ದಾವಣಗೆರೆ: ಮಾ.18ಕ್ಕೆ ಅಪ್ಪು ಮ್ಯೂಸಿಕಲ್ ನೈಟ್ – ಉಚಿತ ಪ್ರವೇಶ

ಪುನೀತ್ ರಾಜ್‍ಕುಮಾರ್  ಹುಟ್ಟು ಹಬ್ಬದ ಪ್ರಯುಕ್ತ ಅಪ್ಪು ವೈಭವ ಸುದ್ದಿ360 ದಾವಣಗೆರೆ, ಮಾ.17: ಶ್ರೀಹರ ಮ್ಯೂಸಿಕಲ್ ವರ್ಲ್ಡ್ ದಾವಣಗೆರೆ ಹಾಗೂ ಶ್ರೀನಿವಾಸ ದಾಸಕರಿಯಪ್ಪ ಇವರ ಸಹಯೋಗದೊಂದಿಗೆ ನಗರದ ಜಯದೇವ ವೃತ್ತದ ಬಳಿ ಇರುವ ಶಿವಯೋಗ ಮಂದಿರದಲ್ಲಿ ಮಾರ್ಚ್ 18ರಂದು ಸಂಜೆ 5ಕ್ಕೆ  ‘ಅಪ್ಪು ಮ್ಯೂಸಿಕಲ್ ನೈಟ್’ ಕಾರ್ಯಕ್ರಮ ನಡೆಯಲಿದೆ ಎಂದು ಸಂಗೀತ ನಿರ್ದೇಶಕ, ಗಾಯಕ ಸುನೀಲ್ ಮೈರಾ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪುನೀತ್ ರಾಜ್‍ಕುಮಾರ್ ಹುಟ್ಟು ಹಬ್ಬದ ಪ್ರಯುಕ್ತ ಅಪ್ಪು ವೈಭವ ಕಾರ್ಯಕ್ರಮ ರೂಪಿಸಲಾಗಿದೆ. ಅಂದು … Read more

ಕೆಆರ್ ಎಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ

ಸ್ವಚ್ಛ, ಸದೃಢ, ಸಮೃದ್ಧ, ಸಾಂಸ್ಕೃತಿಕ, ಹಸಿರು ಕರ್ನಾಟಕಕ್ಕಾಗಿ ನವ ಸೂತ್ರಗಳು ಸುದ್ದಿ360 ದಾವಣಗೆರೆ, ಮಾ.17: ಮುಂಬರುವ ವಿಧಾನಸಭಾ ಚುನಾವಣೆ ಪ್ರಯುಕ್ತ ಕೆ ಆರ್ ಎಸ್ ಪಕ್ಷವು  ಸ್ವಚ್ಛ, ಸದೃಢ, ಸಮೃದ್ಧ, ಸಾಂಸ್ಕೃತಿಕ, ಹಸಿರು ಕರ್ನಾಟಕಕ್ಕಾಗಿ ನವ ಸೂತ್ರಗಳನ್ನೊಳಗೊಂಡ ಪ್ರಣಾಳಿಕೆ  ಸಿದ್ಧಪಡಿಸಿ ಬಿಡುಗಡೆ ಮಾಡಲಾಗಿದೆ ಎಂದು ಕೆಅರ್ ಎಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ.ಮಲ್ಲಪ್ಪ ಹಾಗೂ ಕಾನೂನು ಘಟಕದ ಅಧ್ಯಕ್ಷ ಬಿ.ಸೋಮಶೇಖರ್ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರಮುಕ್ತ ದಕ್ಷ ಆಡಳಿತ, ಆರೋಗ್ಯ, ಶಿಕ್ಷಣ, ಕೃಷಿ, ಮಹಿಳೆ ಮತ್ತು … Read more

