ನೂತನ ಜಿಲ್ಲಾಧಿಕಾರಿಗೆ ಲಿಂಗಾಯತ ಮಹಾಸಭಾದಿಂದ ಸ್ವಾಗತ

ಸುದ್ದಿ360, ದಾವಣಗೆರೆ, ಜು.15:  ದಾವಣಗೆರೆ ಜಿಲ್ಲಾ ಅಖಿಲ ಭಾರತ ವೀರಶೈವ – ಲಿಂಗಾಯತ ಮಹಾಸಭಾ ವತಿಯಿಂದ ದಾವಣಗೆರೆ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಶಿವಾನಂದ್ ಕಪಾಶಿ ಅವರಿಗೆ ಸ್ವಾಗತ ಕೋರಾಲಾಯಿತು. ಈ ಸಂಧರ್ಭದಲ್ಲಿ ಅಖಿಲ ಭಾರತ ವೀರಶೈವ – ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷರಾದ ದೇವರಮನೆ ಶಿವಕುಮಾರ್, ಯುವ ಘಟಕದ ರಾಷ್ಟ್ರೀಯ ಉಪಾಧ್ಯಕ್ಷರಾದ ಸಂದೀಪ್ ಅಣಬೇರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಆರ್. ಸಿದ್ದೇಶ್, ಜಿಲ್ಲಾ ಕಾರ್ಯದರ್ಶಿ ರಮೇಶ್ ಬಿ.ಜೆ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶುಭಾ ಐನಹಳ್ಳಿ, … Read more

ಇಗ್ನೋದಿಂದ ವಿವಿಧ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

ಸುದ್ದಿ360, ದಾವಣಗೆರೆ, ಜು.15: ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾನಿಲಯವು ಜುಲೈ  2022 ರ ಸಾಲಿಗೆ ವಿವಿಧ ಸರ್ಟಿಫಿಕೇಟ್ ಕೋರ್ಸ್,  ಡಿಪ್ಲೊಮಾ , ಪಿ.ಜಿ.ಡಿಪ್ಲೊಮಾ , ಪದವಿ ಮತ್ತು ಸ್ನಾತಕೋತ್ತರ ಪದವಿ ಒಳಗೊಂಡಂತೆ ವಿವಿಧ ಶೈಕ್ಷಣಿಕ  ಕಾರ್ಯಕ್ರಮಗಳ ಪ್ರವೇಶಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಬೆಂಗಳೂರು ಕೇಂದ್ರ ವ್ಯಾಪ್ತಿಯ ಸಹಾಯಕ ಪ್ರಾದೇಶಿಕ ನಿರ್ದೇಶಕರಾದ ಹೇಮಾಮಾಲಿನಿ ಮಾಹಿತಿ ನೀಡಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹಿಣಿಯರು, ವೃತ್ತಿಪರರು, ವಿದ್ಯಾರ್ಥಿಗಳು, ನಿವೃತ್ತಿ ಹೊಂದಿರುವವರೂ ಸೇರಿದಂತೆ 18 ವರ್ಷ ಪೂರೈಸಿದ ಯಾರೇ … Read more

ಸೇವಾನಿರತರಿಗೆ ಲಾಭ ನಷ್ಟ ಲೆಕ್ಕಿಸದೆ ಸೂಕ್ತ ವೇತನ ನೀಡುವುದು ಸರ್ಕಾರದ ಹೊಣೆ: ಸಿರಿಗೆರೆಶ್ರೀ

ಸುದ್ದಿ 360, ದಾವಣಗೆರೆ, ಜು.15: ಸಾರಿಗೆ ನೌಕರರದು ಜವಾಬ್ದಾರಿಯುತ ಕೆಲಸವಾಗಿದ್ದು, ಸರ್ಕಾರವೂ ಸಹ ನೌಕರರನ್ನು ಜವಾಬ್ದಾರಿಯುತವಾಗಿ ನಡೆಸಿಕೊಳ್ಳಬೇಕು. ನೌಕರರನ್ನಾಗಿ ಪರಿಗಣಿಸದೆ ಸೇವಾ ಧುರೀಣರು ಎಂದು ಪರಿಗಣಿಸುವ ಮೂಲಕ ನಿಮ್ಮ ಸಂಕಷ್ಟವನ್ನು ಪರಿಹರಿಸಲು ಮುಂದಾಗಬೇಕು ಎಂದು ಸಿರಿಗೆರೆ ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ವತಿಯಿಂದ ನಗರದ ತ್ರಿಶೂಲ್ ಕಲಾ ಭವನದಲ್ಲಿ ಆಯೋಜಿಸಲಾಗಿದ್ದ ಅಖಿಲ ಕರ್ನಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾ ಸಮ್ಮೇಳನ ಸಮಾರಂಭದ … Read more

