ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ಬೆಂಗಳೂರು ನವೆಂಬರ್ 11 : ರಾಜ್ಯದ ಬಹುನಿರೀಕ್ಷಿತ ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ್ ವಿಶೇಷ ರೈಲಿಗೆ ಹಸಿರು ನಿಶಾನೆ ತೋರುವುದರ ಮೂಲಕ ಪ್ರಧಾನಿ ನರೇಂದ್ರ ಮೋದಿ ಇಂದು ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಚಾಲನೆ ನೀಡಿದರು. ಎಂಟು ದಿನಗಳ ಕಾಶಿ ದರ್ಶನದ ಈ ರೈಲು ವಾರಣಾಸಿ, ಪ್ರಯಾಗ್ ರಾಜ್, ಅಯೋಧ್ಯಾ ಮುಂತಾದ ಪವಿತ್ರ ಸ್ಥಳಗಳಿಗೆ ಯಾತ್ರಿಕರನ್ನು ಕರೆದೊಯ್ಯುತ್ತದೆ. ಮುಜರಾಯಿ ಇಲಾಖೆ ಭಾರತ ಸರ್ಕಾರದ ಸಹಯೋಗದಲ್ಲಿ ಈ ಕಾಶಿ ದರ್ಶನ ಯಾತ್ರೆ ಆಯೋಜಿಸಲಾಗಿದೆ. ಈ ಯಾತ್ರೆಗೆ … Read more

ಕಾಂಗ್ರೆಸ್ಸಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಸೆ.23: ಕಾಂಗ್ರೆಸ್ ಪಕ್ಷದವರದ್ದು ಹೆಜ್ಜೆ ಹೆಜ್ಜೆಗೂ ಸ್ಕ್ಯಾಮ್ಗಳಿವೆ. ಕಾಂಗ್ರೆಸ್ಸಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸಭೆಯ ಅಧಿವೇಶನ ಮುಕ್ತಾಯವಾದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಪಕ್ಷದ ವತಿಯಿಂದ ಪುಸಕ್ತವನ್ನೇ ಬಿಡುಗಡೆ ಮಾಡಿದ್ದೆವು. ಅವರು ಭ್ರಷ್ಟರಾಗಿದ್ದುಕೊಂಡು ಅಭಿಯಾನ ಮಾಡುತ್ತಾರಂತೆ. ಯಾವ ಅಭಿಯಾನವನ್ನಾದರೂ ಮಾಡಲಿ, ಕೊನೆಗೆ ಸತ್ಯಕ್ಕೆ ಜಯ ಸಿಗಲಿದೆ. ಒಂದು ಸಣ್ಣ ಪುರಾವೆ ಇಲ್ಲದೆ ಮಾತನಾಡುವ ಈ ಪ್ರವೃತ್ತಿ ಬಹಳ … Read more

‘ಸಿ.ಟಿ. ರವಿ’ಯವರಿಗೆ ‘ಲೂಟಿ ರವಿ’ ಎಂದದ್ದು ಸಿದ್ಧರಾಮಯ್ಯರಲ್ಲ. . .

ಸುದ್ದಿ360 ದಾವಣಗೆರೆ, ಸೆ.13: ಸಿ .ಟಿ .ರವಿಯವರಿಗೆ ‘ಲೂಟಿ ರವಿ’ ಎಂಬ ಅನ್ವರ್ಥನಾಮ ಇಟ್ಟಿದ್ದು ಸಿದ್ದರಾಮಯ್ಯರಲ್ಲ. ಸ್ವತಃ ಅವರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರೇ ರವಿಯವರನ್ನು ಲೂಟಿ ರವಿ ಎನ್ನುತ್ತಾರೆ. ಇದನ್ನು ಸಿದ್ದರಾಮಯ್ಯ‌ ಹೇಳಿದ್ದೇ ರವಿಯವರಿಗೆ ಚೇಳು ಕಡಿದಂತಾಗಿದೆ. ಹಾಗಾಗಿ ಸಿದ್ದರಾಮಯ್ಯರ ವಿರುದ್ಧ ಕೀಳು‌ ಪದಪ್ರಯೋಗ ಮಾಡಿ ರವಿ ತಮ್ಮ ಹೊಲಸು ನಾಲಗೆ ಪ್ರದರ್ಶಿಸಿದ್ದಾರೆ ಎಂದು ಯುವ ಕಾಂಗ್ರೆಸ್ ದಾವಣಗೆರೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಸಿಟಿ ರವಿಯವರ ಮಾತುಗಳನ್ನು ತೀವ್ರವಾಗಿ ಖಂಡಿಸಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯರ … Read more