ಮಾರ್ಚ್ 19ಕ್ಕೆ ‘ಸಂಪಾದನಾ ಸೂಕ್ತಿಗಳು’ ಕೃತಿ ಲೋಕಾರ್ಪಣೆ

ಡಿ.ಜಿ.ರೇವಣಸಿದ್ದಪ್ಪ ಅವರ ಚೊಚ್ಚಲ ಕೃತಿ ಸುದ್ದಿ360 ದಾವಣಗೆರೆ ಮಾ.17: ಹಿರಿಯ ಪ್ರಯೋಗ ಶಾಲಾ ತಂತ್ರಜ್ಞರಾಗಿ ಸೇವೆ ಸಲ್ಲಿಸಿ ನಿವೃತ್ತಗೊಂಡಿರುವ ಡಿ.ಜಿ.ರೇವಣಸಿದ್ದಪ್ಪ ಅವರ ಚೊಚ್ಚಲ ಕೃತಿ ‘ಸಂಪಾದನಾ ಸೂಕ್ತಿಗಳು’ ಬಿಡುಗಡೆ ಸಮಾರಂಭ ಮಾ. 19 ರಂದು ನಗರದ ಕುವೆಂಪು ಕನ್ನಡ ಭವನದಲ್ಲಿ ನಡೆಯಲಿದೆ ಎಂದು ಸಾಹಿತಿ ಓಂಕಾರಯ್ಯ ತವನಿಧಿ ತಿಳಿಸಿದರು. ಸುದ್ದಿಗೋಷ್ಠಿ‌ಯಲ್ಲಿ ಮಾತನಾಡಿದ ಅವರು, ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು  ಮತ್ತು ರೇಣುಕಾ ಪ್ರಕಾಶನ ಇವರ ಸಹಯೋಗದಲ್ಲಿ ಕೃತಿ ಲೋಕಾರ್ಪಣಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಡಿ.ಜಿ.ರೇವಣಸಿದ್ದಪ್ಪ ಸಾವಯವ ಕೃಷಿಕರಾಗಿದ್ದು, … Read more

ಮಾ.17 – ಅಪ್ಪು ಹುಟ್ಟುಹಬ್ಬ: ದುರ್ಗಾದೇವಿಗೆ ವಿಶೇಷ ಪೂಜೆ

ಡಾ. ಪುನೀತ್ ರಾಜ್‌ಕುಮಾರ್ ಪುತ್ಥಳಿಗಾಗಿ ಮಹಾನಗರ ಪಾಲಿಕೆಗೆ ಮನವಿ ಸುದ್ದಿ360 ದಾವನಗೆರೆ ಮಾ. 16: ಕರ್ನಾಟಕ ರತ್ನ ಪುರಸ್ಕೃತ, ಅಭಿಮಾನಿಗಳ ಮನದಲ್ಲಿ ಸದಾ ನೆಲೆಸಿರುವ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬದ ಪ್ರಯುಕ್ತ ಅಪ್ಪು ಅಭಿಮಾನಿಗಳ ಬಳಗದಿಂದ ಮಾ.17ರಂದು ದುರ್ಗಾಂಬಿಕ ದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸೇರಿದಂತೆ ಹಲವು ಕರ‍್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಅಪ್ಪು ಅಭಿಮಾನಿ ಶಂಕರ್ ಶಿರೇಕರ್ ಪವರ್ ತಿಳಿಸಿದ್ದಾರೆ. ಅಂದು ಬೆಳಿಗ್ಗೆ 8 ಗಂಟೆಗೆ ದುರ್ಗಾದೇವಿಗೆ ಪೂಜೆ ಸಲ್ಲಿಸಿ, ನಂತರ 11 ಗಂಟೆಗೆ ಅಭಿಮಾನಿಗಳೆಲ್ಲರೂ … Read more

ಬೆಂಗಳೂರು- ಮೈಸೂರು ಟೋಲ್ – ಡಿ.ಕೆ.ಶಿ ರಾಜಕಾರಣ: ಸಿಎಂ ಬೊಮ್ಮಾಯಿ

ಜನಸಾಮಾನ್ಯರ ತಕರಾರಿಲ್ಲ – ಬಹಳಷ್ಟು ಸೇವೆ ಸರ್ವಿಸ್ ರಸ್ತೆಯಲ್ಲೇ ಲಭ್ಯ – ಅಲ್ಲೆಲ್ಲೂ ಟೋಲ್ ಇಲ್ಲ ಬೆಂಗಳೂರು, ಮಾರ್ಚ್ 16 : ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಟೋಲ್ ಸಂಗ್ರಹದ ಬಗ್ಗೆ ತಕರಾರು ಜನಸಾಮಾನ್ಯರದ್ದಲ್ಲ, ಕೆಪಿಸಿಸಿ  ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಜಕಾರಣ ಮಾಡುತ್ತಿದ್ದಾರೆ. ಅವರು ಬಳಸುವ ಭಾಷೆ, ನಡೆದುಕೊಂಡ  ರೀತಿ ಯಾವುದೇ ಕನ್ನಡಿಗರಿಗೆ ಶೋಭೆ ತರುವಂಥದ್ದಲ್ಲ ಎಂದು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಟೋಲ್ ಸಂಗ್ರಹದ ಬಗ್ಗೆ ತಮ್ಮ … Read more

