ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅನುಭವ ಇಡೀ ದೇಶಕ್ಕೆ ಲಾಭ ತಂದುಕೊಡಲಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸುದ್ದಿ360, ಬೆಂಗಳೂರು, ಜು.08: ಡಾ. ಡಿ. ವೀರೇಂದ್ರ ಹೆಗ್ಗಡೆಯವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ಕನ್ನಡ ನಾಡಿನ ಸಮಗ್ರ ಜನತೆಗೆ ಬಹಳ ಸಂತಸವುಂಟಾಗಿದ್ದು, ಅವರ ಅಗಾಧವಾದ ಅನುಭವ ಇಡೀ ದೇಶಕ್ಕೆ ಲಾಭವನ್ನು ತಂದುಕೊಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಗುರುವಾರ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಶ್ರೀಯುತರು ನಾಲ್ಕೈದು ದಶಕಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮಾತ್ರವಲ್ಲ, ರಾಜ್ಯದಾದ್ಯಂತ ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಅವರ ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮ ಬಹಳ ಯಶಸ್ವಿಯಾಗಿದೆ. ಶುದ್ಧ ಕುಡಿಯುವ ನೀರಿನ ಘಟಕ, ಕೆರೆಗಳ ನಿರ್ಮಾಣ, … Read more