ದ್ರೋಣ ಎಜು ಇ ಲರ್ನಿಂಗ್ ನಿಂದ ವಿದ್ಯಾರ್ಥಿಗಳಿಗೆ ಇ-ತರಗತಿ
ಸುದ್ದಿ360 ದಾವಣಗೆರೆ, ಜು.12: ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮತ್ತು ಶಿಕ್ಷಣ ಕ್ಷೇತ್ರದ ಆಧುನಿಕ ಸೌಲಭ್ಯಗಳನ್ನು ಪ್ರತಿಯೊಬ್ಬ ವಿದ್ಯಾರ್ಥಿಗೂ ತಲುಪಿಸುವ ಆಶಯದಿಂದ ದ್ರೋಣ ಎಜುಕೇಷನ್ ಅಪ್ಲಿಕೇಷನ್ ಸಿದ್ಧಪಡಿಸಲಾಗಿದೆ ಎಂದು ಜಾವ ಟೆಕ್ ಬಿಸಿನೆಸ್ ಸಲ್ಯೂಷನ್ಸ್ ಸಂಸ್ಥೆಯ ರಾಜ್ಯ ಮುಖ್ಯಸ್ಥ ಸಂಜೀವ್ ತಿಳಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಆಧುನಿಕ ತಂತ್ರಜ್ಞಾನದಿಂದ ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ಆಗುತ್ತಿದ್ದು, ವಿದ್ಯಾರ್ಥಿಗಳಿಗೆ ಪಠ್ಯ ಹಾಗೂ ಶೈಕ್ಷಣಿಕ ಅಧ್ಯಯನಕ್ಕೆ ಪೂರಕ ಆಗಿರುವ ಪುಸ್ತಕಗಳು ಆನ್ ಲೈನ್ ಮೂಲಕವೇ ಸಿಗುತ್ತಿದೆ. ವಿದ್ಯಾರ್ಥಿಗಳಿಗೆ ಅನುಕೂಲಕ್ಕಾಗಿ ದೃಶ್ಯ … Read more