ಕರ್ನಾಟಕದಲ್ಲಿ ಬೃಹತ್ ಜವಳಿ ಪಾರ್ಕ್ ಸ್ಥಾಪನೆ

ಜಾಗತಿಕ ಮಟ್ಟದಲ್ಲಿ ಭಾರತದ ಗೌರವ ಹೆಚ್ಚಲು ನಿಮ್ಮ ಒಂದು ಮತ ಕಾರಣ : ಪ್ರಧಾನಿ ಮೋದಿ ದಾವಣಗೆರೆ: ವಿಶ್ವ ಭೂಪಟದಲ್ಲಿ ಹಿಂದೂಸ್ಥಾನದ ಬಗ್ಗೆ ಜೈ ಕಾರ ಕೇಳಿಬರುತ್ತಿದೆ. ಜಾಗತಿಕ ಮಟ್ಟದಲ್ಲಿ ನಮ್ಮ ಗೌರವ ಹೆಚ್ಚಿದೆ. ಇದಕ್ಕೆ ಮೋದಿ ಕಾರಣವಲ್ಲ, ನಿಮ್ಮ ಒಂದು ಮತ ಇದನ್ನು ಸಾಧ್ಯವಾಗಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಲಿದರು.. ದಾವಣಗೆರೆಯ ಜಿಎಂಐಟಿ ಪಕ್ಕದಲ್ಲಿ ಆಯೋಜಿಸಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಸಮಾರಂಭದ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು,  ಕರ್ನಾಟಕದ ಉಜ್ವಲ ಭವಿಷ್ಯ … Read more

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ‌‌ ಜೈನಭಟ್ಟಾರಕ ಸ್ವಾಮೀಜಿ ವಿಧಿವಶ – ಸರ್ಕಾರಿ ಗೌರವಗಳೊಂದಿಗೆ ಶ್ರೀಗಳ ಅಂತ್ಯಕ್ರಿಯೆ : ಸಿಎಂ ಬೊಮ್ಮಾಯಿ

ಸುದ್ದಿ360 ಹಾಸನ ಮಾ. 23: ಜೈನ‌ಕಾಶಿ ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ‌‌ ಜೈನಭಟ್ಟಾರಕ ಸ್ವಾಮೀಜಿ ಅವರು ಇಂದು (ಮಾ.23) ವಿಧಿವಶರಾಗಿದ್ದಾರೆ. ಕಳೆದ ಮುರ್ನಾಲ್ಕು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳನ್ನು ಶ್ರವಣಬೆಳಗೊಳ ಮಠದಲ್ಲೇ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.ಹೆಚ್ಚಿನ ಚಿಕಿತ್ಸೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಸ್ವಸ್ತಿ ಶ್ರೀ ಚಾರುಕೀರ್ತಿ ಬಿರುದಾಂಕಿತ ಜೈನಭಟ್ಟಾರಕ ಸ್ವಾಮೀಜಿಗಳು ದೇಶಾದ್ಯಂತ ಅಪಾರ ಭಕ್ತವರ್ಗವನ್ನು ಹೊಂದಿದ್ದಾರೆ. ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ: ಸಿಎಂ ಬೊಮ್ಮಾಯಿ ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ  ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ … Read more

ಶೇ.40ರಲ್ಲಿ ಸಂಸದರ ಮತ್ತು ಉಸ್ತುವಾರಿ ಸಚಿವರ ಸಮಪಾಲು – ಕಾಂಗ್ರೆಸ್ ಆರೋಪ

ವರ್ಷವಾದರೂ ಮುಗಿಯದ ರೈಲ್ವೆ ಅಂಡರ್ ಪಾಸ್ ಸುದ್ದಿ360 ದಾವಣಗೆರೆ ಮಾ.18: ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಮತ್ತು ಸಂಸದ ಜಿ.ಎಂ.ಸಿದ್ದೇಶ್ವರ ತಲಾ ಶೇ.20 ಕಮಿಷನ್ ಹಂಚಿಕೆ ಮಾಡಿಕೊಂಡಿದ್ದಾರೆ. ಶೇ.40 ಇಲ್ಲದೇ ಯಾವ ಕಾಮಗಾರಿಗಳು ಆಗುತ್ತಿಲ್ಲ. ಇದರಿಂದ ಕಾಮಗಾರಿಗಳು ಅಧೋಗತಿಯತ್ತ ಸಾಗಿವೆ  ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಇಂದು ಶನಿವಾರ ಪ್ರತಿಭಟನೆ ನಡೆಸಿದರು. ನಗರದ ಅಶೋಕ ಟಾಕೀಸ್ ರೈಲ್ವೆ ಗೇಟ್ ಬಳಿ ನಿರ್ಮಾಣ ಆಗುತ್ತಿರುವ ಅಂಡರ್ ಪಾಸ್ ಹತ್ತಿರ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ … Read more

