ಜಿಟಿಟಿ ಫೌಂಡೇಶನ್ ವತಿಯಿಂದ ಜಿಎಂಐಟಿ ಪ್ಲೇಸ್ಮೆಂಟ್ ಅಧಿಕಾರಿಗೆ ಅಭಿನಂದನೆ ಮತ್ತು ಗೌರವ ಸೂಚಕ ಸನ್ಮಾನ

ಸುದ್ದಿ360, ದಾವಣಗೆರೆ, ಜು.21: ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇತ್ತೀಚಿಗೆ ನಡೆದ ಕಾರ್ಯಕ್ರಮದಲ್ಲಿ ಪುಣೆ ಮೂಲದ ಗ್ಲೋಬಲ್ ಟ್ಯಾಲೆಂಟ್ ಟ್ರ್ಯಾಕ್ ಫೌಂಡೇಶನ್ ಸಂಸ್ಥೆಯ ವತಿಯಿಂದ ಜಿಎಂಐಟಿ ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ತೇಜಸ್ವಿ ಕಟ್ಟಿಮನಿ ಟಿ ಆರ್ ರವರಿಗೆ ಅಭಿನಂದನೆ ಮತ್ತು ಗೌರವಸೂಚಕ ಸನ್ಮಾನವನ್ನು ಏರ್ಪಡಿಸಲಾಗಿತ್ತು. ಜಿ ಟಿ ಟಿ ಫೌಂಡೇಶನ್ ಸಂಸ್ಥೆಯು ಒಂದು  ಎನ್ ಜಿ ಓ ಲಾಭರಹಿತ ಸಂಸ್ಥೆಯಾಗಿದ್ದು, ಸಮಾಜದಲ್ಲಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ತರಬೇತಿ ನೀಡುವುದರ ಜೊತೆಗೆ ಉದ್ಯೋಗ ಕೊಡಿಸುವ ಜವಾಬ್ದಾರಿಯನ್ನೂ … Read more

ಜಿಎಂಐಟಿ ಯಲ್ಲಿ ‘ಮಲ್ಲಿಕಾ-22’: ಕ್ರೀಡೆ ಮತ್ತು ಸಾಂಸ್ಕೃತಿಕ ಉತ್ಸವ

ಸುದ್ದಿ360, ದಾವಣಗೆರೆ, ಜು.21: ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇದೇ ಜು. 22 ಮತ್ತು 23 ರಂದು ಕಾಲೇಜಿನ ವಾರ್ಷಿಕ ಸಮಾರಂಭ ‘ಮಲ್ಲಿಕಾ-22’ ಕ್ರೀಡೆ ಮತ್ತು ಸಾಂಸ್ಕೃತಿಕ ಉತ್ಸವವನ್ನು ಬಹಳ ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಜು. 22ರಂದು ಬೆಳಿಗ್ಗೆ 9:00 ರಿಂದ  ವಿವಿಧ ಸಾಂಸ್ಕೃತಿಕ ಚಟುವಟಿಕೆಗಳು ನಡೆಯಲಿದ್ದು, ಸಾಯಂಕಾಲ ಕ್ರೀಡಾ ಚಟುವಟಿಕೆಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಗುವುದು. ಶ್ರೀಶೈಲ ಎಜುಕೇಶನಲ್ ಟ್ರಸ್ಟ್ … Read more

ಇದೆ ವರ್ಷ ಕಬಿನಿ ಜಲಾಶಯ ಉದ್ಯಾನವನ ಕಾಮಗಾರಿ ಪ್ರಾರಂಭ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360,ಮೈಸೂರು, ಜುಲೈ 20: ಇದೇ ವರ್ಷ ಕಬಿನಿ ಜಲಾಶಯದ ಉದ್ಯಾನವನ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆಮಾಡಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಕಬಿನಿ ಜಲಾಶಯದ  ಉದ್ಯಾನವನವನ್ನು ಸರ್ಕಾರ ಮಾಡಬೇಕೋ ಅಥವಾ ಪಿಪಿಪಿ ಮಾದರಿಯಲ್ಲಿ ಮಾಡಬೇಕೋ ಎಂಬ ಗೊಂದಲದಲ್ಲಿದೆ.  ಗೊಂದಲ ವನ್ನು ಆದಷ್ಟು ಬೇಗನೇ ನಿವಾರಿಸಿ ಕಾಮವಾರಿಯನ್ನು ಕೈಗೊಳ್ಳಲಾಗುವುದು ಎಂದರು. ಹೆಚ್.ಡಿ.ಕೋಟೆಗೆ ವಿಶೇಷ ಕಾರ್ಯಕ್ರಮ ಹೆಚ್.ಡಿ.ಕೋಟೆ ತಾಲ್ಲೂಕು ಹಿಂದುಳಿದ ತಾಲ್ಲೂಕು ಎಂದು ನಂಜುಂಡಪ್ಪ ವರದಿಯಲ್ಲಿ ಉಲ್ಲೇಖಿಸಲಾಗಿದೆ. … Read more

