ಬೇಡಿಕೆ ಈಡೇರಿಕೆಗೆ ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿ ಪ್ರತಿಭಟನೆ-ಮನವಿ
ಸುದ್ದಿ360 ದಾವಣಗೆರೆ ಜ.11: ಹಲವಾರು ವರ್ಷಗಳಿಂದ ನಮ್ಮ ಬೇಡಿಕೆಗಳು ಬೇಡಿಕೆಗಳಾಗೆ ಉಳಿದಿವೆ, ನಮ್ಮ ಬೇಡಿಕೆಗಳ ಕುರಿತಾಗಿ ಚರ್ಚಿಸಲು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಆಯುಕ್ತರ ನೇತೃತ್ವದಲ್ಲಿ ತಕ್ಷಣ ಜಂಟಿ ಸಭೆ ಕರೆದು ಕ್ರಮ ಕೈಗೊಳ್ಳಬೇಕು ಎಂಬುದಾಗಿ ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿ ಆಗ್ರಹಿಸಿದೆ, ಮೂಲಭೂತ ಸೌಕರ್ಯಗಳೊಂದಿಗೆ ವಸತಿ/ನಿವೇಶನ ರಹಿತರಿಗೆ ವಸತಿ/ನಿವೇಶನ ಕಲ್ಪಿಸಲು ಸಿಪಿಐ(ಎಂ) ಪಕ್ಷದ ನೇತೃತ್ವದಲ್ಲಿ ನಿಟುವಳ್ಳಿ ದುರ್ಗಾಂಬಿಕಾ ದೇವಸ್ಥಾನದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಮಹಾನಗರ ಪಾಲಿಕೆ ಆವರಣ ತಲುಪಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದರು. … Read more