ಅಭಿವೃದ್ಧಿ ಕಾರ್ಯಗಳೇ ನಮ್ಮ ಶಕ್ತಿ ಎನ್ನುವವರು ಆಮಿಶ ಒಡ್ಡುವುದಾದರೂ ಯಾಕೆ?! ಯಶ್ವಂತ್ ರಾವ್ ಜಾಧವ್ ಪ್ರಶ್ನೆ

ಸುದ್ದಿ360 ದಾವಣಗೆರೆ ಮಾ.18: ಹಗಲು ದರೋಡೆ ಮಾಡುವವರು ಕಾಂಗ್ರೆಸ್ ನವರು ಆದರೆ ಬಿಜೆಪಿ ಮೇಲೆ ಗೂಬೆ ಕೂರಿಸುತ್ತಾರೆ ಎಂದು ಬಿಜೆಪಿ ಮುಖಂಡ ಯಶವಂತ್ ರಾವ್ ಜಾಧವ್ ಹರಿಹಾಯ್ದರು. ಅವರು ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾವು ಮಾಡಿರುವ ಅಭಿವೃದ್ಧಿ ಕಾರ್ಯಗಳೇ ನಮ್ಮ ಶಕ್ತಿ, ಇದರಿಂದಲೇ ಜನರು ನಮ್ಮನ್ನು ಗೆಲ್ಲಿಸಿದ್ದಾರೆ ಎನ್ನುವ ಶಾಮನೂರು ಶಿವಶಂಕರಪ್ಪ ಹಾಗೂ ಮಲ್ಲಿಕಾರ್ಜುನ್ ಅವರು ಸೀರೆ, ಕುಕ್ಕರ್ ಗಳನ್ನು ನೀಡುವ ಮೂಲಕ ಮತದಾರರಿಗೆ ಆಮಿಷ  ಒಡ್ಡುತ್ತಿರುವುದಾದರೂ ಯಾಕೆ ಎಂದು ಪ್ರಶ್ನಿಸಿದರು. ಎಸ್ಸೆಸ್ ಹಾಗೂ ಮಲ್ಲಿಕಾರ್ಜುನ್ … Read more

ಕೊಲೆ ಆರೋಪಿಗಳಿಗೆ ನೆರವು: ಪತ್ರಕರ್ತ ಮೆಹಬೂಬ್ ಮುನವಳ್ಳಿ ಬಂಧನ

ಸುದ್ದಿ360 ದಾವಣಗೆರೆ ಮಾ.18 : ಶಿವಮೊಗ್ಗದ ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆ ಪ್ರಕರಣದೊಂದಿಗೆ ತಳಕು ಹಾಕಿಕೊಂಡಿರುವ ಚೀಲೂರು ಬಳಿ ಬುಧವಾರ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗಳಿಗೆ ನೆರವಾಗಿರುವ ಆರೋಪದಲ್ಲಿ ಧಾರವಾಡದ ಪತ್ರಕರ್ತರೊಬ್ಬರನ್ನು ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ ಖಾಸಗಿ ಸುದ್ದಿವಾಹಿನಿಯ ವರದಿಗಾರ ಮೆಹಬೂಬ್ ಮುನವಳ್ಳಿಯನ್ನು ನ್ಯಾಮತಿ ಠಣೆ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಹಂದಿ ಅಣ್ಣಿ ಕೊಲೆ ಪ್ರಕರಣದ ಇಬ್ಬರು  ಆರೋಪಿಗಳ ಮೇಲೆ ಬುಧವಾರ ಚೀಲೂರು ಬಳಿ ನಡೆದ ಘಟನೆಗೆ ಸಂಬಂಧಿಸಿದಂತೆ ನಾಲ್ವರು … Read more

