ಸಿದ್ಧರಾಮೋತ್ಸವ ಬಳಿಕ ಬೆಣ್ಣೆನಗರಿಯಲ್ಲಿ ಮತ್ತೊಂದು ಬೃಹತ್ ಸಮಾವೇಶ

ಎಸ್‌ಎಸ್‌ಎಂ 55  ಅದ್ದೂರಿ ಕಾರ್ಯಕ್ರಮಕ್ಕೆ ಭೂಮಿಪೂಜೆ ಸುದ್ದಿ360 ದಾವಣಗೆರೆ, ಸೆ.09: ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನರವರ 55ನೇ ಜನ್ಮದಿನಾಚರಣೆ ಇದೇ ತಿಂಗಳ 22 ರಂದು ನಡೆಯಲಿದ್ದು, ಜನ್ಮದಿನಾಚರಣೆ ಅಂಗವಾಗಿ ನಗರದ ಎಸ್‌ಎಸ್ ಲೇಔಟ್ ಬಿ ಬ್ಲಾಕ್‌ನಲ್ಲಿರುವ ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಹೈಟೆಕ್ ಎಜುಕೇಷನ್ (ಎಂಬಿಎ ಕಾಲೇಜು) ಮೈದಾನದಲ್ಲಿ ಶುಕ್ರವಾರ ಎಸ್‌ಎಸ್‌ಎಂ 55ನೇ ಜನ್ಮದಿನ ಸಮಾರಂಭದ ವೇದಿಕೆ ನಿರ್ಮಾಣಕ್ಕೆ ಇಂದು ಭೂಮಿ ಪೂಜೆ ನೆರವೇರಿಸಲಾಯಿತು. ಎಸ್‌ಎಸ್‌ಎಂ ಅಭಿಮಾನಿ ಬಳಗ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ಬೆಣ್ಣೆನಗರಿಯಲ್ಲಿ ಯಶಸ್ವಿಯಾಗಿ ಮತ್ತು ಅದ್ದೂರಿಯಾಗಿ … Read more

ಕೇಂದ್ರ ನೀತಿ ಆಯೋಗ ಮಾದರಿಯಲ್ಲಿ ಕರ್ನಾಟಕ ರಾಜ್ಯ ಪರಿವರ್ತನಾ  ಸಂಸ್ಥೆ ರಚನೆಗೆ ಆದೇಶ

ಸುದ್ದಿ360 ಬೆಂಗಳೂರು, ಆ. 06:  ಕೇಂದ್ರ ನೀತಿ ಆಯೋಗದ ಮಾದರಿಯಂತೆ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗವನ್ನು  ಕರ್ನಾಟಕ ರಾಜ್ಯ ಪರಿವರ್ತನಾ  ಸಂಸ್ಥೆ ಎಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ರಚಿಸಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ. ನವ ಭಾರತಕ್ಕಾಗಿ ನವ ಕರ್ನಾಟಕವನ್ನು ನಿರ್ಮಿಸುವ ಉದ್ದೇಶದಿಂದ ರಚಿಸಲಾಗಿರುವ ಸಂಸ್ಥೆಗೆ  ಸರ್ಕಾರದ ಯೋಜನೆ ಹಾಗೂ ಸಂಬಂಧಿಸಿದ ವಿಷಯಗಳಲ್ಲಿ  ಪರಿಣಿತರಾದವರನ್ನು  ಸರ್ಕಾರದಿಂದ ಉಪಾಧ್ಯಕ್ಷರನ್ನಾಗಿ  ನಾಮನಿರ್ದೇಶನ ಮಾಡಲಾಗುವುದು. ಸಂಸ್ಥೆಯನ್ನು ಪರಿಣಾಮಕಾರಿಯಾಗಿ ನಡೆಸಲು ಹಾಗೂ ಗುರಿಗಳನ್ನು ಸಾಧಿಸಲು ವಾರ್ಷಿಕ 150 ಕೋಟಿ ರೂ.ಗಳನ್ನು  … Read more

ಮಳೆ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ ವಿಡಿಯೋ ಕಾನ್ಪರೆನ್ಸ್ ಮೂಲಕ ಸಿಎಂ ಗೆ ಮಾಹಿತಿ

