ನವಸಂಕಲ್ಪ ಚಿಂತನಾ ಸಭೆಯಿಂದ ಪಕ್ಷದ ಬಲವರ್ಧನೆ: ಎಂ.ಸಿ.ವೇಣುಗೋಪಾಲ್‍

ಸುದ್ದಿ 360 ದಾವಣಗೆರೆ, ಜೂ.15: ಕೆಪಿಸಿಸಿಯಿಂದ ಜಿಲ್ಲೆಯ ಪ್ರತಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನವಸಂಕಲ್ಪ ಚಿಂತನಾ ಶಿಬಿರವನ್ನು ಜುಲೈ ಮೊದಲ ವಾರದಲ್ಲಿ ನಡೆಸಲಾಗುವುದು ಎಂದು ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಎಂ.ಸಿ.ವೇಣುಗೋಪಾಲ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳವಾರ ನಡೆದ ಚಿಂತನಾ ಸಭೆ ಪಕ್ಷದ ಶಾಸಕರು, ಮಾಜಿ ಶಾಸಕರು, ಬ್ಲಾಕ್ ಅಧ್ಯಕ್ಷರು, ಉಪಾಧ್ಯಕ್ಷರು, ಮುಖಂಡರ ಸಲಹೆ, ಅಭಿಪ್ರಾಯಗಳೊಂದಿಗೆ ಯಶಸ್ವಿಯಾಗಿ ನಡೆಯಿತು.  ಚಿಂತನಾ ಸಭೆಯಲ್ಲಿ ಎಲ್ಲರಿಗೂ ಮುಕ್ತವಾಗಿ ಅಭಿಪ್ರಾಯ ಮಂಡಿಸಲು ಅವಕಾಶ ನೀಡಲಾಗಿತ್ತು. … Read more

ಜೂನ್ 16: ದಾವಣಗೆರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ದಾವಣಗೆರೆ, ಜೂನ್ 14: ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇವರು ಜೂನ್ 16 ರಂದು ದಾವಣಗೆರೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಜೂನ್ 16 ರ ಬೆಳಿಗ್ಗೆ 9,30ಕ್ಕೆ ಬೆಂಗಳೂರಿನಿಂದ ಹೆಲಿಕ್ಯಾಪ್ಟರ್ ಮೂಲಕ ಹೊರಟು 10,20 ಕ್ಕೆ ದಾವಣಗೆರೆ ಜಿ.ಎಂ.ಐ.ಟಿ.ಹೆಲಿಪ್ಯಾಡ್ ತಲುಪಲಿದ್ದಾರೆ. ಮಧ್ಯಾಹ್ನ 2.30 ರಿಂದ 4 ಗಂಟೆವರೆಗೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂಜೆ 4 ಗಂಟೆಗೆ ಜಿ.ಎಂ.ಐ.ಟಿ ಹೆಲಿಪ್ಯಾಡ್ ನಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ರಕ್ತವನ್ನು ಯಾರು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ: ಡಾ. ನಾಗರಾಜ್

ವಿಶ್ವ ಸ್ವಯಂಪ್ರೇರಿತ ರಕ್ತದಾನಿಗಳ ದಿನಾಚರಣೆ 2022 ದಾವಣಗೆರೆ ಜೂ.14 : ರಕ್ತವನ್ನು ಯಾರು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ, ಹಾಗಾಗಿ ವರ್ಷಕ್ಕೆ ಕನಿಷ್ಠ ಒಂದು ಬಾರಿಯಾದರೂ ಎಲ್ಲರೂ ರಕ್ತದಾನವನ್ನು ಮಾಡುವಂತೆ ಪ್ರತಿಜ್ಞೆ ಮಾಡೋಣ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗರಾಜ ಅವರು ಹೇಳಿದರು. ಮಂಗಳವಾರ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು … Read more

ತಪ್ಪು ಮಾಡಿಲ್ಲವಾದರೆ ತನಿಖೆಗೆ ಸಹಕರಿಸಲಿ: ಸಂಸದ ತೇಜಸ್ವಿ ಸೂರ್ಯ

ದಾವಣಗೆರೆ, ಜೂ.14: ಸರಕಾರದ ಯಾವುದೇ ಸಂಸ್ಥೆಗಳು ನಮ್ಮನ್ನು ತನಿಖೆ ಮಾಡುವುದಿರಲಿ, ಪ್ರಶ್ನೆ ಮಾಡುವುದಕ್ಕೂ ಸಾಧ್ಯವಿಲ್ಲ ಎಂಬ ಭಾವನೆಯಲ್ಲಿ ರಾಹುಲ್, ಸೋನಿಯಾ ಹಾಗೂ ಕಾಂಗ್ರೆಸಿಗರಿದ್ದಾರೆ ಎಂಬುದು ಅವರ ಈ ಪ್ರತಿಭಟನೆಯ ಸಂಕೇತ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿ, ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬುದು ಎಂಥವರಿಗೂ ಕಣ್ಣಿಗೆ ಕಾಣಿಸುವಂತಿದೆ. ಒಂದೊಮ್ಮೆ ಅವರು ತಪ್ಪು ಮಾಡಿಲ್ಲ, ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ ಎಂದಾದರೆ ತನಿಖೆಗೆ ಸಹಕರಿಸಬೇಕಿತ್ತು. ಕೋರ್ಟ್‌ಗೆ ಹಾಜರಾಗಿ ಅಲ್ಲಿ ಬರುವ ತೀರ್ಪನ್ನು … Read more