ಕೆಆರ್ ಎಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ

ಸ್ವಚ್ಛ, ಸದೃಢ, ಸಮೃದ್ಧ, ಸಾಂಸ್ಕೃತಿಕ, ಹಸಿರು ಕರ್ನಾಟಕಕ್ಕಾಗಿ ನವ ಸೂತ್ರಗಳು ಸುದ್ದಿ360 ದಾವಣಗೆರೆ, ಮಾ.17: ಮುಂಬರುವ ವಿಧಾನಸಭಾ ಚುನಾವಣೆ ಪ್ರಯುಕ್ತ ಕೆ ಆರ್ ಎಸ್ ಪಕ್ಷವು  ಸ್ವಚ್ಛ, ಸದೃಢ, ಸಮೃದ್ಧ, ಸಾಂಸ್ಕೃತಿಕ, ಹಸಿರು ಕರ್ನಾಟಕಕ್ಕಾಗಿ ನವ ಸೂತ್ರಗಳನ್ನೊಳಗೊಂಡ ಪ್ರಣಾಳಿಕೆ  ಸಿದ್ಧಪಡಿಸಿ ಬಿಡುಗಡೆ ಮಾಡಲಾಗಿದೆ ಎಂದು ಕೆಅರ್ ಎಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ.ಮಲ್ಲಪ್ಪ ಹಾಗೂ ಕಾನೂನು ಘಟಕದ ಅಧ್ಯಕ್ಷ ಬಿ.ಸೋಮಶೇಖರ್ ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರಮುಕ್ತ ದಕ್ಷ ಆಡಳಿತ, ಆರೋಗ್ಯ, ಶಿಕ್ಷಣ, ಕೃಷಿ, ಮಹಿಳೆ ಮತ್ತು … Read more

ಮಾರ್ಚ್ 19ಕ್ಕೆ ‘ಸಂಪಾದನಾ ಸೂಕ್ತಿಗಳು’ ಕೃತಿ ಲೋಕಾರ್ಪಣೆ

ಡಿ.ಜಿ.ರೇವಣಸಿದ್ದಪ್ಪ ಅವರ ಚೊಚ್ಚಲ ಕೃತಿ ಸುದ್ದಿ360 ದಾವಣಗೆರೆ ಮಾ.17: ಹಿರಿಯ ಪ್ರಯೋಗ ಶಾಲಾ ತಂತ್ರಜ್ಞರಾಗಿ ಸೇವೆ ಸಲ್ಲಿಸಿ ನಿವೃತ್ತಗೊಂಡಿರುವ ಡಿ.ಜಿ.ರೇವಣಸಿದ್ದಪ್ಪ ಅವರ ಚೊಚ್ಚಲ ಕೃತಿ ‘ಸಂಪಾದನಾ ಸೂಕ್ತಿಗಳು’ ಬಿಡುಗಡೆ ಸಮಾರಂಭ ಮಾ. 19 ರಂದು ನಗರದ ಕುವೆಂಪು ಕನ್ನಡ ಭವನದಲ್ಲಿ ನಡೆಯಲಿದೆ ಎಂದು ಸಾಹಿತಿ ಓಂಕಾರಯ್ಯ ತವನಿಧಿ ತಿಳಿಸಿದರು. ಸುದ್ದಿಗೋಷ್ಠಿ‌ಯಲ್ಲಿ ಮಾತನಾಡಿದ ಅವರು, ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು  ಮತ್ತು ರೇಣುಕಾ ಪ್ರಕಾಶನ ಇವರ ಸಹಯೋಗದಲ್ಲಿ ಕೃತಿ ಲೋಕಾರ್ಪಣಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಡಿ.ಜಿ.ರೇವಣಸಿದ್ದಪ್ಪ ಸಾವಯವ ಕೃಷಿಕರಾಗಿದ್ದು, … Read more