ಹಂದಿ ಅಣ್ಣಿ ಕೊಲೆ ಪ್ರತಿಕಾರ – ಮುಖ್ಯಮಂತ್ರಿ ತವರಲ್ಲಿ ಆರೋಪಿಗಳು ಸರಂಡರ್

ಸುದ್ದಿ360 ಮಾ.16: ಜಿಲ್ಲೆಯ ನ್ಯಾಮತಿ ತಾಲೂಕು ಗೋವಿನಾಕೋವಿ  ಗ್ರಾಮದ ಹೊನ್ನಾಳಿ ಶಿವಮೊಗ್ಗ ರಸ್ತೆಯಲ್ಲಿ ನಿನ್ನೆ ಬುಧವಾರ ನಡೆದ  ರೌಡಿಶೀಟರ್‍ನ ಬರ್ಬರ ಹತ್ಯೆ ಶಿವಮೊಗ್ಗದಲ್ಲಿ ಈ ಹಿಂದೆ ಹತ್ಯೆಗೊಳಗಾಗಿದ್ದ ಹಂದಿ ಅಣ್ಣಿ ಪ್ರಕರಣದ ಪ್ರತಿಕಾರ ಎಂದು ಹೇಳಲಾಗುತ್ತಿದ್ದು, ಕೊಲೆ ಆರೋಪಿಗಳು ಹಾವೇರಿ ಜಿಲ್ಲೆ ಶಿಗ್ಗಾಂವ್ ಪೊಲೀಸರಿಗೆ ಶರಣಾಗಿದ್ದಾರೆ. ಹರಿಹರ ತಾಲೂಕು ಬಾನೊಳ್ಳಿ ಗ್ರಾಮದ ಮಧು ಮತ್ತು ಆಂಜನೇಯ ಹಂದಿ ಅಣ್ಣಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ನ್ಯಾಯಾಲಯಕ್ಕೆ ಹಾಜರಾಗಿ ವಾಪಸ್ ತಮ್ಮ ಗ್ರಾಮಕ್ಕೆ ತೆರಳುವ ವೇಳೆ ಈ ಬರ್ಬರ … Read more

State level convention of Aam Aadmi Party in Davangere ಮಾ.4- ದಾವಣಗೆರೆಯಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಮಟ್ಟದ ಸಮಾವೇಶ

ಅರವಿಂದ ಕೇಜ್ರಿವಾಲ್ , ಭಗವಂತ್ ಸಿಂಗ್ ಮಾನ್ ರಿಂದ ಕರ್ನಾಟಕದಲ್ಲಿ ಚುನಾವಣಾ ಪ್ರಚಾರಕ್ಕೆ ಅಧಿಕೃತ ಚಾಲನೆ ಸುದ್ದಿ360 ದಾವಣಗೆರೆ ಮಾ.2: ಆಮ್ ಆದ್ಮಿ ಪಕ್ಷದ ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ, ಹೊಸದಿಲ್ಲಿ ಮುಖ್ಯಮಂತ್ರಿಯೂ ಆದ ಅರವಿಂದ ಕೇಜ್ರಿವಾಲ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಇವರು ಮದ್ಯ ಕರ್ನಾಟಕ ದಾವಣಗೆರೆಯಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ಸಮಾವೇಶದ ಮೂಲಕ ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗುತ್ತಿದೆ ಎಂದು ಎಎಪಿ ರಾಜ್ಯ ಉಪಾಧ್ಯಕ್ಷ ವಿಜಯ್ ಶರ್ಮಾ … Read more