ಸುದ್ದಿ360 ಬೆಂಗಳೂರು, ಆ.2: ರಾಜ್ಯದ  ಹಲವೆಡೆ ಹಾಗೂ ಕರಾವಳಿ ಭಾಗದಲ್ಲಿ ಪುನ: ಹೆಚ್ಚು ಮಳೆಯಾಗುತ್ತಿದೆ.  ಮಳೆ ಅನಾಹುತದಿಂದ ಸಾವು ನೋವುಗಳಾಗಿದ್ದು, ಹೆಚ್ಚು ಮಳೆಯಾಗಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಿಗೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಮಳೆ ಪೀಡಿತ 11 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ‌ ಸಭೆ ನಡೆಯಿತು. ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಹಣಕಾಸು ಇಲಾಖೆ ಎಸಿಎಸ್ ಐಎಸ್ಎನ್ ಪ್ರಸಾದ, … Read more

ಬೇಡಿಕೆಗಳ ಈಡೇರಿಕೆಗಾಗಿ ತೀವ್ರ ಹೋರಾಟದ ಅಗತ್ಯವಿದೆ : ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಎಂ ಸಿ ಡೋಂಗ್ರೆ

ಸುದ್ದಿ360 ಶಿವಮೊಗ್ಗ, ಜು.25: ಬೆಲೆ ಏರಿಕೆ ನಿಯಂತ್ರಿಸಲಾಗದೆ ಜನಸಾಮಾನ್ಯರ ಬದುಕು ದುಸ್ತರವಾಗಿಸಿರುವ ಸರ್ಕಾರಗಳ ಮುಂದೆ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ತೀವ್ರ ಹೋರಾಟದ ಅಗತ್ಯವಿದೆ. ಮತ್ತು ಅದಕ್ಕಾಗಿ ರೂಪರೇಷೆ ಸಿದ್ದಪಡಿಸಿಕೊಳ್ಳಬೇಕೆಂದು ಎಐಟಿಯುಸಿ ರಾಜ್ಯ ಸಮಿತಿ ಉಪಾಧ್ಯಕ್ಷರಾದ ಎಂ ಸಿ ಡೋಂಗ್ರೆ ಹೇಳಿದರು. ಶಿವಮೊಗ್ಗ ನಗರದ ಭೋವಿಭವನದಲ್ಲಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಶನ್(ಎಐಟಿಯುಸಿ ಸಂಯೋಜಿತ) ರಾಜ್ಯ ಸಮಿತಿ ಆಯೋಜಿಸಿದ್ದ ಬಿಸಿಯೂಟ ತಯಾರಕ ಮಹಿಳೆಯರಿಗಿರುವ ಸಮಸ್ಯೆಗಳು ಸವಾಲುಗಳು ಮತ್ತು ಪರಿಹಾರ ಕುರಿತು ಏರ್ಪಡಿಸಿದ್ದ ರಾಜ್ಯಮಟ್ಟದ ಸಂಘಟನಾ ಸಮಾವೇಶ ಉದ್ಘಾಟಿಸಿ ಅವರು … Read more

ನಿಗಮ ಮಂಡಳಿ: ಹೊಸಬರಿಗೆ ಅವಕಾಶ

ಸುದ್ದಿ360 ಮೈಸೂರು, ಜು.12: ನಿಗಮ ಮಂಡಳಿಗಳಿಗೆ ಹೊಸಬರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ನಿಗಮ ಮಂಡಳಿಗಳ ಕೋರ್ ಕಮಿಟಿಯಲ್ಲಿ  ಒಂದೂವರೆ ವರ್ಷ ಮೇಲ್ಪಟ್ಟವರನ್ನು ತೆಗೆದು ಹೊಸಬರಿಗೆ ಅವಕಾಶ ನೀಡಬೇಕು ಎನ್ನುವ ತೀರ್ಮಾನ ಆರು ತಿಂಗಳ ಹಿಂದೆಯೇ ಆಗಿದೆ. ಈ ನಿಟ್ಟಿನಲ್ಲಿ ಬೇರೆಯವರಿಗೂ ಅವಕಾಶ ಒದಗಿಸುವ ಕಾರ್ಯ ನಡೆಯುತ್ತಿದೆ ಎಂದಿದ್ದಾರೆ.

