕೊಳ್ಳಲಿ. ಆಮೇಲೆ ಮತ್ತೊಬ್ಬರ ತಟ್ಟೆಯಲ್ಲಿ ಇರುವುದನ್ನು ಗಮನಿಸಲಿ’ ಎಂದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ … Read more

ಕಬಿನಿ ಜಲಾಶಯ ಕ್ಕೆ ಮುಖ್ಯಮಂತ್ರಿ ಬಾಗಿನ

ಸುದ್ದಿ360 ಮೈಸೂರು,ಜುಲೈ 20: ಇಂದು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಕಬಿನಿ ಜಲಾಶಯದ ಬಳಿ ಆಯೋಜಿಸಿರುವ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿಯವರ ಪತ್ನಿ ಚೆನ್ನಮ್ಮ, ಜಲ ಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ್ ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್ ಟಿ ಸೋಮಶೇಖರ ಸೇರಿದಂತೆ ಇತರೆ ಮುಖಂಡರು ಉಪಸ್ಥಿತರಿದ್ದರು.

ನಿಗಮ ಮಂಡಳಿ: ಹೊಸಬರಿಗೆ ಅವಕಾಶ

ಸುದ್ದಿ360 ಮೈಸೂರು, ಜು.12: ನಿಗಮ ಮಂಡಳಿಗಳಿಗೆ ಹೊಸಬರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ನಿಗಮ ಮಂಡಳಿಗಳ ಕೋರ್ ಕಮಿಟಿಯಲ್ಲಿ  ಒಂದೂವರೆ ವರ್ಷ ಮೇಲ್ಪಟ್ಟವರನ್ನು ತೆಗೆದು ಹೊಸಬರಿಗೆ ಅವಕಾಶ ನೀಡಬೇಕು ಎನ್ನುವ ತೀರ್ಮಾನ ಆರು ತಿಂಗಳ ಹಿಂದೆಯೇ ಆಗಿದೆ. ಈ ನಿಟ್ಟಿನಲ್ಲಿ ಬೇರೆಯವರಿಗೂ ಅವಕಾಶ ಒದಗಿಸುವ ಕಾರ್ಯ ನಡೆಯುತ್ತಿದೆ ಎಂದಿದ್ದಾರೆ.

ಇತರ ಧರ್ಮಗಳನ್ನು ಗೌರವಿಸಿ ಸಮನ್ವಯ ಸಾಧಿಸಿದಾಗ ಮಾತ್ರ ಸಮಾಜದಲ್ಲಿ ಸಮಾನತೆ ಸಾಧ್ಯ

ಡಾ. ಎಲ್.ಶಿವಲಿಂಗಯ್ಯನವರ ‘ನುಡಿ-ನಮನ’ ಕಾರ್ಯಕ್ರಮದಲ್ಲಿ ಸಿಎಂ ಅಭಿಮತ ಸುದ್ದಿ360, ಬೆಂಗಳೂರು, ಜು.10: ಇತರ ಧರ್ಮಗಳನ್ನು ಗೌರವಿಸುವ ಮೂಲಕ ಸಮನ್ವಯ ಸಾಧಿಸಬೇಕಿದೆ. ಸಮಾಜದ ಎಲ್ಲ ವರ್ಗದ ಜನರೊಂದಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ ಸಮನ್ವಯ ಸಾಧಿಸಿದಾಗ ಮಾತ್ರ ಸಮಾಜದಲ್ಲಿ ಸಮಾನತೆಯ ಭಾವವನ್ನು ತರಲು ಸಾಧ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು  ಬೆಂಗಳೂರಿನಲ್ಲಿ ನಿವೃತ್ತ ಇಂಜಿನಿಯರ್ ಇನ್ ಚೀಫ್ ಹಾಗೂ ರಾಜ್ಯ ಸರ್ಕಾರದ ವಿಶೇಷ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ  ಡಾ. ಎಲ್.ಶಿವಲಿಂಗಯ್ಯನವರ ‘ನುಡಿ-ನಮನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. … Read more

ಶಾಲಾಮಕ್ಕಳಿಗೆ ಶೂ, ಸಾಕ್ಸ್  ಹಂಚಿಕೆಗೆ 132 ಕೋಟಿ ರೂ.ಗಳ ಅನುಮೋದನೆ: ಸಿಎಂ

ಸುದ್ದಿ360, ಬೆಂಗಳೂರು, ಜು. 08: ಶಾಲಾ ಮಕ್ಕಳಿಗೆ ಶೂ ಮತ್ತು ಸಾಕ್ಸ್  ಹಂಚಿಕೆಗೆ 132 ಕೋಟಿ ರೂ.ಗಳನ್ನು ಒದಗಿಸಿ ಅನುಮೋದನೆ ನೀಡಲಾಗಿದೆ ಎಂದು  ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸಮವಸ್ತ್ರದ ವಿಚಾರದಲ್ಲಿ ಸರ್ಕಾರ ಈಗಾಗಲೇ ಸಮವಸ್ತ್ರಕ್ಕೆ ಅನುಮೋದನೆ ನೀಡಿದೆ. ಸಮವಸ್ತ್ರ ತಯಾರಾಗಲು ಸ್ವಲ್ಪ ಸಮಯ ಹಿಡಿಯುತ್ತದೆ. ನಂತರ ವಿತರಣೆಯಾಗಲಿದೆ. ಈ ವಿಷಯದಲ್ಲಿ ಯಾವುದೇ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದರು. ಆಗ ಭಿಕ್ಷೆ ಬೇಡಿರುವ ಹಣ ಎಲ್ಲಿ? ಕೆಪಿಸಿಸಿ ಅಧ್ಯಕ್ಷ  … Read more

error: Content is protected !!