ಐಕಿಯಾದಿಂದ ಸ್ಥಳೀಯರಿಗೆ ಶೇ 75 ರಷ್ಟು ಉದ್ಯೋಗಾವಕಾಶ: ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರಿನಲ್ಲಿ ಐಕಿಯಾ ಪೀಠೋಪಕರಣ ಮಳಿಗೆಗೆ ಮುಖ್ಯಮಂತ್ರಿ ಚಾಲನೆ ಸುದ್ದಿ360 ಬೆಂಗಳೂರು, ಜೂನ್ 22: ಐಕಿಯಾ ಪೀಠೋಪಕರಣ ಮಳಿಗೆಯಿಂದಾಗಿ ಸ್ಥಳೀಯರಿಗೆ ಅತಿ ಹೆಚ್ಚು ಉದ್ಯೋಗಾವಕಾಶ ದೊರೆಯಲಿದೆ. ಶೇ 75 ರಷ್ಟು ಸ್ಥಳೀಯರಿಗೆ ಉದ್ಯೋಗ ನೀಡುವ ಭರವಸೆಯನ್ನು ಸಂಸ್ಥೆಯ ಮುಖ್ಯಸ್ಥರು ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ಸ್ವೀಡನ್ ಮೂಲದ ಗೃಹ ಪೀಠೋಪಕರಣಗಳ ಮಾರಾಟ ಕಂಪನಿ ‘ಐಕಿಯಾ’ ದ ಅತಿದೊಡ್ಡ ಮಳಿಗೆಯನ್ನು ನಗರದ ನಾಗಸಂದ್ರದಲ್ಲಿ ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ದಾವೋಸ್ ನಲ್ಲಿ ಅಂತಾರಾಷ್ಟ್ರೀಯ ಐಕಿಯಾ … Read more