ಯಾರೂ ಧರ್ಮಕ್ಕೆ ಹೊರತಲ್ಲ: ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ

ಸುದ್ದಿ360, ದಾವಣಗೆರೆ, ಜು.15:  ಯಾರೂ ಧರ್ಮಕ್ಕೆ ಹೊರತಲ್ಲ ಮತ್ತು ಕಾನೂನು ಧರ್ಮ ಬಿಟ್ಟು ಬೇರೆ ಅಲ್ಲ ಎಂದು ಸಿರಿಗೆರೆ ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು. ಅವರು ನಗರದ ತ್ರಿಶೂಲ್ ಕಲಾ ಭವನದಲ್ಲಿ ನಡೆದ ಅಖಿಲ ಕರ್ನಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾ ಸಮ್ಮೇಳನ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿ, ಅನೇಕ ವೇಳೆ ಧರ್ಮ ಮತ್ತು ಕಾನೂನು ವಿಷಯಗಳ ಮಧ್ಯೆ ಸಂಘರ್ಷವಾಗುತ್ತಿರುತ್ತದೆ. ಯಾರು ಕಾನೂನಿಗೆ ಹೊರತಲ್ಲ ಎಂದು ಹೇಳುತ್ತಾರೆ. ಆದರೆ ಕಾನೂನು ಧರ್ಮ ಬಿಟ್ಟು … Read more

ಜು.15 – ವಿಶ್ವ ಜನಸಂಖ್ಯಾ ದಿನಾಚರಣೆ

ಸುದ್ದಿ360, ದಾವಣಗೆರೆ, ಜು.15: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಾವಣಗೆರೆ ಇವರ ಸಂಯಕ್ತಾಶ್ರಯದಲ್ಲಿ “ವಿಶ್ವ ಜನಸಂಖ್ಯಾ ದಿನಾಚರಣೆ-2022” ರ “ಕುಟುಂಬ ಯೋಜನೆ ಉಪಾಯಗಳನ್ನು ನಮ್ಮದಾಗಿಸಿ, ಉನ್ನತಿಯ ಹೊಸ ಅಧ್ಯಾಯ ಬರೆಯೋಣ” ಎಂಬ ಘೋಷಣೆಯೊಂದಿಗೆ ಜು.15 ರ ಶುಕ್ರವಾರ ದಂದು ಬೆ.10.30ಕ್ಕೆ ವಿದ್ಯಾನಗರದ ಕುವೆಂಪು ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೂ ಮುನ್ನ ಬೆ.09 ಗಂಟೆಗೆ ಸಿ.ಜಿ. ಆಸ್ಪತ್ರೆ ಆವರಣದಿಂದ ಗುಂಡಿ … Read more