ಜಿಎಂಐಟಿ ಯಲ್ಲಿ ಯಶಸ್ವೀ ‘ಆನ್ ಕ್ಯಾಂಪಸ್ ಎಂಪ್ಲಾಯ್ಮೆಂಟ್ ಆಫರ್ಸ್ ಸೆಲೆಬ್ರೇಶನ್ ಡೇ’

ಕಂಪನಿಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಡೆದ ಸನ್ಮಾನ ಕಾರ್ಯಕ್ರಮ ಸುದ್ದಿ360,ದಾವಣಗೆರೆ, ಜುಲೈ 20: ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜು.16ರಂದು ನಡೆದ ಆನ್ ಕ್ಯಾಂಪಸ್ ಎಂಪ್ಲಾಯ್ಮೆಂಟ್ ಆಫರ್ಸ್ ಸೆಲೆಬ್ರೇಶನ್ ಡೇ ಬಹಳ ಅದ್ದೂರಿಯಿಂದ ಆಚರಿಸಲ್ಪಟ್ಟಿತು. ಈ ಕಾರ್ಯಕ್ರಮವನ್ನು  ಪುಣೆ ಮೂಲದ ಗ್ಲೋಬಲ್ ಟ್ಯಾಲೆಂಟ್ ಟ್ರ್ಯಾಕ್ ಫೌಂಡೇಶನ್ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು. ಜಿಎಂಐಟಿ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 783 ಆಫರ್ಸ್ ಸ್ವೀಕರಿಸಿದ್ದು, ವಿದ್ಯಾರ್ಥಿಗಳು ಪ್ರತಿಷ್ಠಿತ ಕಂಪನಿಗಳಿಗೆ ಆಯ್ಕೆಯಾಗಿದ್ದಾರೆ. ಇದೇ ಮೊದಲ ಬಾರಿಗೆ ಜಿಎಂಐಟಿ ಸಂಸ್ಥೆಯು ಜಿಟಿಟಿ ಎಫ್ ಸಂಸ್ಥೆಯೊಡನೆ … Read more

ದೇಶದ ಪ್ರತಿ ಪ್ರಜೆ “ನನ್ನ ಮತ ಮಾರಾಟಕ್ಕಿಲ್ಲ” ಎಂದು ಜನಾಂದೋಲನ ನಡೆಸಬೇಕು

ಚುನಾವಣಾ ಸುಧಾರಣಾ ಕ್ರಮಗಳ ಕುರಿತ ಸಂವಾದ ಕಾರ್ಯಕ್ರಮದಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿಮತ ಸುದ್ದಿ360, ದಾವಣಗೆರೆ, ಜು.19: ಚುನಾವಣೆಗಳಲ್ಲಿ ದೇಶದ ಪ್ರತಿ ಪ್ರಜೆಯೂ ನನ್ನ ಮತ ಮಾರಾಟಕ್ಕಿಲ್ಲ ಎಂದು ಮುಕ್ತ, ನಿರ್ಭೀತ, ನ್ಯಾಯಸಮ್ಮತ ಚುನಾವಣೆಗೆ ಆಗ್ರಹಿಸುವ ಜನಾಂದೋಲನ ರೂಪಿಸುವ ದಿಕ್ಕಿನಲ್ಲಿ ಆಲೋಚಿಸಬೇಕಾಗಿದೆ ಎಂದು ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹೇಳಿದರು. ಮಂಗಳವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಚುನಾವಣಾ ಸುಧಾರಣಾ ಕ್ರಮಗಳ ಕುರಿತು ಸಂವಾದ ಕಾರ್ಯಕ್ರಮ’ ಉದ್ಘಾಟಿಸಿ ಅವರು ಮಾತನಾಡಿದರು. … Read more

ರಸ್ತೆಯಲ್ಲಿ ಅಪಾಯಕಾರಿ ಗುಂಡಿ – ಬರೀ ಆರೋಪ ಮಾಡದೆ ಪರಿಸ್ಥಿತಿಯ ಹತೋಟಿಗೆ ಮುಂದಾದ ವಿಪಕ್ಷ ನಾಯಕ ಗಡಿಗುಡಾಳ್ ಮಂಜುನಾಥ್

