ಪಠ್ಯಪುಸ್ತಕ ಪರಿಷ್ಕರಣೆ ಲೋಪ ವಿರೋಧಿಸಿ ಎನ್.ಎಸ್.ಯು.ಐ ನಿಂದ ತಿರಂಗ ರ‍್ಯಾಲಿ

ಸುದ್ದಿ360,ದಾವಣಗೆರೆ,ಜು.05: ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆಯ ಲೋಪದಿಂದ ರಾಜ್ಯದ ವಿದ್ಯಾರ್ಥಿಗಳ ಮೇಲೆ ಅಗಾಧ ಪರಿಣಾಮ ಬೀರಿದೆ. ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಿಂಚಿತ್ತೂ ಯೋಚನೆ ಮಾಡದ ರಾಜ್ಯ ಬಿಜೆಪಿ ಸರ್ಕಾರ ಪ್ರತಿಯೊಂದು ಹಂತದ ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಎನ್.ಎಸ್‌.ಯು.ಐ ಘಟಕ ಮಂಗಳವಾರ ಜನಜಾಗೃತಿ ರ‍್ಯಾಲಿ ನಡೆಸಿತು. ಮೂರು ನೂರು ಅಡಿಗಳ ತಿರಂಗದೊಂದಿಗೆ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ರ‍್ಯಾಲಿಯಲ್ಲಿ ಭಾಗವಹಿಸಿದ್ದರು.  ನಗರದ ಎವಿಕೆ ಕಾಲೇಜು ಸಮೀಪದಿಂದ ಆರಂಭಗೊಂಡ ರ‍್ಯಾಲಿ ಬಿ.ಎಸ್.ಚನ್ನಬಸಪ್ಪ ಅಂಗಡಿಯ ಮುಂಭಾಗದಿಂದ … Read more

ದೇಶ-ನಾಡು ಕಟ್ಟಿದವರ ಗೌರವ ಕಾಪಾಡಲು ಸಿದ್ದ: ಮುಖ್ಯಮಂತ್ರಿ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜೂ.19:  ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾತನಾಡಿ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಸ್ವಾಮೀಜಿ ಗಳು ನೀಡಿರುವ ಮನವಿಯನ್ನು ತರಿಸಿಕೊಂಡು ಏನೆಲ್ಲಾ ಬದಲಾವಣೆ ಮಾಡಬೇಕೋ ಅದನ್ನು ಮುಕ್ತ ಮನಸ್ಸಿನಿಂದ ಕೈಗೊಳ್ಳಲಾಗುವುದು. ಇದನ್ನು ಪ್ರತಿಷ್ಠೆ ಎಂದು ಪರಿಗಣಿಸಿಲ್ಲ. ಪಠ್ಯದ ಕುರಿತು ಆಕ್ಷೇಪವಿದ್ದರೆ, ಅದನ್ನು ನಿವಾರಿಸಲು ಸಿದ್ಧರಿದ್ದೇವೆ. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಭಾರತ ಹಾಗೂ ಕರ್ನಾಟಕ ಕಟ್ಟಲು ಶ್ರಮಿಸಿರುವ ಹಿರಿಯರು, ರಾಜಮಹಾರಾಜರು, ಸಾಹಿತಿಗಳು, ಕಲಾಕಾರರು, ಜ್ಞಾನಪೀಠ ವಿಜೇತರ ಬಗ್ಗೆ ಅಪಾರ ಗೌರವವಿದೆ. ಯಾವುದೇ … Read more

ಪಠ್ಯಪುಸ್ತಕ ಸಲಹೆಗೆ ಸರ್ಕಾರ ಮುಕ್ತವಾಗಿದೆ: ಸಿಎಂ ಬೊಮ್ಮಾಯಿ

ಸುದ್ದಿ360 ದಾವಣಗೆರೆ ಜೂ.16: ಈ ಹಿಂದಿನ ಪಠ್ಯಪುಸ್ತಕದ ಬಗ್ಗೆಯೂ ಆಕ್ಷೇಪಣೆಗಳಿವೆ.  ಯಾವುದನ್ನು ಸರಿಪಡಿಸಬೇಕು ಎಂಬುದರ ಬಗ್ಗೆ ಸಲಹೆಗೆ ಮುಕ್ತ ಅವಕಾಶವಿದೆ. ರಾಜ್ಯದ ಜನರ ಸಲಹೆ ಸೂಚನೆ ಪಡೆದು ವೆಬ್ ಸೈಟ್ ನಲ್ಲಿ ಹಾಕಲಾಗುವುದು. ಒಟ್ಟಾರೆ ಎಲ್ಲಾ ಆಕ್ಷೇಪಣೆಗಳಿಗೆ ಸಲಹೆ ಪಡೆದ ನಂತರ ಪಠ್ಯ ಪರಿಷ್ಕರಣೆ ಅಂತಿಮ ರೂಪ ಪಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ದಾವಣಗೆರೆಯ ಜಿಎಂಐಟಿ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಪ್ಪಳ್ಳಿಯಿಂದ ಬೆಂಗಳೂರಿಗೆ ಪ್ರಗತಿಪರರು ಪಾದಯಾತ್ರೆ ಮಾಡುತ್ತಿರುವ  ಕುರಿತ ಮಾಧ್ಯಮದವರ ಪ್ರಶ್ನೆಗೆ … Read more

error: Content is protected !!