ಹುಬ್ಬಳ್ಳಿ: ರಾಣಿ ಚೆನ್ನಮ್ಮ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಅನುಮತಿಗಾಗಿ 2ನೇ ದಿನಕ್ಕೆ ಕಾಲಿಟ್ಟ ಧರಣಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ
ಸುದ್ದಿ360, ಹುಬ್ಬಳ್ಳಿ ಸೆ.15: ನಗರದ ರಾಣಿ ಚನ್ನಮ್ಮ ಮೈದಾನ(ಈದ್ಗಾ)ದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ಶುಕ್ರವಾರವೂ ಮುಂದುವರಿದಿದೆ. ಅರವಿಂದ ಬೆಲ್ಲದ ನೇತೃತ್ವದಲ್ಲಿ ಗುರುವಾರ ಬೆಳಗ್ಗೆಯಿಂದಲೇ ಪ್ರತಿಭಟನೆ ಹು-ಧಾ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ಗುರುವಾರ ಬೆಳಗ್ಗೆಯಿಂದ ಆರಂಭವಾದ ಪ್ರತಿಭಟನೆ ಅಹೋರಾತ್ರಿ ನಡೆಯಿತು. ಪಾಲಿಕೆಯ ಬಿಜೆಪಿ ಸದಸ್ಯರು ಆಯುಕ್ತರ ಕಚೇರಿಯಲ್ಲಿಯೇ ಮಲಗಿ ಪ್ರತಿಭಟಿಸಿದರು. ಬೆಂಗಳೂರಿನಿಂದ ಹುಬ್ಬಳ್ಳಿಗೆ ಶುಕ್ರವಾರ ಬೆಳಗ್ಗೆ ಬಂದ ಹು-ಧಾ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ … Read more