ನಿವೃತ್ತ ಸರ್ಕಾರಿ ನೌಕರರಿಗೆ ಆರೋಗ್ಯ ಯೋಜನೆ ವಿಸ್ತರಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360, ಬೆಂಗಳೂರು, ಜು. 08: ನಿವೃತ್ತ ಸರ್ಕಾರಿ ನೌಕರರಿಗೆ ಆರೋಗ್ಯ ಯೋಜನೆಯ  ವಿಸ್ತರಣೆ ಮಾಡುವುದಾಗಿ   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು  ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ  ಆಯೋಜಿಸಿದ್ದ  ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ  ಸುವರ್ಣ ಮಹೋತ್ಸವವನ್ನು ಉದ್ಘಾಟಿಸಿ  ಮಾತನಾಡಿದರು. ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಆದಷ್ಟು ಬೇಗನೆ  ಈ ಬಗ್ಗೆ ಘೋಷಣೆ ಮಾಡಲಾಗುವುದು. ನಿವೃತ್ತ ನೌಕರರು ನಿರಂತರವಾಗಿ  ಕ್ರಿಯಾಶೀಲರಾಗಿದ್ದು, ಉತ್ತಮ ಸಮಾಜ ನಿರ್ಮಾಣಕ್ಕೆ ಕಟಿಬದ್ಧರಾಗಿ ಕೆಲಸ ಮಾಡಬೇಕು ಎಂದರು. … Read more

error: Content is protected !!