ಮಾ.17: ಉಡುತಡಿಯಲ್ಲಿ ಶಿವಶರಣೆ ಅಕ್ಕಮಹಾದೇವಿ ಪುತ್ಥಳಿ ಅನಾವರಣ

ಸುದ್ದಿ360 ಶಿವಮೊಗ್ಗ ಮಾ. 16: ಶಿಕಾರಿಪುರ ತಾಲೂಕಿನ ಉಡುತಡಿಯಲ್ಲಿ ಮಾ. 17ರ ಶುಕ್ರವಾರದಂದು ಮಧ್ಯಾಹ್ನ 12.30ಕ್ಕೆ ಶಿವಶರಣೆ ಅಕ್ಕಮಹಾದೇವಿ ಪುತ್ಥಳಿ ಅನಾವರಣವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೆರವೇರಿಸಲಿದ್ದಾರೆಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ. 77 ಅಡಿ ಎತ್ತರದ ಈ ಪುತ್ಥಳಿಯು ಶಿವಶರಣೆ ಅಕ್ಕಮಹಾದೇವಿ ಜನ್ಮಸ್ಥಳವಾಗಿರುವ ಉಡುತಡಿಯಲ್ಲಿ ಮುಖ್ಯಮಂತ್ರಿಗಳು ಅನಾವರಣಗೊಳಿಸಲಿದ್ದು, ಇದೇ ಸಂದರ್ಭದಲ್ಲಿ ದೆಹಲಿ ಅಕ್ಷರಧಾಮ ಮಾದರಿಯಲ್ಲಿ ನಿರ್ಮಿಸಿರುವ ಉದ್ಯಾನವನ್ನು ಉದ್ಘಾಟಿಸಲಿದ್ದಾರೆ. ಅಂದು ಮಧ್ಯಾಹ್ನ 12 ಗಂಟೆಗೆ ಕೆಎಸ್‌ಆರ್‌ಟಿಸಿ ಘಟಕ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ, ಕಸಬಾ … Read more

ಮಹಾರಾಷ್ಟ್ರ ಸಚಿವ ಸಂಪುಟದ  ನಿರ್ಣಯಕ್ಕೆ ಸಿಎಂ ಬೊಮ್ಮಾಯಿ ತೀವ್ರ ಖಂಡನೆ

ಬೆಂಗಳೂರು,  ಮಾರ್ಚ್ 16: ಗಡಿ ಕನ್ನಡಿಗರಿಗೆ ಆರೋಗ್ಯ ವಿಮೆ ಯೋಜನೆಯ ಮಹಾರಾಷ್ಟ್ರ ಸಚಿವ ಸಂಪುಟದ  ನಿರ್ಣಯವನ್ನು ತೀವ್ರವಾಗಿ ಖಂಡಿಸುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ  ಮಾತನಾಡಿದರು. ಕರ್ನಾಟಕ ಗಡಿ ಭಾಗದ ಜನರಿಗೆ ಆರೋಗ್ಯ ಯೋಜನೆ ವಿಮೆ ಯೋಜನೆಯನ್ನು ಮಹಾರಾಷ್ಟ್ರದ ಸಂಪುಟ ನಿರ್ಣಯ ಘೋಷಿಸಿರುವುದು ಅಕ್ಷಮ್ಯ ಅಪರಾಧ. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರೊಂದಿಗೆ ಮಾತನಾಡಿದಾಗ ಸುಪ್ರೀಂಕೋರ್ಟ್ ಆದೇಶ ಬರುವವರೆಗೆ ಕಾಯಬೇಕು. ಯಾವುದೇ ಪ್ರಚೋದನೆ ಯಾಗಬಾರದೆಂದು ಒಪ್ಪಲಾಗಿತ್ತು. … Read more

ಕೆ.ಪಿ.ಟಿ. ಸಿ.ಎಲ್ ನೌಕರರಿಗೆ ಶೇ 20 – ಸಾರಿಗೆ ನೌಕರರಿಗೆ ಶೇ 15 ರಷ್ಟು ವೇತನ ಪರಿಷ್ಕರಣೆ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಬೆಂಗಳೂರು ಮಾ.16: ಕೆ.ಪಿ.ಟಿ. ಸಿ.ಎಲ್ ನೌಕರರು ಮತ್ತು ಸಾರಿಗೆ ಇಲಾಖೆ ನೌಕರರ ವೇತನ ಪರಿಷ್ಕರಣೆ ಸಂಬಂಧ ಇಂದು ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ನಿವಾಸದ ಬಳಿ ಮಾಧ್ಯಮದವರೊಂದಿಗೆ  ಮಾತನಾಡಿ, ಕೆ.ಪಿ.ಟಿ. ಸಿ.ಎಲ್ ನೌಕರರು ವೇತನ ಪರಿಷ್ಕರಣೆಗೆ ಬೇಡಿಕೆ ಇಟ್ಟಿದ್ದರು. ನಮ್ಮ ಮಂತ್ರಿಗಳು ಸುದೀರ್ಘವಾಗಿ ಚರ್ಚಿಸಿ ಶೇ 20 ರಷ್ಟು ವೇತನ ಪರಿಷ್ಕರಣೆಗೆ  ಒಪ್ಪಿದ್ದು,  ಇಂದು ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು. ಸಾರಿಗೆ ನೌಕರರಿಗೆ ಶೇ 15 ರಷ್ಟು ವೇತನ … Read more

error: Content is protected !!