ನವಸಂಕಲ್ಪ ಚಿಂತನಾ ಸಭೆಯಿಂದ ಪಕ್ಷದ ಬಲವರ್ಧನೆ: ಎಂ.ಸಿ.ವೇಣುಗೋಪಾಲ್
ಸುದ್ದಿ 360 ದಾವಣಗೆರೆ, ಜೂ.15: ಕೆಪಿಸಿಸಿಯಿಂದ ಜಿಲ್ಲೆಯ ಪ್ರತಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನವಸಂಕಲ್ಪ ಚಿಂತನಾ ಶಿಬಿರವನ್ನು ಜುಲೈ ಮೊದಲ ವಾರದಲ್ಲಿ ನಡೆಸಲಾಗುವುದು ಎಂದು ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಎಂ.ಸಿ.ವೇಣುಗೋಪಾಲ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳವಾರ ನಡೆದ ಚಿಂತನಾ ಸಭೆ ಪಕ್ಷದ ಶಾಸಕರು, ಮಾಜಿ ಶಾಸಕರು, ಬ್ಲಾಕ್ ಅಧ್ಯಕ್ಷರು, ಉಪಾಧ್ಯಕ್ಷರು, ಮುಖಂಡರ ಸಲಹೆ, ಅಭಿಪ್ರಾಯಗಳೊಂದಿಗೆ ಯಶಸ್ವಿಯಾಗಿ ನಡೆಯಿತು. ಚಿಂತನಾ ಸಭೆಯಲ್ಲಿ ಎಲ್ಲರಿಗೂ ಮುಕ್ತವಾಗಿ ಅಭಿಪ್ರಾಯ ಮಂಡಿಸಲು ಅವಕಾಶ ನೀಡಲಾಗಿತ್ತು. … Read more