‘ವನ್ಯಜೀವಿ ಸಾಕಾಣಿಕೆ ಲೈಸನ್ಸ್ ಬಹಿರಂಗಪಡಿಸಿ – ಅಮಾಯಕರನ್ನು ಕೈಬಿಡಲು ಆಗ್ರಹ

ಸುದ್ದಿ360  ದಾವಣಗೆರೆ ಡಿ.27: ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ಶೆಡ್ಯೂಲ್ಡ್ ವನ್ಯಜೀವಿಗಳನ್ನು ಅಕ್ರಮವಾಗಿ ಸಾಕಾಣಿಕೆ ಮಾಡಲಾಗಿದ್ದ ಪ್ರಕರಣದಲ್ಲಿ ಸ್ಥಳದ ಮಾಲೀಕ ಎಸ್.ಎಸ್. ಮಲ್ಲಿಕಾರ್ಜುನ ಅವರನ್ನು ಆರೋಪಿ ನಂ.-1ನ್ನಾಗಿ ನಮೂದಿಸಲಾಗಿಲ್ಲ. ಅಲ್ಲದೆ ಇಲ್ಲಿ ಹೊಟ್ಟೆಪಾಡಿಗಾಗಿ ಕೆಲಸ ನಿರ್ವಹಿಸುತ್ತಿದ್ದ ಕೆಲಸಗಾರರನ್ನು ಆರೋಪಿಯನ್ನಾಗಿ ಮಾಡಲಾಗಿದೆ ಎಂದು ಎಂದು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಯಶವಂತ ರಾವ್ ಜಾಧವ್‌ ಆರೋಪಿಸಿದರು. ವನ್ಯಜೀವಿಗಳು ಸಿಕ್ಕಿರುವ ರೈಸ್ ಮಿಲ್ಲು ಯಾರ ಒಡೆತನದಲ್ಲಿ ಇದೆ ಎಂಬುದನ್ನು ಎಸ್‍ಎಸ್‍ ಮಲ್ಲಿಕಾರ್ಜುನ್ ಅವರು  ಹೇಳಲಿ. ವನ್ಯಜೀವಿಗಳ ಸಾಕಾಣಿಕೆಗೆ ಅಧಿಕೃತ ಲೈಸನ್ಸ್ … Read more

ಜನಸಾಮಾನ್ಯರ ಆರ್ಥಿಕತೆಗೆ ತೊಂದರೆಯಾಗದಂತೆ ಕೋವಿಡ್ ಮುಂಜಾಗ್ರತಾ ಕ್ರಮಗಳ ಜಾರಿ : ಸಿಎಂ ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಬೆಳಗಾವಿ, ಡಿ. 26 :  ಕೋವಿಡ್ ನಿಂದಾಗಿ ಜನರ ಆರ್ಥಿಕತೆಗೆ ಯಾವುದೇ  ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಹಂತಹಂತವಾಗಿ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿ ಸುವರ್ಣಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಬಗ್ಗೆ ಪ್ರತಿಕ್ರಿಯೆ ನೀಡಿ, ಸಚಿವಸಂಪುಟದಲ್ಲಿ ಈ ಬರ್ಗೆ ಚರ್ಚಿಸಲಾಗಿದ್ದು, ಜನರಲ್ಲಿ  ಜಾಗೃತಿ ಮೂಡಿಸುವುದು, ಬೂಸ್ಟರ್ ಡೋಸ್ ಹೆಚ್ಚಿಸುವುದು, ಐಎಲ್ಐ ಮತ್ತು ಸಾರಿ ಪರೀಕ್ಷೆಗಳನ್ನು ಹೆಚ್ಚಿಸುವುದು, ಮಾಸ್ಕ್ ಗಳ ಧಾರಣೆ, ಒಳಾಂಗಣಗಳಲ್ಲಿ ಮಾಸ್ಕ್ … Read more

ವನ್ಯಜೀವಿ ಪತ್ತೆ ಪ್ರಕರಣ: ಎಸ್ ಎಸ್ ಮಲ್ಲಿಕಾರ್ಜುನ್ ಬಂಧನಕ್ಕೆ ಆಗ್ರಹ

ಉಪ್ಪು ತಿಂದವರು ನೀರು ಕುಡಿಯಲೇಬೇಕು- ಜಿ.ಎಂ. ಸಿದ್ದೇಶ್ವರ್ ಸುದ್ದಿ360 ದಾವಣಗೆರೆ ಡಿ.25:  ನಗರದ ಕಲ್ಲೇಶ್ವರ ರೈಸ್ ಮಿಲ್ ನಲ್ಲಿ ವನ್ಯಜೀವಿಗಳ ಪತ್ತೆಯಾಗಿದ್ದು, ಇದು ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ರ ಒಡೆತನದ ಮಿಲ್ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವಾಗಿದೆ. ಹೀಗಿದ್ದರೂ ಆರೋಪಿಗಳನ್ನು ಬಂಧಿಸುವಲ್ಲಿ ಅಧಿಕಾರಿಗಳು ಹಿಂದೆಬಿದ್ದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಎಫ್ಓ ಯಾರದೋ ಒತ್ತಡಕ್ಕೆ ಮಣಿದಂತೆ ಕಾಣುತ್ತಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಅನುಮಾನ ವ್ಯಕ್ತಪಡಿಸಿದರು. ಅವರು ಇಂದು ಜಿಎಂಐಟಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಕರಣದಲ್ಲಿ … Read more