ಶ್ರೀ ವಾಣಿ ಲ್ಯಾಂಡ್ ಲಿಂಕ್ಸ್ ಕಚೇರಿಯಲ್ಲಿ ಎಸ್ ಟಿ ವೀರೇಶ್ ಜನ್ಮದಿನಾಚರಣೆ

ಸುದ್ದಿ360, ದಾವಣಗೆರೆ, ಜು.14: ನಗರದ ಕೆ. ಬಿ.‌ ಬಡಾವಣೆಯ ಒಂದನೇ ಮುಖ್ಯ‌ ರಸ್ತೆಯ ಶ್ರೀ ವಾಣಿ ಲ್ಯಾಂಡ್ ಲಿಂಕ್ಸ್ ಕಚೇರಿಯಲ್ಲಿ ಮಹಾನಗರ ಪಾಲಿಕೆಯ ಮಾಜಿ‌ ಮೇಯರ್ ಹಾಗೂ ಹಾಲಿ‌ ಸದಸ್ಯ ಎಸ್. ಟಿ. ವೀರೇಶ್ ಅವರ 48ನೇ ವರ್ಷದ ಹುಟ್ಟುಹಬ್ಬವನ್ನು ಕೇಕ್‌ ಕತ್ತರಿಸುವ ಮೂಲಕ ಆಚರಿಸಲಾಯಿತು. ಈ ವೇಳೆ ಶ್ರೀ ವಾಣಿ ಲ್ಯಾಂಡ್ ಲಿಂಕ್ಸ್ ನ ಮಾಲೀಕರಾದ ನಾಗಭೂಷಣ್ ವಾಣಿ, ಡೈಮಂಡ್ ಮಂಜುನಾಥ್, ಎಸ್. ರವೀಂದ್ರ ಮೊಯ್ಲಿ, ಬಿಜೆಪಿ ಯುವ ಮುಖಂಡ ಶ್ರೀನಿವಾಸ್,  ನಾಗರಾಜ್ ಬ್ರಷ್ ಮ್ಯಾನ್, … Read more

ಹರಿಹರ ಅಭಿವೃದ್ಧಿಗಾಗಿ ಅನುದಾನ ನೀಡಲು ಬಿಎಸ್ ಪಿ ಆಗ್ರಹ

ಸುದ್ದಿ360, ದಾವಣಗೆರೆ, ಜು.14: ಹರಿಹರ ತಾಲ್ಲೂಕಿನ ಅಭಿವೃದ್ಧಿಯ ವಿಚಾರವಾಗಿ ಉಸ್ತುವಾರಿ ಸಚಿವರಿಗೆ ಮನವಿ ಕೊಡಲು ಹೋದಾಗ ಸೂಕ್ತ ಸ್ಪಂದನೆ ವ್ಯಕ್ತಪಡಿಸದೇ ಹೋದದ್ದು ಖಂಡನೀಯ. ಇಂತಹ ಸಚಿವರನ್ನು ಬದಲಿಸಬೇಕು. ಅಲ್ಲದೇ ಹರಿಹರ ತಾಲೂಕಿನ ಅಭಿವೃದ್ಧಿಗೆ ತಕ್ಷಣವೇ ಸ್ಪಂದಿಸುವ ಮೂಲಕ ಅನುದಾನ ಬಿಡುಗಡೆ ಮಾಡುವಂತೆ ಬಿ ಎಸ್ ಪಿ ಪಕ್ಷ ದ ಜಿಲ್ಲಾಧ್ಯಕ್ಷ ಡಿ. ಹನುಮಂತಪ್ಪ ಆಗ್ರಹಿಸಿದರು. ನಗರದಲ್ಲಿ ಗುರುವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇನ್ನೂ ಒಂದು ವಾರದೊಳಗೆ ಈ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ ದಾವಣಗೆರೆ ಜಿಲ್ಲಾಧಿಕಾರಿ ಕಚೇರಿ … Read more

ಜು.15ಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಬೃಹತ್ ಸಮ್ಮೇಳನ

ಸುದ್ದಿ360, ದಾವಣಗೆರೆ, ಜು.14: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ವತಿಯಿಂದ ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಬೃಹತ್ ಸಮ್ಮೇಳನವನ್ನು ಜು.15ರಂದು ಬೆಳಿಗ್ಗೆ 10.30ಕ್ಕೆ ದಾವಣಗೆರೆಯ ತ್ರಿಶೂಲ್ ಕಲಾ ಭವನದಲ್ಲಿ ಆಯೋಜಿಸಲಾಗಿದೆ ಎಂದು ಕೂಟದ ರಾಜಾಧ್ಯಕ್ಷ ಆರ್.ಚಂದ್ರಶೇಖರ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಕುರಿತು ಮಾಹಿತಿ ನೀಡಿದ ಅವರು, ಸಿರಿಗೆರೆ ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮಿಗಳ ಸಾನಿಧ್ಯದಲ್ಲಿ ಸಾರಿಗೆ ಸಂಸ್ಥೆಗಳ ಅಭಿವೃದ್ಧಿ ಹಾಗೂ ನೌಕರರ ಹಿತಚಿಂತನಾ ಸಮ್ಮೇಳನವನ್ನು ಆಯೋಜಿಸಲಾಗಿದೆ. ಸಿಎಂ ಬಸವರಾಜ್ ಬೊಮ್ಮಾಯಿ, … Read more