ಗುತ್ತಿಗೆ, ಹೊರಗುತ್ತಿಗೆ ನೌಕರರ ವೇತನ ಪರಿಷ್ಕರಣೆಗೆ ಸಕಾರಾತ್ಮಕ ಸ್ಪಂದನೆ

ಸುದ್ದಿ360, ಬೆಂಗಳೂರು, ಜು.08:  ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ-ಹೊರಗುತ್ತಿಗೆ ನೌಕರರ ವೇತನವನ್ನು ಹೆಚ್ಚಳ ಮಾಡಲು ಸರ್ಕಾರ ಪ್ರಯತ್ನ ಮಾಡಲಾಗುತ್ತಿದೆ. ಅಲ್ಲದೆ ಆರೋಗ್ಯ ವಿಮೆ ವಿಸ್ತರಿಸಲು ಕೂಡ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮುಷ್ಕರ ನಡೆಸುತ್ತಿರುವ ಗುತ್ತಿಗೆ-ಹೊರಗುತ್ತಿಗೆ ನೌಕರರನ್ನು ಭೇಟಿಯಾಗಿ ಚರ್ಚೆ ನಡೆಸಿದ ಬಳಿಕ ಮಾತನಾಡಿದ ಅವರು, ಸರ್ಕಾರದ ಇತಿಮಿತಿಯೊಳಗೆ ಎಲ್ಲಾ ಬೇಡಿಕೆಗಳನ್ನು ಆದಷ್ಟು ಶೀಘ್ರದಲ್ಲಿ ಈಡೇರಿಸಲಾಗುವುದು. ಶ್ರೀನಿವಾಸಾಚಾರಿಯವರ ವರದಿ ಅನುಷ್ಠಾನಕ್ಕೆ … Read more

ಪಠ್ಯಪುಸ್ತಕ ಪರಿಷ್ಕರಣೆ ಲೋಪ ವಿರೋಧಿಸಿ ಎನ್.ಎಸ್.ಯು.ಐ ನಿಂದ ತಿರಂಗ ರ‍್ಯಾಲಿ

ಸುದ್ದಿ360,ದಾವಣಗೆರೆ,ಜು.05: ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆಯ ಲೋಪದಿಂದ ರಾಜ್ಯದ ವಿದ್ಯಾರ್ಥಿಗಳ ಮೇಲೆ ಅಗಾಧ ಪರಿಣಾಮ ಬೀರಿದೆ. ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಿಂಚಿತ್ತೂ ಯೋಚನೆ ಮಾಡದ ರಾಜ್ಯ ಬಿಜೆಪಿ ಸರ್ಕಾರ ಪ್ರತಿಯೊಂದು ಹಂತದ ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಎನ್.ಎಸ್‌.ಯು.ಐ ಘಟಕ ಮಂಗಳವಾರ ಜನಜಾಗೃತಿ ರ‍್ಯಾಲಿ ನಡೆಸಿತು. ಮೂರು ನೂರು ಅಡಿಗಳ ತಿರಂಗದೊಂದಿಗೆ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ರ‍್ಯಾಲಿಯಲ್ಲಿ ಭಾಗವಹಿಸಿದ್ದರು.  ನಗರದ ಎವಿಕೆ ಕಾಲೇಜು ಸಮೀಪದಿಂದ ಆರಂಭಗೊಂಡ ರ‍್ಯಾಲಿ ಬಿ.ಎಸ್.ಚನ್ನಬಸಪ್ಪ ಅಂಗಡಿಯ ಮುಂಭಾಗದಿಂದ … Read more

ಪಠ್ಯಪುಸ್ತಕ ಸಲಹೆಗೆ ಸರ್ಕಾರ ಮುಕ್ತವಾಗಿದೆ: ಸಿಎಂ ಬೊಮ್ಮಾಯಿ

ಸುದ್ದಿ360 ದಾವಣಗೆರೆ ಜೂ.16: ಈ ಹಿಂದಿನ ಪಠ್ಯಪುಸ್ತಕದ ಬಗ್ಗೆಯೂ ಆಕ್ಷೇಪಣೆಗಳಿವೆ.  ಯಾವುದನ್ನು ಸರಿಪಡಿಸಬೇಕು ಎಂಬುದರ ಬಗ್ಗೆ ಸಲಹೆಗೆ ಮುಕ್ತ ಅವಕಾಶವಿದೆ. ರಾಜ್ಯದ ಜನರ ಸಲಹೆ ಸೂಚನೆ ಪಡೆದು ವೆಬ್ ಸೈಟ್ ನಲ್ಲಿ ಹಾಕಲಾಗುವುದು. ಒಟ್ಟಾರೆ ಎಲ್ಲಾ ಆಕ್ಷೇಪಣೆಗಳಿಗೆ ಸಲಹೆ ಪಡೆದ ನಂತರ ಪಠ್ಯ ಪರಿಷ್ಕರಣೆ ಅಂತಿಮ ರೂಪ ಪಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ದಾವಣಗೆರೆಯ ಜಿಎಂಐಟಿ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಪ್ಪಳ್ಳಿಯಿಂದ ಬೆಂಗಳೂರಿಗೆ ಪ್ರಗತಿಪರರು ಪಾದಯಾತ್ರೆ ಮಾಡುತ್ತಿರುವ  ಕುರಿತ ಮಾಧ್ಯಮದವರ ಪ್ರಶ್ನೆಗೆ … Read more

error: Content is protected !!