ಜಿಎಂಐಟಿಯ ಹಲವು ವಿದ್ಯಾರ್ಥಿಗಳು ವಿವಿಧ ಕಂಪನಿಗಳಿಗೆ ಆಯ್ಕೆ

ಜಿಎಂಐಟಿ ವಿದ್ಯಾರ್ಥಿಗಳಿಗೆ ಹಲವು ಪ್ರತಿಷ್ಠಿತ ಕಂಪನಿಗಳಿಂದ ಸಂದರ್ಶನ ಪ್ರಕ್ರಿಯೆ ದಾವಣಗೆರೆ ಮಾ.2: ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ ಇಂಜಿನಿಯರಿಂಗ್ ಮತ್ತು ಎಂಬಿಎ ವಿಭಾಗದ ಹಲವು ವಿದ್ಯಾರ್ಥಿಗಳು ವಿವಿಧ ಪ್ರತಿಷ್ಠಿತ ಕಂಪನಿಗಳಿಗೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ ಸಂಜಯ್ ಪಾಂಡೆ ಎಂಬಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇತ್ತೀಚೆಗೆ ಪ್ರತಿಷ್ಠಿತ ಕಂಪನಿಗಳಾದ ಮರ್ಸಿ ಡೇಸ್ ಬೆಂಜ್, ಬೈಜೂಸ್, ಇಂಟೆಲಿಪಾತ್ ಟೆಕ್ನಾಲಜಿ ಸರ್ವಿಸಸ್, ಡಿ ಮಾರ್ಟ್, ಐಸಿಐಸಿಐ ಬ್ಯಾಂಕ್, ಹೆಚ್ ಡಿ ಎಫ್ ಸಿ ಬ್ಯಾಂಕ್, ಸ್ಟ್ರಾಟೊಜೇಂಟ್ … Read more

ದಾವಣಗೆರೆಯ ಶಿವಗಂಗೋತ್ರಿಯಲ್ಲಿ ಘಟಿಕೋತ್ಸವ: ವಿದ್ಯಾರ್ಥಿನಿಯರದೇ ಮೇಲುಗೈ

81ಸ್ವರ್ಣಪದಕಗಳನ್ನು ಹಂಚಿಕೊಂಡ 45 ವಿದ್ಯಾರ್ಥಿಗಳು – 3 ಗೌರವ ಡಾಕ್ಟರೇಟ್ ಸುದ್ದಿ360 ದಾವಣಗೆರೆ ಫೆ.28:  ದಾವಣಗೆರೆ ವಿಶ್ವ ವಿದ್ಯಾಲಯ ಶಿವಗಂಗೋತ್ರಿಯ ಜ್ಞಾನಸೌಧದಲ್ಲಿ ಇಂದು ಹತ್ತನೇ ಘಟಿಕೋತ್ಸವ ನಡೆಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ 81 ವಿದ್ಯಾರ್ಥಿಗಳು ಸ್ವರ್ಣ ಪದಕದೊಂದಿಗೆ ತೇರ್ಗಡೆ ಹೊಂದಿದರು. ಇದೇ ವೇಳೆ ಟಿ.ಎಂ. ಚಂದ್ರಶೇಖರಯ್ಯ, ಅಥಣಿ ಎಸ್ ವೀರಣ್ಣ ಹಾಗೂ ಮರಣೋತ್ತರವಾಗಿ ಎಂ.ಎಸ್. ಶಿವಣ್ಣ ಅವರಿಗೆ ಗೌರವ ಡಾಕ್ಟರೇಟ್​ ಪ್ರದಾನ ಮಾಡಲಾಯಿತು. ಒಟ್ಟು 81 ಸ್ವರ್ಣ ಪದಕಗಳಲ್ಲಿ ಸ್ನಾತಕ … Read more

ಹಳೇ ವೈಷಮ್ಯ: ವ್ಯಕ್ತಿಕೊಲೆ

ಸುದ್ದಿ360 ದಾವಣಗೆರೆ.ಫೆ.28: ಇಲ್ಲಿನ ಕಬ್ಬೂರು ಬಸಪ್ಪ‌ನಗರದಲ್ಲಿ ಇಬ್ಬರ ನಡುವಿನ ಜಗಳ ಒಬ್ಬನ ಕೊಲೆಯಾಗುವ ಮೂಲಕ ಅಂತ್ಯ ಕಂಡಿದೆ. ಪ್ರಶಾಂತ (29) ಕೊಲೆಗೀಡಾದ ವ್ಯಕ್ತಿಯಾಗಿದ್ದು, ಇವರ ನಡುವಿನ ಜಗಳಕ್ಕೆ ಹಳೇ ವೈಷಮ್ಯ ಕಾರಣ ಎನ್ನಲಾಗಿದೆ. ಜಗಳದ ವೇಳೆ ಕಟ್ಟಿಗೆಯಿಂದ ದಾಳಿ ಮಾಡಿದ ಪರಿಣಾಮ ತಲೆಗೆ ತೀವ್ರ ಪೆಟ್ಟಾಗಿ ಪ್ರಶಾಂತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಕಬ್ಬೂರು ಬಸಪ್ಪ ನಗರದ ಎಲವಟ್ಟಿ ರೈಸ್ ಮಿಲ್ ಬಳಿ ಪ್ರಶಾಂತ್ ಶವ ಪತ್ತೆ‌ಯಾಗಿದೆ. ಆರ್ ಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ‌ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ  ನಗರ … Read more

error: Content is protected !!