ದಾವಣಗೆರೆ ಎಐಸಿಸಿ ವೀಕ್ಷಕರಾಗಿ ಪ್ರಣಿತಿ ಸುಶೀಲ್‌ ಕುಮಾರ್‌ ಶಿಂಧೆ ನೇಮಕ

ಸುದ್ದಿ360 ದಾವಣಗೆರೆ, ಜ.10:  ಬರಲಿರುವವಿಧಾನಸಭೆ ಚುನಾವಣೆಗೆ ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಐಸಿಸಿ ವೀಕ್ಷಕರಾಗಿ ಪ್ರಣಿತಿ ಸುಶೀಲ್‌ ಕುಮಾರ್‌ ಶಿಂಧೆ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಟಿಕೆಟ್ ಹಂಚಿಕೆಯಿಂದ ಹಿಡಿದು ಚುನಾವಣೆ ಗೆಲ್ಲುವವರೆಗೂ ಎಲ್ಲಾ ಪ್ರಕ್ರಿಯೆಗಳಲ್ಲಿ ಇವರು ಸಕ್ರಿಯವಾಗಿ ಭಾಗವಹಿಸಲಿದ್ದಾರೆ. ಪ್ರಣಿತಿಸುಶೀಲ್ ಕುಮಾರ್ ಶಿಂಧೆ ಅವರು ಮಹಾರಾಷ್ಟ್ರದಲ್ಲಿ ಮೂರು ಬಾರಿ ಶಾಸಕರಾಗಿದ್ದರು. ಕೇಂದ್ರ ಮಾಜಿ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರ ಪುತ್ರಿಯಾಗಿದ್ದಾರೆ.

ಸಚಿವ ಎಸ್.ಟಿ. ಸೋಮಶೇಖರ್ ಹೇಳಿಕೆಗೆ ಕುಮಾರಣ್ಣ ತಿರುಗೇಟು

ಸುದ್ದಿ360 ಬೀದರ್ ಜ.6: ಸಚಿವ ಎಸ್.ಟಿ. ಸೋಮಶೇಖರ್ ಹೇಳಿಕೆಗೆ ಕುಮಾರಣ್ಣ ಇಂದು ಬೀದರ್ನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಅದರ ಒಂದು ವೀಡಿಯೋ ಕ್ಲಿಪ್ ಇಲ್ಲಿದೆ.

ಯಡಿಯೂರಪ್ಪನವರು ಕರ್ನಾಟಕದ ಸರ್ವೊಚ್ಚ ನಾಯಕರು – ಜೆಪಿ ನಡ್ಡಾ

ಸುದ್ದಿ360 ತುಮಕೂರು (ಶಿರಾ) ಜ.6:  80 ಕೋಟಿ ಜನರಿಗೆ ಉಚಿತ ರೇಷನ್ ಕೊಟ್ಟಿರುವ  ಬಿಜೆಪಿ ಸರ್ಕಾರ, ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಧ್ಯೇಯದೊಂದಿಗೆ ಕೆಲಸ ಮಾಡುತ್ತಿದೆ  ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು. ಶಿರಾ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು,  ಯಡಿಯೂರಪ್ಪನವರು ಕರ್ನಾಟಕದ ಸರ್ವೊಚ್ಚ ನಾಯಕರು. ಎನ್ ಡಿ ಎ ಸರ್ಕಾರ ಬಂದಾಗ ಯಡಿಯೂರಪ್ಪ ಹಾಗೂ ಬೊಮ್ಮಾಯಿ ಸೇರಿ‌ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಕಾಂಗ್ರೆಸ್ ನದ್ದು ಜಾತಿ ಜಾತಿ ಎಂದು ಒಡೆದು … Read more

‘ಎಲುಬಿಲ್ಲದ ನಾಲಗೆ ಹರಿಯಬಿಡಬೇಡಿ’

ರಾಜನಹಳ್ಳಿ ಶಿವಕುಮಾರ್ ಅವರಿಗೆ ವೀರಶೈವ ಮಹಾಸಭಾ ಗೌರವಯುತ ಸಲಹೆ – ಎಚ್ಚರಿಕೆ ಸುದ್ದಿ360 ದಾವಣಗೆರೆ ಜ.3: ರಾಜಕೀಯ ವ್ಯಕ್ತತ್ವ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ಮೂಳೆ ಇಲ್ಲದ ನಾಲಗೆಯನ್ನು ಹಗುರವಾಗಿ ಹರಿಯಬಿಡಬಾರದು, ಧರ್ಮದ ವಿಚಾರವಾಗಿ ಹಾಗೂ ಹಿರಿಯರ, ರಾಷ್ಟ್ರೀಯ ಅಧ್ಯಕ್ಷರ ವಿಚಾರವಾಗಿ ಮಾತನಾಡುವಾಗ ಪೈಲ್ವಾನ್ ಶಿವಕುಮಾರ್‍ರವರು ಎಚ್ಚರದಿಂದ ಮಾತನಾಡುವಂತೆ ವೀರಶೈವ ಮಹಾಸಭಾ ವತಿಯಿಂದ ಗೌರವಯುತವಾದ ಸಲಹೆ ಮತ್ತು ಎಚ್ಚರಿಕೆಯನ್ನು ನೀಡಬಯಸುವುದಾಗಿ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಉಪಾಧ್ಯಕ್ಷ ಕೆ.ಜಿ. ಶಿವಕುಮಾರ್ ಹೇಳಿದರು. ಜಿಲ್ಲಾ ವರದಿಗಾರರ ಕೂಟದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ … Read more

