ರಕ್ತವನ್ನು ಯಾರು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ: ಡಾ. ನಾಗರಾಜ್
ವಿಶ್ವ ಸ್ವಯಂಪ್ರೇರಿತ ರಕ್ತದಾನಿಗಳ ದಿನಾಚರಣೆ 2022 ದಾವಣಗೆರೆ ಜೂ.14 : ರಕ್ತವನ್ನು ಯಾರು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ, ಹಾಗಾಗಿ ವರ್ಷಕ್ಕೆ ಕನಿಷ್ಠ ಒಂದು ಬಾರಿಯಾದರೂ ಎಲ್ಲರೂ ರಕ್ತದಾನವನ್ನು ಮಾಡುವಂತೆ ಪ್ರತಿಜ್ಞೆ ಮಾಡೋಣ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗರಾಜ ಅವರು ಹೇಳಿದರು. ಮಂಗಳವಾರ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು … Read more