ಸದಾ ಟೆಂಡರ್ ಪ್ರಕ್ರಿಯೆ, ಯೋಜನೆ ಸಿದ್ಧತೆಯ ಹಾರಿಕೆ ಉತ್ತರ ನೀಡುವ ಪಾಲಿಕೆ ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ ಸುದ್ದಿ360, ದಾವಣಗೆರೆ, ಜು.19: ದಾವಣಗೆರೆ ಮಹಾನಗರ ಪಾಲಿಕೆ ಕುರಿತು ವಿಪಕ್ಷಗಳ ಆರೋಪಕ್ಕೆ ಪುಷ್ಠಿ ನೀಡುವ ಸಂಗತಿಯೊಂದನ್ನು ಸ್ಥಳೀಯ ನಾಗರೀಕರು ಬಯಲಿಗೆಳೆದಿದ್ದಾರೆ. ನರಕಸದೃಶ ಗುಂಡಿಗಳಿಂದ ಬೇಸತ್ತ ಜನತೆ ಪಾಲಿಕೆ ನೀಡುವ ಪಾಲಿಕೆ ವಿರುದ್ಧ ಹರಿಹಾಯ್ದಿದ್ದಾರೆ. ಮಹಾನಗರ ಪಾಲಿಕೆ ದಿವಾಳಿಯಾಗಿದೆ. ಕಾಮಗಾರಿಗಳ ಅನುಷ್ಠಾನದಲ್ಲಿ ವಿಳಂಬ. ಸಣ್ಣ ಪುಟ್ಟ ರಿಪೇರಿ ಕೆಲಸಗಳೂ ಪಾಲಿಕೆಯಿಂದ ಆಗುತ್ತಿಲ್ಲ. ಎಲ್ಲದಕ್ಕೂ ಆಡಳಿತ ಪಕ್ಷ ಬಿಜೆಪಿಯಿಂದ ಬರೀ ಹಾರಿಕೆಯ … Read more

ಎಸ್.ಪಿ.ಇ. ಕಾಯಿದೆ ಜಾರಿಗೆ ಕರ್ನಾಟಕ ರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘ ಒತ್ತಾಯ – ಮನವಿ

ಸುದ್ದಿ360, ದಾವಣಗೆರೆ, ಜು.19: ಔಷಧ ಮಾರಾಟ ಪ್ರತಿನಿಧಿಗಳ ರಕ್ಷಣೆಗೆ ಇರುವ ಎಸ್.ಪಿ.ಇ. ಕಾಯಿದೆಯನ್ನ ಜಾರಿಗೊಳಿಸದೇ  ಔಷಧ ತಯಾರಕ ಕಂಪನಿಗಳು  ಪ್ರತಿನಿಧಿಗಳನ್ನ ಶೋಷಣೆ ಮಾಡುತ್ತಿವೆ ಎಂದು ಆರೋಪಿಸಿ ನಗರದಲ್ಲಿ ಕರ್ನಾಟಕ ರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘ ದಾವಣಗೆರೆ ಜಿಲ್ಲಾ ಘಟಕ ಮಂಗಳವಾರ ಪ್ರತಿಭಟನೆ ನಡೆಸಿತು. ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಔಷಧ ಮಾರಾಟಗಾರರು ನಂತರ ಜಿಲ್ಲಾಧಿಕಾರಿ ಕಚೇರಿ ತಲುಪಿ ಕೇಂದ್ರದ ಕಾರ್ಮಿಕ ಸಚಿವರಿಗೆ ಮನವಿ ಸಲ್ಲಿಸಿದರು. ನಮ್ಮ ಸಮಸ್ಯೆಗಳ ಬಗ್ಗೆ ಹಲವಾರು ಬಾರಿ ಸರ್ಕಾರಗಳ … Read more