ಕಾಂಗ್ರೆಸ್ನಿಂದ ಕ್ಷುಲ್ಲಕ ರಾಜಕಾರಣ: ಮೇಯರ್ ಜಯಮ್ಮ ಗೋಪಿನಾಯ್ಕ ಹೇಳಿಕೆ

ಸುದ್ದಿ360, ದಾವಣಗೆರೆ, ಜು.14: ಕಾಂಗ್ರೆಸ್ ನವರು ಕ್ಷುಲ್ಲಕ ರಾಜಕಾರಣದಲ್ಲಿ ತಲ್ಲೀನರಾಗಿದ್ದಾರೆ. ನಾನು ಕಛೇರಿಗೆ ಬರುತ್ತೇನೊ ಇಲ್ಲವೊ ಎಂಬುದನ್ನು ತಿಳಿಯಲು ಸಿಸಿ ಕ್ಯಾಮೆರಾ ಫೂಟೇಜ್ ಪರಿಶೀಲಿಸಲಿ, ಇಲ್ಲವೇ ನಾನು ಕಛೇರಿಗೆ ಬಂದು ಹೋಗುವುದನ್ನು ಗಮನಿಸಲು ಯಾರಾನ್ನಾದರು ನೇಮಕ ಮಾಡಿಕೊಳ್ಳಲಿ ಎಂದು ವಿರೋಧ ಪಕ್ಷದವರ ಆರೋಪಕ್ಕೆ ಮಹನಗರ ಪಾಲಿಕೆ ಮೇಯರ್ ಜಯಮ್ಮ ಗೋಪಿನಾಯ್ಕ ಕಟುವಾಗಿ ಪ್ರತಿಕ್ರಿಯಿಸಿದರು. ಪಾಲಿಕೆ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಪ್ರತಿಪಕ್ಷ ನಾಯಕ ಹಾಗೂ ಸದಸ್ಯರ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು, ಸಾಮಾನ್ಯ ಕುಟುಂಬದ ದಲಿತ ಮಹಿಳೆಯೊಬ್ಬಳು ಮೇಯರ್ ಸ್ಥಾನ … Read more

ನೆರೆ ಸಂತ್ರಸ್ತರ ರಕ್ಷಣೆಗೆ ಮುಂಜಾಗ್ರತಾ ಕ್ರಮಕ್ಕೆ ಸಚಿವರ ಸೂಚನೆ

ಸುದ್ದಿ360 ದಾವಣಗೆರೆ, ಜು.13:ಮುಂಬರುವ ದಿನಗಳಲ್ಲಿ ಸಾಕಷ್ಟು ಮಳೆಯಾಗುವ ಸಾಧ್ಯತೆ ಇರುವುದರಿಂದ, ಅಧಿಕಾರಿಗಳು ಎಂತಹ ಕಠಿಣ ಪರಿಸ್ಥಿತಿ ನಿರ್ಮಾಣವಾದರೂ ಎದುರಿಸಲು ಪೂರ್ವ ತಯಾರಿ ಮಾಡಿಕೊಳ್ಳಬೇಕು ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ಎ ಬಸವರಾಜ್ ಹೇಳಿದರು. ಬುಧವಾರ ಹೊನ್ನಾಳಿ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಹೊನ್ನಾಳಿ-ನ್ಯಾಮತಿ ತಾಲ್ಲೂಕುಗಳ ಮಳೆ ಹಾನಿ ಕುರಿತು ವಿವಿಧ ಇಲಾಖೆಗಳ ವರದಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯಾವ್ಯಾವ ಭಾಗದಲ್ಲಿ ಮಳೆ ಹೆಚ್ಚಾಗಿ ಬೀಳುತ್ತಿದೆಯೋ ಆ ಪ್ರದೇಶಗಳ ನದಿ ಭಾಗದಲ್ಲಿ … Read more

error: Content is protected !!