ಭ್ರಷ್ಟ ರಾಜಕಾರಣ ಕೊನೆಗಾಣಿಸಲು ಜನಚೈತನ್ಯ ಯಾತ್ರೆ : ಕೆ ಆರ್ ಎಸ್ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ
ಸುದ್ದಿ360, ದಾವಣಗೆರೆ, ಜು.16: ಕೆಆರ್ ಎಸ್ ಪಕ್ಷದಿಂದ ಎರಡನೇ ಹಂತದ ಜನ ಚೈತನ್ಯ ಯಾತ್ರೆ ಜು.15 ರಂದು ಚಿತ್ರದುರ್ಗ ಜಿಲ್ಲೆಯಿಂದ ಆರಂಭವಾಗಿದ್ದು, ಜುಲೈ ಅಂತ್ಯದವರೆಗೆ 16ಜಿಲ್ಲೆಗಳಲ್ಲಿ ಸಂಚರಿಸಿ, ಭ್ರಷ್ಟ, ಹಾಗೂ ಪರಮನೀಚ ರಾಜಕಾರಣ ಕೊನೆಗಾಣಿಸುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಪಕ್ಷ ಹಮ್ಮಿಕೊಂಡಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜನಚೈತನ್ಯ ಯಾತ್ರೆಯ ಅಂಗವಾಗಿ ಇಂದು ದಾವಣಗೆರೆಯಲ್ಲಿ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಯಾತ್ರೆಯುದ್ದಕ್ಕೂ ಬಹಿರಂಗ ಸಭೆಗಳು, ಪತ್ರಿಕಾಗೋಷ್ಠಿಗಳು, … Read more