ಆಗಸ್ಟ್ 12ಕ್ಕೆ ಗಾಳಿಪಟ-2 ರಾಜ್ಯಾದ್ಯಂತ ತೆರೆಗೆ

ಸುದ್ದಿ360, ಬೆಂಗಳೂರು, ಜು.18: ರೋಚಕ ತಿರುವುಗಳನ್ನೊಳಗೊಂಡ, ಹಾಸ್ಯಭರಿತ ಪ್ರಸಂಗಗಳೊಂದಿಗೆ ಸಾಗುವ ಪ್ರಯಾಣದ ಮೂವರು ಹುಡುಗರು ಮತ್ತು ಅವರ ಪ್ರೇಮಗಳ ಕತೆ ಹೊಂದಿರುವ ಗಾಳಿಪಟ-2 ಚಲನಚಿತ್ರ ಮುಂಬರುವ ಆಗಸ್ಟ್ 12ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ ಎಂದು ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನ, ಮಡೆನೂರು ಮನು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಬ್ಬರೂ ಕಲಾವಿದರು, ಗಣೇಶ್, ದಿಗಂತ್ ಹಾಗೂ ಭೂಷಣ್ ಎನ್ನುವ ಮೂವರು ಪ್ರಾಣ ಸ್ನೇಹಿತರ ನಡುವೆ ನಡೆಯುವ ಕಥೆಯ ಹಂದರವನ್ನು ಹೊಂದಿದೆ. ಮೂವರು ಪ್ರಾಣ ಸ್ನೇಹಿತರು ನೀರುಕೋಟೆ ಎನ್ನುವ ಊರಿನ … Read more

ಜು.20ರಿಂದ 5 ದಿನಗಳ ಯೋಗ ಜೀವನ ದರ್ಶನ-2022

ಸುದ್ದಿ360, ಬೆಂಗಳೂರು, ಜು.18: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಕರ್ನಾಟಕ ಪತಂಜಲಿ ಯೋಗ ಫೌಂಡೇಶನ್ ವತಿಯಿಂದ ಜುಲೈ, 20 ರಿಂದ 24 ರವರೆಗೆ ನಗರದ 8 ಕಡೆಗಳಲ್ಲಿ ಯೋಗ ಜೀವನ ದರ್ಶನ-2022 ಹಮ್ಮಿಕೊಳ್ಳಲಾಗಿದೆ ಎಂದು ಯೋಗ ಫೌಂಡೇಶನ್ನಿನ ಸಂಚಾಲಕ ಟಿ.ವಿ.ವಿ ಸತ್ಯನಾರಾಯಣ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಯೋಗ ವಿದ್ಯೆಯ ಮುಖಾಂತರ ಸಮಾಜವನ್ನು ಪುಷ್ಟೀಕರಿಸುವ ಕಾರ್ಯವನ್ನು ಮಾಡುತ್ತಿರುವ ಸಂಘಟನೆಯಾಗಿದೆ.  ಅಂತಾರಾಷ್ಟ್ರ-ರಾಷ್ಟ್ರ-ರಾಜ್ಯ ಮಟ್ಟದ ಯೋಗ ಶಿಕ್ಷಕರ ಪ್ರಾಂತ … Read more

ಕಾಂಗ್ರೆಸ್ ಪಕ್ಷದಲ್ಲಿ ಪಕ್ಷ ಪೂಜೆಗೆ ಆದ್ಯತೆ, ವ್ಯಕ್ತಿ ಪೂಜೆಗಲ್ಲ: ಎಸ್ ಎಸ್ ಮಲ್ಲಿಕಾರ್ಜುನ್

ಸಿದ್ದರಾಮಯ್ಯ ಅಮೃತಮಹೋತ್ಸವ ಅಭಿಮಾನಿಗಳಿಂದಲೇ ರೂಪುಗೊಂಡಿರುವ ಕಾರ್ಯಕ್ರಮ ಸುದ್ದಿ360, ದಾವಣಗೆರೆ, ಜು.18: ಸಿದ್ದರಾಮಯ್ಯ ಅವರು ನಮ್ಮ ಬಲವಂತಕ್ಕೆ ಮಣಿದು ಅಮೃತ ಮಹೋತ್ಸವಕ್ಕೆ ಒಪ್ಪಿ  ಸಮ್ಮತಿ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಪಕ್ಷ ಪೂಜೆಗೆ ಆದ್ಯತೆ ಇದೆಯೇ ಹೊರತು ವ್ಯಕ್ತಿ ಪೂಜೆಗಲ್ಲ. ಹೀಗಾಗಿ ಸಿದ್ಧರಾಮಯ್ಯ ಅವರ ಅಮೃತ ಮಹೋತ್ಸವ ವ್ಯಕ್ತಿ ಪೂಜೆಯಲ್ಲ ಎಂದು  ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೇಳಿದರು. ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮಯ್ಯ ಅಮೃತ ಮಹೋತ್ಸವ ಸಮಾರಂಭದ ವೇದಿಕೆ ನಿರ್ಮಾಣ ಕಾರ್ಯಕ್ರಮಕ್ಕೆ ಸೋಮವಾರ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರ ಜತೆ … Read more

error: Content is protected !!