ಎಸಿಬಿ ರದ್ದು: ಬಲಗೊಂಡ ಲೋಕಾಯುಕ್ತ

ಸುದ್ದಿ360 ಬೆಂಗಳೂರು, ಸೆ.09:ಲೋಕಾಯುಕ್ತ ಪೊಲೀಸ್ ವಿಭಾಗಕ್ಕೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಈ ಹಿಂದೆ ನೀಡಿದ್ದ ಅಧಿಕಾರಗಳನ್ನು ಮರುಸ್ಥಾಪಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದ್ದು, ಹೈಕೋರ್ಟ್ ಆದೇಶದಂತೆ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದುಗೊಳಿಸಲಾಗಿದೆ. ಎಸಿಬಿಯಲ್ಲಿ ತನಿಖಾ ಹಂತದಲ್ಲಿರುವ ಪ್ರಕರಣಗಳು, ಬಾಕಿ ಉಳಿದಿರುವ ವಿಚಾರಣೆಗಳು, ಶಿಸ್ತುಕ್ರಮಕ್ಕೆ ಸಂಬಂಧಿಸಿದ ಪ್ರಕರಣಗಳು ಮತ್ತು ಖಾಸಗಿ ದೂರುಗಳಿಗೆ ಸಂಬಂಧಿಸಿದ ಎಲ್ಲ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಆ್ಯಂಥೆ ಪರೀಕ್ಷೆ ನೋಂದಣಿಗೆ ಚಾಲನೆ – ಇಬ್ಬರಿಗೆ ನಾಸಾಗೆ ಭೇಟಿ ನೀಡುವ ಅವಕಾಶ !

ಸುದ್ದಿ360 ದಾವಣಗೆರೆ, ಸೆ. 06: ನಗರದ ಅಕ್ಕಮಹಾದೇವಿ ರಸ್ತೆಯ ಎವಿಕೆ ಕಾಲೇಜು ಎದುರಿರುವ ಆಕಾಶ್ ಬೈಜೂಸ್ ಶಾಖೆಯಲ್ಲಿ ಮಂಗಳವಾರ ಆಕಾಶ್ ನ್ಯಾಷನಲ್ ಟ್ಯಾಲೆಂಟ್ ಹಂಟ್ ಪರೀಕ್ಷೆ-2022ರ ದಿನಾಂಕಗಳನ್ನು ಘೋಷಿಸಿ, ವಿದ್ಯಾರ್ಥಿಗಳ ನೋಂದಣಿ ಪ್ರಕ್ರಿಯೆಗೆ ಇಂದು ಚಾಲನೆ ನೀಡಲಾಯಿತು. ಆಕಾಶ್ ಬೈಜೂಸ್ ಸಂಸ್ಥೆ ಉಪ ನಿರ್ದೇಶಕ ಸುಧೀರ್ ಕುಮಾರ್ ಮಾತನಾಡಿ, ಆಕಾಶ್ ನ್ಯಾಷನಲ್ ಟ್ಯಾಲೆಂಟ್ ಹಂಟ್ ಎಕ್ಸಾಮ್ (ಆ್ಯಂಥೆ) ರಾಷ್ಟ್ರಮಟ್ಟದ ಪ್ರತಿಭಾನ್ವೇಷಣೆ ಪರೀಕ್ಷೆಯಾಗಿದೆ. ಇದು ಆನ್‌ಲೈನ್ ಮತ್ತು ಆಫ್‌ಲೈನ್ ಮಾದರಿಯಲ್ಲಿ ನಡೆಯಲಿದ್ದು, ನ.5ರಿಂದ ನ.13ರವರೆಗೆ ಬೆಳಗ್ಗೆ 10ರಿಂದ ಸಂಜೆ … Read more