ಓಪಿಎಸ್: ಹೈಕಮಾಂಡ್‍ನೊಂದಿಗೆ ಚರ್ಚೆ – ಸಿದ್ಧರಾಮಯ್ಯ

ಸುದ್ದಿ360  ದಾವಣಗೆರೆ ಡಿ.25: ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ ಕುರಿತು ಪಕ್ಷದ ಹೈಕಮಾಂಡ್‍ನೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ. ಹೊಸ ಪಿಂಚಣಿ ಯೋಜನೆ (ಎನ್ ಪಿ ಎಸ್) ರದ್ದುಗೊಳಿಸಿ  ಓಪಿಎಸ್ ಜಾರಿಗೊಳಿಸುವಂತೆ ಆಗ್ರಹಿಸಿ ಸರ್ಕಾರಿ ನೌಕರರು ರಾಜಧಾನಿಯ ಸ್ವಾತಂತ್ರ್ಯ  ಉದ್ಯಾನವನದಲ್ಲಿ ಹಮ್ಮಿಕೊಂಡಿರುವ ಅನಿರ್ಧಿಷ್ಟಾವಧಿ ಧರಣಿ ಸ್ಥಳಕ್ಕೆ ಶನಿವಾರ ಭೇಟಿ ನೀಡಿ ಧರಣಿ ನಿರತರ ಅಹವಾಲು ಸ್ವೀಕರಿಸಿ ಮಾತನಾಡಿದರು. ನಾನ್ನ ಅಧಿಕಾರಾವಧಿಯಲ್ಲಿ  ಓಪಿಎಸ್ ಜಾರಿ ಮಾಡಲು ಸಾಧ್ಯವಿಲ್ಲ ಎಂದು ನಾನು … Read more

ಮಹಾರಾಷ್ಟ್ರ ಮುಖ್ಯಮಂತ್ರಿಗಳು ರಾಜ್ಯಗಳ ನಡುವೆ ವ್ಯಾಜ್ಯ ಹೆಚ್ಚಿಸುವ ಕೆಲಸ ಮಾಡಬಾರದು: ಸಿಎಂ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360, ಬೆಂಗಳೂರು, ನ. 22: ರಾಜ್ಯ ರಾಜ್ಯಗಳ ನಡುವೆ ವ್ಯಾಜ್ಯ ಹೆಚ್ಚಿಸುವ ಕೆಲಸವನ್ನು ಮಹಾರಾಷ್ಟ್ರ ಸರ್ಕಾರದ ಮುಖ್ಯಮಂತ್ರಿಗಳು ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಹಾರಾಷ್ಟ್ರದ ಕನ್ನಡ ಶಾಲೆಗಳಿಗೆ ವಿಶೇಷ ಅನುದಾನಗಡಿ ಅಭಿವೃದ್ಧಿ ಪ್ರಾಧಿಕಾರವು ಮಹಾರಾಷ್ಟ್ರದಲ್ಲಿರುವ ಕನ್ನಡ ಶಾಲೆಯ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಬೇಕೆನ್ನುವ ತೀರ್ಮಾನ ಮಾಡಲಾಗಿದೆ. ಏಕೀಕರಣ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಹಾಗೂ ಗೋವಾ ವಿಮೋಚನೆಗೆ ಕೆಲಸ ಮಾಡಿದ ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ದಾಖಲೆಗಳನ್ನು ತರಿಸಿ … Read more

ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಮುನ್ನಡೆಸಿದ ಖ್ಯಾತಿ ನೆಹರು  ಅವರದ್ದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ನವೆಂಬರ್ 14: ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಮುನ್ನಡೆಸಿರುವ ಖ್ಯಾತಿ ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರಿಗೆ ಸಲ್ಲುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು  ಭಾರತದ ಪ್ರಥಮ ಪ್ರಧಾನಿ ಪಂಡಿತ್ ನೆಹರು ಅವರ ಜನ್ಮದಿನದ ಅಂಗವಾಗಿ ವಿಧಾನ ಸೌಧದ ಮುಂಭಾಗದಲ್ಲಿರುವ ಅವರ  ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಮಕ್ಕಳನ್ನು ಅತ್ಯಂತ ಪ್ರೀತಿ ಮತ್ತು ವಾತ್ಸಲ್ಯದಿಂದ ಕಾಣುತ್ತಿದ್ದ ನಮ್ಮ ರಾಷ್ಟ್ರದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ … Read more