ದಾವಣಗೆರೆಯ ನಿಂಚನ ಶಾಲೆಯಲ್ಲಿ ರಕ್ತದಾನ ಶಿಬಿರ

ದಾವಣಗೆರೆ, ಜೂ.13:  ನಗರದ ನಿಟ್ಟುವಳ್ಳಿಯ ನಿಂಚನ ಪಬ್ಲಿಕ್ ಶಾಲೆಯಲ್ಲಿ ಜೂ.14ರಂದು ಬೆಳಗ್ಗೆ 10 ಗಂಟೆಗೆ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಶಾಲೆ ಉಪಾಧ್ಯಕ್ಷೆ ಎಂ.ಎಸ್. ರೂಪಾ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ  ಅವರು, ದಾವಣಗೆರೆ ರಕ್ತ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಜಿಲ್ಲಾಕಾರಿ ಮಹಾಂತೇಶ ಬೀಳಗಿ ಉದ್ಘಾಟಿಸುವರು. ಎಸ್ಪಿ ಸಿ.ಬಿ. ರಿಷ್ಯಂತ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಮೇಯರ್ ಜಯಮ್ಮ ಗೋಪಿನಾಯ್ಕ್, ಇನ್ಸ್‌ಪೆಕ್ಟರ್ ತ್ಯಾಗರಾಜ್, ಪಾಲಿಕೆ ಸದಸ್ಯರಾದ ವೀರೇಶ್, ಗಣೇಶ್, ಉಮಾ ಪ್ರಕಾಶ್ ಪಾಲ್ಗೊಳ್ಳುವರು ಎಂದರು. … Read more

ದಾವಣಗೆರೆಗೆ ಶಿಕ್ಷಣ ಸಚಿವರ ಭೇಟಿ

ದಾವಣಗೆರೆ, ಜೂ.13:  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಜೂ. 14 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 7.30 ಕ್ಕೆ ಬೆಂಗಳೂರಿನಿಂದ ಹೊರಟು 10.30 ಕ್ಕೆ ದಾವಣಗೆರೆಗೆ ಆಗಮಿಸುವರು. ನಂತರ 10.40 ಕ್ಕೆ ದಾವಣಗೆರೆ ದಕ್ಷಿಣ ವಲಯದ ಹಳೇ ಬಿಸಲೇರಿಯ ಕುಂದೂರು ಮುರಿಗೆಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಹಸ್ತಾಂತರ ಸಮಾರಂಭದಲ್ಲಿ ಭಾಗವಹಿಸುವರು. ತದ ನಂತರ ಮಧ್ಯಾಹ್ನ 3 ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ದಾವಣಗೆರೆ-ಚಿತ್ರದುರ್ಗ ಜಿಲ್ಲೆಗಳ ಇಲಾಖಾ … Read more

ಕೇಂದ್ರ ಸರಕಾರದಿಂದ ದ್ವೇಷದ ರಾಜಕೀಯ

ದಾವಣಗೆರೆ, ಜೂ.13:  ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಂದಿನಿಂದಲೂ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಾ ರಾಜಕೀಯ ಷಡ್ಯಂತ್ರ ನಡೆಸುತ್ತಿದೆ ಎಂದು ಕೆಪಿಸಿಸಿ ವಕ್ತಾರ ಡಿ. ಬಸವರಾಜ ಆರೋಪಿಸಿದರು. ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷವನ್ನು ಸೈದ್ಧಾಂತಿಕವಾಗಿ ಎದುರಿಸಲಾಗದ ಕೇಂದ್ರ ಸರಕಾರ, ನೆಹರು ಕುಟುಂಬದ ವಿರುದ್ಧ ಇ.ಡಿ, ಐಟಿ ದಾಳಿ ಮಾಡಿಸುವ ಮೂಲಕ ಕೀಳು ಮಟ್ಟದ ರಾಜಕೀಯ ನಡೆಸುತ್ತಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ನೆಹರು ಕುಟುಂಬದ ವಿರುದ್ಧ ಹಗೆ ಸಾಧಿಸುತ್ತಿರುವ ಕೇಂದ್ರ ಸರಕಾರ, … Read more

ಪೊಲೀಸರ ಬಗೆಗೆ ಸಾರ್ವಜನಿಕರಿಗಿರುವ ಗೌರವ ಕಾಪಾಡಿಕೊಳ್ಳಿ –ಆರಗ ಜ್ಞಾನೇಂದ್ರ

araga jnanedra, home minister, davangere

ದಾವಣಗೆರೆ ಜೂ.08 : ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಬಗೆಗೆ ಗೌರವ ಇದ್ದು, ಅದನ್ನು ಕಾಪಾಡಿಕೊಳ್ಳುವಂತಹ ಕೆಲಸವನ್ನು ಪೊಲೀಸರು ಮಾಡಬೇಕು, ಜನಗಳು ನಿಮ್ಮನ್ನ ನಂಬಿ ರಾತ್ರಿ ನಿದ್ರೆ ಮಾಡುತ್ತಾರೆ, ಹಾಗಾಗಿ ಸಾರ್ವಜನಿಕರ ಹಿತರಕ್ಷಣೆ ನಿಮ್ಮ ಕರ್ತವ್ಯವೆಂದು ತಿಳಿದು ಕಾರ್ಯನಿರ್ವಹಿಸಿ ಎಂದು ಗೃಹ ಸಚಿವರಾದ ಅರಗ ಜ್ಞಾನೇಂದ್ರ ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಪೊಲೀಸ್ ಘಟಕದ ಪರಿವೀಕ್ಷಣಾ ಸಭೆಯಲ್ಲಿ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಯಾರು ಅಸಹಾಯಕರು ಗೌರವಸ್ಥರು ಇರುತ್ತಾರೋ ಅವರ ಪರವಾಗಿ ಪೊಲೀಸ್ … Read more

error: Content is protected !!