ಆಸ್ಪತ್ರೆಯಲ್ಲಿ ಎಚ್ ಡಿಕೆ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಆದಿಚುಂಚನಗಿರಿ ಶ್ರೀ

ಸುದ್ದಿ360, ಏ. 23: ಆರೋಗ್ಯದ ಏರುಪೇರಿನಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರನ್ನು ಶ್ರೀ ಆದಿಚುಂಚನಗಿರಿ ಮಹಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರುಗಳಾದ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಇಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಬಿರುಸಿನ ಓಡಾಟದಿಂದ ಪ್ರಚಾರ ಮಾಡುತ್ತಿದ್ದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಶನಿವಾರ ಜ್ವರದಿಂದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

error: Content is protected !!