ಆಸ್ಪತ್ರೆಯಲ್ಲಿ ಎಚ್ ಡಿಕೆ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಆದಿಚುಂಚನಗಿರಿ ಶ್ರೀ

ಸುದ್ದಿ360, ಏ. 23: ಆರೋಗ್ಯದ ಏರುಪೇರಿನಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರನ್ನು ಶ್ರೀ ಆದಿಚುಂಚನಗಿರಿ ಮಹಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರುಗಳಾದ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಇಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಬಿರುಸಿನ ಓಡಾಟದಿಂದ ಪ್ರಚಾರ ಮಾಡುತ್ತಿದ್ದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಶನಿವಾರ ಜ್ವರದಿಂದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ಸಿದ್ದರಾಮಯ್ಯ ಹರಕೆಯ ಕುರಿಯಾಗಲಿದ್ದಾರೆ: ಎಚ್.ಡಿ.ಕೆ

ಸುದ್ದಿ360 ಕಲಬುರಗಿ ಜ.13: ಸಿದ್ಧರಾಮಯ್ಯನವರನ್ನು ಕೋಲಾರದಲ್ಲಿ ಕಣಕ್ಕಿಳಿಸುವ ಮೂಲಕ ಅವರ ಪಕ್ಷದವರೇ ಅವರನ್ನು ಹರಕೆಯ ಕುರಿಯನ್ನಾಗಿ ಮಾಡಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಶುಕ್ರವಾರ ಅವರು ಜಿಲ್ಲೆಯ ಕಡಣಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ಧರಾಮಯ್ಯರಿಗೆ  ಕೋಲಾರ ಕ್ಷೇತ್ರ ಸೇಫ್ ಅಲ್ಲ. ಅವರಿಗೆ ಅಲ್ಲಿ  ನಿಲ್ಲುವಂತೆ ಯಾರು ಒತ್ತಡ ಹಾಕಿದ್ದಾರೆ ಎಂಬುದು ಗೊತ್ತಿಲ್ಲ. ನಾನು ಸ್ವತಃ ಕೋಲಾರದಲ್ಲಿ ಸುತ್ತಾಡಿ, ಅಲ್ಲಿಯ ಜನರ ಭಾವನೆ ಅರಿತುಕೊಂಡಿದ್ದೇನೆ. ಕೋಲಾರದಲ್ಲಿ ಕಾಂಗ್ರೆಸ್ ಪಕ್ಷಕ್ಕಾಗಲಿ ಅಥವಾ ನಾಯಕರಿಗಾಗಲಿ ಮತ ಪಡೆಯುವ ಶಕ್ತಿ … Read more

ಸಿದ್ದು- ಡಿಕೆಶಿ ಕೈ ಎತ್ತಿದ್ದಾರೆ – ಯಾರು ಯಾರಿಗೆ ಚೂರಿ ಹಾಕ್ತಾರೋ ನೋಣೋಣ: ಎಚ್ ಡಿಕೆ

ಸುದ್ದಿ360 ರಾಮನಗರ, ಆ.4: ನಾನು ಕೈ ಎತ್ತಿಸ್ಕೊಂಡು ಬೆನ್ನಿಗೆ ಚೂರಿ ಹಾಕಿಸ್ಕೊಂಡಿದ್ದಾಯ್ತು. ಈಗ  ದಾವಣಗೆರೆಯಲ್ಲಿ ಇಬ್ಬರೂ ಕೈ ಕೈ ಹಿಡಿದು ಎತ್ತಿ ಜನರಿಗೆ ತೋರಿಸಿದ್ದಾರೆ. ಯಾರು ಯಾರ ಬೆನ್ನಿಗೆ ಚೂರಿ ಹಾಕ್ತಾರೋ ಮುಂದೆ ನೋಡೋಣ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಅವರು ಚನ್ನಪಟ್ಟಣದಲ್ಲಿ ಪತ್ರಕರ್ತರಿಗೆ ಪ್ರತಿಕ್ರಿಯಿಸಿದ್ದಾರೆ. ದಾವಣಗೆರೆಯಲ್ಲಿ ನಡೆದ ಸಿದ್ಧರಾಮಯ್ಯ ಅಮೃತ ಮಹೋತ್ಸವ ವೇದಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮತ್ತು ಸಿದ್ಧರಾಮಯ್ಯ ತಮ್ಮ ಕೈಗಳನ್ನು ಎತ್ತಿ ಜನರಿಗೆ ಒಗ್ಗಟ್ಟು ಪ್ರದರ್ಶಿಸಿರುವುದರ ಕುರಿತಾಗಿ ಮಾತನಾಡಿ, ಸಂದರ್ಭಕ್ಕೆ ತಕ್ಕಂತೆ … Read more

error: Content is protected !!