ಡಿ ಬಸವರಾಜ್‍ರಿಂದ  ಟಿಕೆಟ್‍ಗಾಗಿ ಮನವಿ

ಸುದ್ದಿ360 ದಾವಣಗೆರೆ, ಡಿ.30: ಇಂದು ದಾವಣಗೆರೆ ನಗರಕ್ಕೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರಿಗೆ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ವಕ್ತಾರರಾದ ಡಿ ಬಸವರಾಜ್ ರವರು ಮಾಯಕೊಂಡ ವಿಧಾನಸಭಾ ಕ್ಷೇತ್ರಕ್ಕೆ ತಮಗೆ ಕಾಂಗ್ರೆಸ್ ಪಕ್ಷದ  ಟಿಕೆಟ್ ನೀಡಬೇಕೆಂದು ಮನವಿ ಮಾಡಿದರು. ಕಳೆದ ನಾಲ್ಕು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತನಾಗಿ ನಿಷ್ಠೆಯಿಂದ ಪ್ರಮಾಣಿಕತೆಯಿಂದ ಸೇವೆ ಸಲ್ಲಿಸಿದ್ದು ಭೋವಿ ಸಮಾಜಕ್ಕೆ ಸೇರಿರುವ ತಮಗೆ ಕಾಂಗ್ರೆಸ್ ಟಿಕೆಟ್ ನೀಡುವ ಮೂಲಕ ಸಾಮಾಜಿಕ ನ್ಯಾಯ … Read more

‘ಅಮಿತ್ ಶಾ ಹತ್ರ ಏನು ಮಂತ್ರದಂಡ ಇಲ್ಲ – ನರೇಂದ್ರ ಮೋದಿ ಬಂದ್ರು ಇಲ್ಲಿ ಗೆಲ್ಲಲ್ಲ’

ಸುದ್ದಿ360 ದಾವಣಗೆರೆ, ಡಿ.30: ಅಮಿತ್ ಶಾ ರಾಜ್ಯಭೇಟಿ ಕುರಿತಂತೆ, ಅಮಿತ್ ಶಾ ಹತ್ರ ಏನು ಮಂತ್ರದಂಡ ಇದೆಯಾ, ಅವರು ಎಷ್ಟು ಬಾರಿ ಬಂದ್ರು ಅಷ್ಟೇ, ಅವರ ಜಾದೂ ಇಲ್ಲೆನು ನಡೆಯಲ್ಲ. ನರೇಂದ್ರ ಮೋದಿಯವರೇ ಬಂದ್ರೂ ಬಿಜೆಪಿ ಗೆಲ್ಲಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಮಧ್ಯಮದವರಿಗೆ ಪ್ರತಿಕ್ರಿಯಿಸಿದರು. ಅವರು ದಾವಣಗೆರೆಯಲ್ಲಿ ನಡೆಯುತ್ತಿರುವ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂದರ್ಭದಲ್ಲಿ ನಗರದ ಬಾಪೂಜಿ ಕಾಲೇಜು ಗ್ರೌಂಡ್‍ನಲ್ಲಿ ಸಿದ್ಧರಾಮಯ್ಯನವರು ಹೆಲೆಕಾಪ್ಟರ್‍ನಿಂದ ಇಳಿಯುತ್ತಿದ್ದ ಹಾಗೆ ಚಾಮುಂಡೇಶ್ವರಿ ತಾಯಿ … Read more

