ಸರಕಾರಿ ಶಾಲಾ ಕಟ್ಟಡ ನೆಲಸಮ – ಲಕ್ಷಾಂತರ ರೂ. ಗುಳುಂ

ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಕ್ರಮಕೈಗೊಳ್ಳಲು ಗ್ರಾಮಸ್ಥರ ಆಗ್ರಹ ಸುದ್ದಿ360 ದಾವಣಗೆರೆ.ಜು.04: ಇಲಾಖೆ ಗಮನಕ್ಕೆ ತಾರದೆ ಸರಕಾರಿ ಶಾಲೆಯ ಹಳೆಕಟ್ಟಡ ನೆಲಸಮಗೊಳಿಸಿ, ಅದರಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ಹಿಂದಿನ ಮುಖ್ಯ ಶಿಕ್ಷಕ ಹಾಗೂ ಗ್ರಾಪಂ ಸದಸ್ಯರು ಮಾರಿಕೊಂಡಿರುವುದಾಗಿ ತಾಲೂಕಿನ ಲೋಕಿಕೆರೆ ಗ್ರಾಮಸ್ಥರು ಆರೋಪಿಸಿದರು. ಈ ಕುರಿತು ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಗ್ರಾಮದ ನಿವಾಸಿ ಪುರಂದರ ಲೋಕಿಕೆರೆ ಮಾತನಾಡಿ, ಗ್ರಾಮದಲ್ಲಿನ ಶ್ರೀ ಮಾರುತಿ ಸರಕಾರಿ ಪ್ರೌಢಶಾಲೆಯ ಹಳೆಯ ಕಟ್ಟಡವನ್ನು ಶಿಕ್ಷಣ ಇಲಾಖೆ ಗಮನಕ್ಕೆ ತಾರದೇ ನೆಲಸಮಗೊಳಿಸಲಾಗಿದೆ. ಮತ್ತು ಅದರಲ್ಲಿದ್ದ … Read more

ದಾವಣಗೆರೆಯಲ್ಲಿ ಯೋಗಥಾನ್ 2022 – ಜು.6ರಂದು ಸಭೆ

ಸುದ್ದಿ360 ದಾವಣಗೆರೆ.ಜು.04: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಗಷ್ಟ್ 12 ರಿಂದ 14 ರವರೆಗೆ ಯೋಗಥಾನ್-2022 ಕಾರ್ಯಕ್ರಮವನ್ನು ಸಂಘಟಿಸಿ ಗಿನ್ನಿಸ್ ದಾಖಲೆ/ವಿಶ್ವ ದಾಖಲೆ ಸ್ಧಾಪಿಸಲು ದಾವಣಗೆರೆ ಜಿಲ್ಲೆಯಲ್ಲಿ ಯೋಗಥಾನ್-2022 ಕಾರ್ಯಕ್ರಮವನ್ನು ಆಯೋಜಿಸಬೇಕಾಗಿರುತ್ತದೆ. ದಾವಣಗೆರೆ ಜಿಲ್ಲೆಯ ಯೋಗ ಸಂಬಂಧಿತ ಸಂಘ ಸಂಸ್ಥೆಗಳು ಹಾಗೂ ಇತರೆ ಯೋಗಾಸಕ್ತ ಸಂಸ್ಧೆಗಳು ಹಾಗೂ ಸರ್ಕಾರೇತರ ಸಂಸ್ಧೆಗಳು ಜು.06 ರಂದು ಮಧ್ಯಾಹ್ನ 3.30 ಕ್ಕೆ ಸಹಾಯಕ ನಿರ್ದೇಶಕರ ಕಛೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಇಲ್ಲಿ … Read more

ಕೆರೆಯಲ್ಲಿ ಮುಳುಗಿದ ನಂದಿನಿ ಹಾಲಿನ ವಾಹನ

ಸುದ್ದಿ360 ದಾವಣಗೆರೆ.ಜು.04:  ನಂದಿನಿ ಹಾಲಿನ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕೆರೆಯಲ್ಲಿ ಮುಳುಗಿರುವ ಘಟನೆ ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ಘಟನೆಯಿಂದ ವಾಹನದಲ್ಲಿದ್ದ ಚಾಲಕ ಮತ್ತು ಕ್ಲೀನರ್ ಇಬ್ಬರಿಗೂ ಸಣ್ಣ ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಂದಿನ ಹಾಲಿನ ಶಾಪ್ ಗಳಿಗೆ ಹಾಲು ಪೂರೈಸುತ್ತಿದ್ದ ವಾಹನ ಇದಾಗಿದ್ದು, ವಾಹನದಲ್ಲಿದ್ದ 500ಕ್ಕೂ ಅಧಿಕ ಲೀಟರ್ ಹಾಲು ನೀರು ಪಾಲಾಗಿದೆ. ದೇವರಹಳ್ಳಿ ಅಂಗಡಿಗಳಿಗೆ ಹಾಲು ವಿತರಿಸುವ ಸಲುವಾಗಿ ನಲ್ಲೂರು ಕಡೆ ಹೊರಟಿದ್ದ ವಾಹನ ಇದಾಗಿತ್ತು. ಸಂತೆಬೆನ್ನೂರು … Read more

