ಇದೆ ವರ್ಷ ಕಬಿನಿ ಜಲಾಶಯ ಉದ್ಯಾನವನ ಕಾಮಗಾರಿ ಪ್ರಾರಂಭ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360,ಮೈಸೂರು, ಜುಲೈ 20: ಇದೇ ವರ್ಷ ಕಬಿನಿ ಜಲಾಶಯದ ಉದ್ಯಾನವನ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆಮಾಡಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಕಬಿನಿ ಜಲಾಶಯದ  ಉದ್ಯಾನವನವನ್ನು ಸರ್ಕಾರ ಮಾಡಬೇಕೋ ಅಥವಾ ಪಿಪಿಪಿ ಮಾದರಿಯಲ್ಲಿ ಮಾಡಬೇಕೋ ಎಂಬ ಗೊಂದಲದಲ್ಲಿದೆ.  ಗೊಂದಲ ವನ್ನು ಆದಷ್ಟು ಬೇಗನೇ ನಿವಾರಿಸಿ ಕಾಮವಾರಿಯನ್ನು ಕೈಗೊಳ್ಳಲಾಗುವುದು ಎಂದರು. ಹೆಚ್.ಡಿ.ಕೋಟೆಗೆ ವಿಶೇಷ ಕಾರ್ಯಕ್ರಮ ಹೆಚ್.ಡಿ.ಕೋಟೆ ತಾಲ್ಲೂಕು ಹಿಂದುಳಿದ ತಾಲ್ಲೂಕು ಎಂದು ನಂಜುಂಡಪ್ಪ ವರದಿಯಲ್ಲಿ ಉಲ್ಲೇಖಿಸಲಾಗಿದೆ. … Read more

ಕಬಿನಿ ಜಲಾಶಯ ಕ್ಕೆ ಮುಖ್ಯಮಂತ್ರಿ ಬಾಗಿನ

ಸುದ್ದಿ360 ಮೈಸೂರು,ಜುಲೈ 20: ಇಂದು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಕಬಿನಿ ಜಲಾಶಯದ ಬಳಿ ಆಯೋಜಿಸಿರುವ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಬಸವರಾಜ ಬೊಮ್ಮಾಯಿಯವರ ಪತ್ನಿ ಚೆನ್ನಮ್ಮ, ಜಲ ಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ್ ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್ ಟಿ ಸೋಮಶೇಖರ ಸೇರಿದಂತೆ ಇತರೆ ಮುಖಂಡರು ಉಪಸ್ಥಿತರಿದ್ದರು.

error: Content is protected !!