ಚುನಾವಣಾ ಗಿಮಿಕ್ ಗೆ ಮುಂದಾಗಿರುವ ಸರ್ಕಾರದಿಂದ ಮೀಸಲಾತಿ ಗೊಂದಲ : ಸಿದ್ಧರಾಮಯ್ಯ

ಸುದ್ದಿ360 ದಾವಣಗೆರೆ, ಡಿ.30: ಮೀಸಲಾತಿಯಲ್ಲಿ ರಾಜಕೀಯ ಗಿಮಿಕ್ ಮಾಡುತ್ತಿರುವ ಬಜೆಪಿಯ ಡಬ್ಬಲ್ ಇಂಜಿನ್ ಸರ್ಕಾರ ಗೊಂದಲದಲ್ಲಿದೆ. ಚುನಾವಣೆ ಸಮೀಪಿಸುತ್ತಿದ್ದಂತೆ ಮತವೊಲಿಕೆಯ ರಾಜಕಾರಣ ಮಾಡುತ್ತಿದೆ ಎಂದು ಮೀಸಲಾತಿ ಕುರಿತು ಮಾಜಿ ಮುಖ್ಯಮಂತ್ರಿ ಮತ್ತು ವಿಧಾನಸಭೆ ವಿರೋಧಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು. ಅವರು ದಾವಣಗೆರೆಯಲ್ಲಿ ನಡೆಯುತ್ತಿರುವ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಿಸರ್ವೇಷನ್ 50 ಪರ್ಸೆಂಟ್‍ಗಿಂತ ಹೆಚ್ಚಾಗಬಾರದು ಎಂದು 1992ರಲ್ಲಿ ಸುಪ್ರೀಂಕೋರ್ಟ್ ಬೆಂಚ್ ಬಹಳ ಸ್ಪಷ್ಟವಾಗಿ ಹೇಳಿದೆ.  ಆದರೆ ಈ ಮೊದಲು … Read more

‘ಹಳೇ ಪಿಂಚಣಿ ಸಾಧ್ಯವಿಲ್ಲ – ಕೆಲಸಕ್ಕೆ ಸೇರುವಾಗಲೇ ಇದಕ್ಕೆ ಒಪ್ಪಿದ್ದೀರಿ’

ಬೆಳಗಾವಿ ಅಧಿವೇಶನದ ಕೊನೆಯ ದಿನದಲ್ಲಿ ನಡೆದ ಚರ್ಚೆಯಲ್ಲಿ ಆಡಳಿತ ಪಕ್ಷಗಳ ಸದಸ್ಯರು ಸೇರಿದಂತೆ ಹಲವರು ಸಭಾತ್ಯಾಗ

ನಾಳೆ ದಾವಣಗೆರೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ನಗರದಲ್ಲಿ ಶ್ರೀ ಎಲ್.ಬಿ.ಕೆ. ಕಲ್ಯಾಣ ಟ್ರಸ್ಟ್ ವತಿಯಿಂದ 7 ನೇ ಬಾರಿಗೆ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮವನ್ನು ಡಿ.30ರಂದು ಬೆಳಿಗ್ಗೆ11 ಗಂಟೆಗೆ ನಗರದ ಶ್ರೀ ರಾಜವೀರ ಮದಕರಿ ನಾಯಕ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ. ಹರಿಹರ ರಾಜನಹಳ್ಳಿ ವಾಲ್ಮೀಕಿ ಸಂಸ್ಥಾನದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ, ಕಾಗಿನೆಲೆ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಕೂಡಲಸಂಗಮದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ, ಚಿತ್ರದುರ್ಗದ ಶ್ರೀ ಮಾದರ ಚನ್ನಯ್ಯ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರ ಸಾನಿಧ್ಯದಲ್ಲಿ ಜರುಗುವ ವಿವಾಹ ಮಹೋತ್ಸವ ಕಾರ್ಯಕ್ರಮವನ್ನು ಮಾಜಿ … Read more

ಜಿಂಕೆ ಮರಿ ಓಡ್ತಾಯ್ತೆ ನೋಡ್ಲಾ ಮಗಾ. . . ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಅಕ್ರಮ ವನ್ಯಜೀವಿ ಸಾಕಾಣಿಕೆ?

ಆಡಳಿತ ಪಕ್ಷಕ್ಕೆ ನುಂಗಲಾರದ ತುತ್ತಾಯಿತೆ. . . !? ಸುದ್ದಿ360 ದಾವಣಗೆರೆ: ಇಲ್ಲಿ ಯಾರನ್ನಾದರೂ ರಾಜಕೀಯ ಕುರಿತು ಮಾತಿಗೆಳೆದರೆ, ಜಿಂಕೆ ನಿಮ್ಮ ಕಣ್ಣಮುಂದೆ ಹಾದು ಹೋಗುತ್ತದೆ. ಅಷ್ಟೇ ಅಲ್ಲ ಕೃಷ್ಣಮೃಗ, ಕಾಡು ಹಂದಿ, ನರಿ, ಮುಂಗಸಿ ಇವುಗಳೂ ಕೂಡ ನಿಮ್ಮ ಕಣ್ಣಮುಂದೆ ಬರದೇ ಇರವು. ಅರೆರೆ ರಾಜಕೀಯಕ್ಕು ಈ ವನ್ಯಜೀವಿಗಳಿಗೂ ಏನು ಸಂಬಂಧ ಅಂತೀರಾ . . .? ನಗರದ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ವನ್ಯಜೀವಿಗಳು ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ  ಕಳೆದ ಒಂದು ವಾರದಿಂದ ದಾವಣಗೆರೆಯಲ್ಲಿ … Read more

error: Content is protected !!