ಕೆವಿಪಿವೈನಲ್ಲಿ ಸರ್‌ಎಂವಿ ಪಿಯು ಕಾಲೇಜಿನ 11 ವಿದ್ಯಾರ್ಥಿಗಳಿಗೆ ರ‍್ಯಾಂಕ್

ಸುದ್ದಿ360 ದಾವಣಗೆರೆ.ಜು.04: ರಾಷ್ಟ್ರಮಟ್ಟದ ಕಿಶೋರ್ ವೈಜ್ಞಾನಿಕ್ ಪ್ರೋತ್ಸಾಹನ್ ಯೋಜನಾ (ಕೆವಿಪಿವೈ) ಪರೀಕ್ಷೆಯಲ್ಲಿ ನಗರದ ಸರ್ ಎಂವಿ ಕಾಲೇಜಿನ 11 ವಿದ್ಯಾರ್ಥಿಗಳು ರ‍್ಯಾಂಕ್ ಗಳಿಸುವ ಮೂಲಕ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ನಲ್ಲಿ ಪ್ರವೇಶ ಪಡೆಯಲು ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ ಎಲ್ಲಾ 11 ವಿದ್ಯಾರ್ಥಿಗಳಿಗೆ ನಗರದ ಎಸ್.ಎ. ರವೀಂದ್ರನಾಥ ನಗರದಲ್ಲಿರುವ ಸರ್ ಎಂವಿ ಕಾಲೇಜಿನ ನೂತನ ಕ್ಯಾಪಸ್‌ನಲ್ಲಿ ಭಾನುವಾರ ಅಭಿನಂದನಾ ಸಮಾರಂಭ ಎರ್ಪಡಿಸಲಾಗಿತ್ತು. ರ‍್ಯಾಂಕ್ ಪಡೆದು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳು ಟಿ.ಎಚ್. ಭರತೇಶ್ (108), ಎಸ್.ಆರ್. … Read more

ಜಿಲ್ಲಾ ಉಸ್ತವಾರಿ ಸಚಿವರ ಜಿಲ್ಲಾ ಪ್ರವಾಸ

byrathi basavaraj

ಸುದ್ದಿ360 ದಾವಣಗೆರೆ, ಜು.02: ಮಾನ್ಯ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ ಇವರು ಜು.03 ರ ಭಾನುವಾರ ದಂದು ಬೆಳಿಗ್ಗೆ 10 ರಿಂದ ಮ.12 ಗಂಟೆಯವೆರೆಗೆ ಹರಿಹರ ತಾಲ್ಲೂಕಿನ ಬೆಳ್ಳೂಡಿಯ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದಲ್ಲಿ ಚಂದ್ರಗುಪ್ತ ಮೌರ್ಯ ಯುಪಿಎಸ್‍ಸಿ ಕೆಪಿಎಸ್‍ಸಿ ತರಬೇತಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 12.30ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರೆಂದು ಅವರ ಅಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಹಿತ್ಯದಿಂದ ಸಮಾಜದಲ್ಲಿನ ದೌರ್ಜನ್ಯ ತಡೆಯಲು ಸಾಧ್ಯ

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಭಿಮತ ಸುದ್ದಿ360 ದಾವಣಗೆರೆ, ಜು.02: ಸಮಾಜದಲ್ಲಿ ನಡೆಯುವ ಅಸಮಾನತೆ, ದೌರ್ಜನ್ಯಗಳನ್ನು ತಡೆಯಲು ವಚನ ಸಾಹಿತ್ಯದಿಂದ ಮಾತ್ರ ಸಾಧ್ಯ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು. ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿದ್ದ ಡಾ. ಫಕೀರಪ್ಪ ಗುರುಬಸಪ್ಪ ಹಳಕಟ್ಟಿ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು. ಇಂದು ನಮಗೆ ವಚನಗಳು ಇಷ್ಟೊಂದು ಸುಲಭವಾಗಿ ಸಿಗುತ್ತಿವೆ … Read more

ಅನುದಾನ ನೀಡಿಕೆಯಲ್ಲಿ ತಾರತಮ್ಯ – ಬಿಜೆಪಿಯಿಂದ ಸೇಡಿನ ರಾಜಕೀಯ

ಪಾಲಿಕೆ ವಿಪಕ್ಷ ನಾಯಕ : ಜಿ. ಎಸ್. ಮಂಜುನಾಥ್ ಗಡಿಗುಡಾಳ್‌ ಗಂಭೀರ ಆರೋಪ ಸುದ್ದಿ360 ದಾವಣಗೆರೆ, ಜು.02:  ಮಹಾನಗರ ಪಾಲಿಕೆ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಯುಜಿಡಿ ತುರ್ತು ಕಾಮಗಾರಿ ಸೇರಿದಂತೆ ಮೂಲಭೂತ ಸೌಲಭ್ಯ ಕಲ್ಪಿಸಲು ಕೂಡ ಕಾಂಗ್ರೆಸ್ ವಾರ್ಡ್ಗಳಿಗೆ ಹಣ ನೀಡದೆ ಆಡಳಿತ ಪಕ್ಷ ಬಿಜೆಪಿ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಜಿ. ಎಸ್. ಮಂಜುನಾಥ್ ಗಡಿಗುಡಾಳ್ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಹಾನಗರ ಪಾಲಿಕೆ … Read more