ಕೇಸರಿ ಕಂಡರೆ ಏಕೆ ಸಿಟ್ಟು? ಎಲ್ಲದರಲ್ಲೂ ರಾಜಕಾರಣ ಸಲ್ಲದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ನವೆಂಬರ್ 14: ಎಲ್ಲದರಲ್ಲೂ ರಾಜಕಾರಣ ಮಾಡುವುದು ಬಹಳ ಕೆಳ ಮಟ್ಟದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುತ್ತಿರುವುದನ್ನು ಕಾಂಗ್ರೆಸ್ ವಿರೋಧಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು. ಕೇಸರಿ ಬಣ್ಣ ಭಾರತದ ಧ್ವಜದಲ್ಲಿಯೇ ಇದೆ.  ಕೇಸರಿ ಕಂಡರೆ ಏಕೆ ಸಿಟ್ಟು? ಸ್ವಾಮಿ ವಿವೇಕಾನಂದರ ಹೆಸರಿನಲ್ಲಿಯೇ ಶಾಲಾ ಕೊಠಡಿಗಳನ್ನು  … Read more

ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಶಿವಮೊಗ್ಗದ ಅಜಯ್ ದ್ವಿತೀಯ

ಸುದ್ದಿ360 ಶಿವಮೊಗ್ಗ ನ. 12: ಶಿವಮೊಗ್ಗದ ಆಕ್ಸ್ ಫರ್ಡ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ ಹಾಗೂ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಕ್ರೀಡಾಂಗಣದಲ್ಲಿ  ಕರಾಟೆ ತರಬೇತಿ ದಾರರಾದ  ಸನ್ ಸೈ  ಶ್ರೇಯಸ್ ರವರ ವಿದ್ಯಾರ್ಥಿ ಯಾದ  ಅಜಯ್ ಮಂಗಳೂರಿನ ಕಟೀಲಿನಲ್ಲಿ ನಡೆಯುತ್ತಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ 60 ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು  ಪಡೆದಿದ್ದಾರೆ. ವಿಜೇತ ಕ್ರೀಡಾಪಟುವಿಗೆ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ಶಿವಮೊಗ್ಗ ವಿನೋದ್ ಅಭಿನಂದಿಸಿದ್ದಾರೆ.

ಅಯೊಧ್ಯೆಗೆ ಸೀತೆಯ ದೊಡ್ಡ ನಮಸ್ಕಾರ !?

ಹೆಣ್ಣಿನ ಕ್ರಿಯಾಶೀಲತೆ ಸಹಿಸದ ಗಂಡಿನಿಂದ ದೌರ್ಜನ್ಯ: ಬಂಡಾಯ ಸಾಹಿತಿ ಡಾ. ಕಾಳೇಗೌಡ ಅಭಿಮತ

ನಮ್ಮ ದಾವಣಗೆರೆಯ ಫಲಪುಷ್ಪ ಪ್ರದರ್ಶನದಲ್ಲಿ ಕರ್ನಾಟಕ ರತ್ನ ಪುನೀತನ ಮೆರುಗು

ಕಣ್ಮನ ಸೆಳೆದ ಫಲಪುಷ್ಪ ಪ್ರದರ್ಶನ ಸುದ್ದಿ360 ದಾವಣಗೆರೆ ನ.12: ಏಷ್ಯಾದಲ್ಲಿಯೇ ದೊಡ್ಡ ಗಾಜಿನಮನೆ ಎಂಬ ಖ್ಯಾತಿ ಹೊಂದಿರುವ ಬೆಣ್ಣೆನಗರಿಯ ಗಾಜಿನ ಮನೆಯಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನ ವೀಕ್ಷಕರ ಕಣ್ಮನ ಸೆಳೆಯುತ್ತಿದೆ. ನಗರದ ಹೊರ ವಲಯ ಗಾಜಿನಮನೆ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ತೋಟಗಾರಿಕೆ ಸಂಘದ ಸಂಯುಕ್ತಾಶ್ರಯದಲ್ಲಿ ಫಲಪುಷ್ಪ ಪ್ರದರ್ಶನ ಆಯೋಜನೆಗೊಂಡಿದ್ದು,  ಇದೇ ನವೆಂಬರ್ 10 ರಿಂದ 4 ದಿನಗಳ ಕಾಲ ನಡೆಯುತ್ತಿದೆ. ವಿಶೇಷವಾಗಿ ಇಲ್ಲಿ ಅಪ್ಪುವಿನ ತೀಮ್ ನೋಡುಗರನ್ನು ಪುನೀತನನ್ನಾಗಿ ಮಾಡಿದೆ. … Read more

error: Content is protected !!