ಮಳೆ ಯಾವ ಪಕ್ಷವನ್ನೂ ನೋಡಿ ಬರೋಲ್ಲ – ಪ್ರವಾಹದ ವಿಚಾರದಲ್ಲಿ ರಾಜಕೀಯ ಬೇಡ: ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಬೆಂಗಳೂರು, ಸೆ.06: ಮಳೆ ಪ್ರವಾಹದ ವಿಚಾರದಲ್ಲಿ ರಾಜಕೀಯ ಬೇಡ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮಳೆ, ಪ್ರವಾಹದ ವಿಷಯದಲ್ಲಿ ರಾಜಕೀಯವಾಗುತ್ತಿರುವುದು ದುರ್ದೈವದ ಸಂಗತಿ. ಮಳೆ ತಂದಿರುವ ಸಂಕಷ್ಟದ ಸಂದರ್ಭದಲ್ಲಿ ಎಲ್ಲರೂ ಯುದ್ಧೋಪಾದಿಯಲ್ಲಿ  ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಮಳೆ ಯಾವ ಪಕ್ಷವನ್ನೂ ನೋಡಿ ಬರುವುದಿಲ್ಲ. ಇಡೀ ರಾಜ್ಯದಲ್ಲಿ ಎಲ್ಲ ಕೆರೆಗಳೂ ತುಂಬಿದ್ದು, ದಾಖಲೆಯ ಮಳೆಯಾಗಿದೆ. ಚಿಕ್ಕಬಳ್ಳಾಪುರ ಹಾಗೂ ದೊಡ್ಡಬಳ್ಳಾಪುರದಲ್ಲಿ ಹೆಚ್ಚು ಮಳೆಯಾಗಿದೆ. ಬೆಂಗಳೂರಿನಲ್ಲಿ ಕೆರೆಗಳೆಲ್ಲಾ ತುಂಬಿ ಹರಿಯುತ್ತಿದೆ. ಜಲಪ್ರವಾಹದ … Read more

ಬೆಂಗಳೂರಿನ ಮಳೆ ಅವಘಡಕ್ಕೆ ಎಲ್ಲ ಪಕ್ಷದವರೂ ಪಾಲುದಾರರೇ . . . ದಾವಣಗೆರೆಯಲ್ಲಿ ಬಿ.ಸಿ. ಪಾಟೀಲ್ ಹೇಳಿಕೆ

ಸುದ್ದಿ360 ದಾವಣಗೆರೆ, ಸೆ. 06: ಬೆಂಗಳೂರಿನಲ್ಲಿ ಆಗಿರುವ ಮಳೆ ಅವಘಡಕ್ಕೆ ಯಾರನ್ನು ದೂಷಿಸುವುದು ಸರಿಯಲ್ಲ.  ಅವರು ಇವರೆನ್ನದೆ ಎಲ್ಲರೂ ಪ್ರಾಕೃತಿಕ ವಿಕೋಪಕ್ಕೆ ಕಾರಣರಾಗಿದ್ದಾರೆ ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ಹೇಳಿದರು. ದಾವಣಗೆರೆಯಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಂಗಳೂರಿನಲ್ಲಿ ಆಗಿರುವ ಮಳೆ ಅವಘಡಕ್ಕೆ ಯಾವುದೇ ಪಕ್ಷವನ್ನು ದೂಷಿಸುವಂತಹದ್ದಲ್ಲ. ಕೆಲವು ಸಂದರ್ಭಗಳಲ್ಲಿ ಸರಿಯಾದ ರೀತಿಯಲ್ಲಿ ಕಾಲುವೆ ವ್ಯವಸ್ಥೆಯನ್ನು ಮಾಡಿರದೇ ಇರುವುದು. ಟೌನ್ ಪ್ಲಾನಿಂಗ್ ಸಂದರ್ಭದಲ್ಲಿ ಬೇಕಾಬಿಟ್ಟಿ ಒಪ್ಪಿಗೆ ಕೊಟ್ಟಿರುವುದು ಸೇರಿದಂತೆ. ಬೆಂಗಳೂರು ಸಂಪೂರ್ಣ … Read more

