ಮೆಟ್ರೋ ಕಾಮಗಾರಿ ದುರಂತ: ಅಧಿಕಾರಿ, ಗುತ್ತಿಗೆದಾರರ ಮೇಲೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸುದ್ದಿ360 ಬೆಂಗಳೂರು ಜ.10: ಮೆಟ್ರೊ ಕಾಮಗಾರಿ ದುರಂತಕ್ಕೆ ಕಾರಣರಾದ ಹಿರಿಯ ಅಧಿಕಾರಿಗಳು, ಮುಖ್ಯಸ್ಥರ ಮೇಲೆ ಕ್ರಮಕೈಗೊಳ್ಳಲು ಸೂಚಿಸಿದ್ದು, ಗುತ್ತಿಗೆದಾರ ಮೇಲೆ ಪ್ರಕರಣ ದಾಖಲಿಸುವುದರ ಜೊತೆಗೆ ಉನ್ನತ ಮಟ್ಟದ ತನಿಖೆ ಮಾಡುವಂತೆಯೂ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಶ್ನೆ ಇರುವುದು ಇಷ್ಟು ಅಸುರಕ್ಷಿತವಾಗಿ ಹೇಗೆ ಕೆಲಸ ಮಾಡಿದರು ಎನ್ನುವುದನ್ನು ಪತ್ತೆ ಹಚ್ಚಿ, ಮುಂದೆ ಹೀಗಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ತನಿಖೆ ಹಾಗೂ ತಾಂತ್ರಿಕ ಲೋಪದ ಏನು ಎಂಬುದರ ಬಗ್ಗೆ ಕ್ರಮ … Read more