ಜು.11ಕ್ಕೆ ರೈತರಿಂದ ಮುಖ್ಯಮಂತ್ರಿ ಮನೆಗೆ ಮುತ್ತಿಗೆ

ಸುದ್ದಿ360 ದಾವಣಗೆರೆ, ಜು.02: ಕಬ್ಬು ಬೆಳೆಗೆ ಕನಿಷ್ಠ ಬೆಲೆ ನಿಗದಿ, ಹಳೇ ಬಾಕಿ ಪಾವತಿ ಹಾಗೂ ಕರ ನಿರಾಕರಣೆ ಚಳವಳಿಯಲ್ಲಿ ಕಟ್ಟದ ಗೃಹ ವಿದ್ಯುತ್ ಬಿಲ್ ಬಲತ್ಕಾರ ವಸೂಲಿ ಕ್ರಮದ ವಿರುದ್ಧ ಜು.11ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿ, ಅಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಮುಖ್ಯಮಂತ್ರಿಗಳ … Read more

ಬಿಜೆಪಿಯಲ್ಲಿ ಮಾತ್ರ ಮಹಿಳೆಗೆ ಸೂಕ್ತ ಸ್ಥಾನಮಾನ : ವೀರೇಶ ಹನಗವಾಡಿ ಅಭಿಮತ

ಸುದ್ದಿ360 ದಾವಣಗೆರೆ, ಜು.02:  ಇತರೆ ರಾಜಕೀಯ ಪಕ್ಷಗಳು ಮಹಿಳೆಯರನ್ನು ಮತ ಬ್ಯಾಂಕ್‌ಗಾಗಿ ಮಾತ್ರವೇ ಉಪಯೋಗಿಸಿಕೊಳ್ಳುತ್ತವೆ. ಬಿಜೆಪಿಯಲ್ಲಿ ಮಾತ್ರವೇ ಮಹಿಳೆಯರಿಗೆ ಸೂಕ್ತ ಸ್ಥಾನಮಾನ ಸಿಗುತ್ತದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಎಸ್.ಎಂ.ವೀರೇಶ ಹನಗವಾಡಿ ತಿಳಿಸಿದರು. ನಗರದ ಅರ್ಬನ್ ಬ್ಯಾಂಕ್ ಸಮುದಾಯ ಭವನದಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಹಮ್ಮಿಕೊಂಡಿರುವ 2 ದಿನಗಳ ಪ್ರಶಿಕ್ಷಣ ಶಿಬಿರವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷವು ಒಂದು ಕುಟುಂಬದ ಮೇಲೆ ನಿಂತಿದೆ. ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ನೆಹರೂ ಕುಟುಂಬದವರನ್ನು ಬಿಟ್ಟರೆ ಬೇರೆ ಯಾರಿಗೂ ಅವಕಾಶವಿಲ್ಲ. … Read more

ಬಸ್ ಪಾಸ್ ಶೈಕ್ಷಣಿಕ ಅವಧಿಗೆ ವಿಸ್ತರಿಸಲು ಆಗ್ರಹಿಸಿ ಎಐಡಿಎಸ್ಓ ಪ್ರತಿಭಟನೆ

ಸುದ್ದಿ360 ದಾವಣಗೆರೆ.ಜು.02: ಇಂಜಿನಿಯರಿಂಗ್, ಡಿಪ್ಲೊಮಾ, ಐಟಿಐ, ಮೆಡಿಕಲ್ ಹಾಗೂ ಇನ್ನಿತರ ವಿದ್ಯಾರ್ಥಿಗಳ ಬಸ್ ಪಾಸಿನ ಅವಧಿಯನ್ನು ಪ್ರಸಕ್ತ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ವಿಸ್ತರಿಸುವಂತೆ ಆಗ್ರಹಿಸಿ ಎಐಡಿಎಸ್ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ನಗರದ KSRTC ಬಸ್ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಎಐಡಿಎಸ್ಓನ ಜಿಲ್ಲಾಕಾರ್ಯದರ್ಶಿ ಪೂಜಾನಂದಿಹಳ್ಳಿ ಮಾತನಾಡಿ, ರಾಜ್ಯದ ಎರಡನೇ ಮತ್ತು ಮೂರನೇ ವರ್ಷದ ಪದವಿ ಹಾಗೂ ಇನ್ನಿತರ ಉನ್ನತ ಶಿಕ್ಷಣದ ವಿದ್ಯಾರ್ಥಿಗಳಿಗೆ  ವಿದ್ಯಾರ್ಥಿ ಪಾಸ್ ಅನ್ನು ಸೆಪ್ಟಂಬರ್ 2021ರಲ್ಲಿ ನೀಡಲಾಗಿತ್ತು. ಆದರೆ ಅವರ ತರಗತಿಗಳು ನವೆಂಬರ್ ನಲ್ಲಿ … Read more

error: Content is protected !!