12ನೇ ತಾರೀಖಿನೊಳಗೆ ನೆರೆ ಪರಿಹಾರ ಫಲಾನುಭವಿಗಳ ಖಾತೆಗೆ: ಕೃಷಿ ಸಚಿವ ಬಿ ಸಿ ಪಾಟೀಲ್

18 ಕೋಟಿ ವೆಚ್ಚದಲ್ಲಿ ಶೀಥಿಲೀಕರಣ ಘಟಕ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಸುದ್ದಿ360 ದಾವಣಗೆರೆ, ಸೆ. 06: ರೈತರು ತಾವು ಬೆಳೆದಂತಹ ಬೆಳೆಗೆ  ಕಟಾವು ಸಂದರ್ಭದಲ್ಲಿ ಉತ್ತಮ ಬೆಲೆ ದೊರಕದೆ ಕಂಗಾಲಾಗುವುದನ್ನು ತಪ್ಪಿಸಲು ಶಿಥೀಲೀಕರಣ ಘಟಕ ಸಹಕಾರಿಯಾಗಲಿದೆ ಎಂದು  ಕೃಷಿ ಸಚಿವ ಬಿ ಸಿ ಪಾಟೀಲ್ ಹೇಳಿದರು. ನಗರದ ಲೋಕಿಕೆರೆ ರಸ್ತೆಯ ಕೈಗಾರಿಕಾ ಪ್ರದೇಶದಲ್ಲಿ ನಬಾರ್ಡ್ ಆರ್ ಐ ಡಿ ಎಫ್ 27ರಲ್ಲಿ 9 ಕೋಟಿ 50 ಲಕ್ಷ ರೂ. ವೆಚ್ಚದಲ್ಲಿ ಶಿಥಿಲೀಕರಣ ಘಟಕ, 4 ಕೋಟಿ … Read more

ಬಡಾವಣೆಗಳು ಜಲಾವೃತ: ಕಾಂಗ್ರೆಸ್ ಸರ್ಕಾರದ ದುರಾಡಳಿತದ ಫಲ – ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಸೆ.06: ಹಿಂದೆ ಇದ್ದ ಕಾಂಗ್ರೆಸ್ ಸರ್ಕಾರದ ಯೋಜನಾ ರಹಿತ ಹಾಗೂ ದುರಾಡಳಿತದ ಫಲವಾಗಿ ಈ ಬಡಾವಣೆಗಳು ಜಲಾವೃತಗೊಳ್ಳುವ ಸ್ಥಿತಿ  ಎದುರಿಸಬೇಕಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ  ಮಾತನಾಡಿ, ಎಗ್ಗಿಲ್ಲದೆ ಕೆರೆಗಳಲ್ಲಿ, ಕೆರೆ ಬಂಡ್ ಹಾಗೂ ಬಫರ್ ವಲಯಗಳಲ್ಲಿ ಅನುಮತಿಗಳನ್ನು ನೀಡಿದ್ದಾರೆ. ಈ ಪರಿಸ್ಥಿತಿಗೆ ಕಾಂಗ್ರೆಸ್ ಕಾರಣ. ಕೆರೆಗಳ ನಿರ್ವಹಣೆಯ ಬಗ್ಗೆ ಅವರು ಯೋಚಿಸಿಯೂ ಇಲ್ಲ. ನಾನು ಇದನ್ನು ಸವಾಲಾಗಿ ಸ್ವೀಕರಿಸಿದ್ದು 1500 ಕೋಟಿ … Read more

ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರ ನೇಮಕಾತಿಗೆ ವ್ಯವಸ್ಥೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಸೆ.05: ಮುಂಬರುವ ದಿನಗಳಲ್ಲಿ ಪ್ರತಿ ವರ್ಷ ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರನ್ನು ಹಿಂದಿನ ವರ್ಷವೇ ನೇಮಿಸಿ, ತರಬೇತಿ ನೀಡಿ, ನಿವೃತ್ತಿ ಹೊಂದಲಿರುವ ಶಿಕ್ಷಕರ ಸ್ಥಾನಕ್ಕೆ ಅವರನ್ನು ನೇಮಿಸುವ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು  ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಾಜಿ ರಾಷ್ಟ್ರಪತಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಶಿಕ್ಷಣ ಕ್ಷೇತ್ರಕ್ಕೆ 25 ಸಾವಿರ ಕೋಟಿ ರೂ. … Read more

error: Content is protected !!