ಜ.13: ಮುಖ್ಯಮಂತ್ರಿಯವರ ಶಿಗ್ಗಾವಿಯ ಮನೆ ಮುಂದೆ ಸತ್ಯಾಗ್ರಹ – ಬಸವಜಯ ಮೃತ್ಯುಂಜಯ ಸ್ವಾಮೀಜಿ

ಸುದ್ದಿ360 ಬೆಳಗಾವಿ, ಜ.10: ಬೀಸುವ ದೊಣ್ಣಯಿಂದ ತಪ್ಪಿಸಿಕೊಳ್ಳುವ ಯತ್ನ ಮಾಡುತ್ತಿರುವ ಸರಕಾರ  ಮೀಸಲಾತಿ ಹುಸಿ ಭರವಸೆ ಕೊಡುವ ಮೂಲಕ  ಹೋರಾಟದ ದಾರಿ ತಪ್ಪಿಸುತ್ತಿದೆ. ಸರಕಾರಕ್ಕೆ ಬಿಸಿ ಮುಟ್ಟಿಸಲು ಜ.13 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ  ಶಿಗ್ಗಾವಿಯಲ್ಲಿನ ಮನೆ ಮುಂದೆ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಇಂದು ಮಂಗಳವಾರ ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಮಣಿದ ಸರಕಾರ … Read more

ನ್ಯಾ.ಸದಾಶಿವ ವರದಿ ಯಥಾವತ್ ಜಾರಿ ಒತ್ತಾಯಿಸಿ ದಸಂಸ ದಾವಣಗೆರೆ ಜಿಲ್ಲಾ ಸಮಿತಿ ಪ್ರತಿಭಟನೆ

ಸುದ್ದಿ 360 ದಾವಣಗೆರೆ, ಜ.10:  ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಕೆಲಕಾಲ ಧರಣಿ ನಡೆಸಿದ ಪ್ರತಿಭಟನಾಕಾರರು, ಬಳಿಕ ಜಯದೇವ ವೃತ್ತ,  ಗಾಂಧಿ ವೃತ್ತ, ಪಿಬಿ ರಸ್ತೆ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ  ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು. ದಲಿತರ ಮೂಗಿಗೆ ತುಪ್ಪ ಹಚ್ಚುವ ಕೆಲಸ ಈ ವೇಳೆ ಮಾತನಾಡಿದ … Read more

ಚುನಾವಣಾ ಗಿಮಿಕ್ ಗೆ ಮುಂದಾಗಿರುವ ಸರ್ಕಾರದಿಂದ ಮೀಸಲಾತಿ ಗೊಂದಲ : ಸಿದ್ಧರಾಮಯ್ಯ

ಸುದ್ದಿ360 ದಾವಣಗೆರೆ, ಡಿ.30: ಮೀಸಲಾತಿಯಲ್ಲಿ ರಾಜಕೀಯ ಗಿಮಿಕ್ ಮಾಡುತ್ತಿರುವ ಬಜೆಪಿಯ ಡಬ್ಬಲ್ ಇಂಜಿನ್ ಸರ್ಕಾರ ಗೊಂದಲದಲ್ಲಿದೆ. ಚುನಾವಣೆ ಸಮೀಪಿಸುತ್ತಿದ್ದಂತೆ ಮತವೊಲಿಕೆಯ ರಾಜಕಾರಣ ಮಾಡುತ್ತಿದೆ ಎಂದು ಮೀಸಲಾತಿ ಕುರಿತು ಮಾಜಿ ಮುಖ್ಯಮಂತ್ರಿ ಮತ್ತು ವಿಧಾನಸಭೆ ವಿರೋಧಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು. ಅವರು ದಾವಣಗೆರೆಯಲ್ಲಿ ನಡೆಯುತ್ತಿರುವ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಿಸರ್ವೇಷನ್ 50 ಪರ್ಸೆಂಟ್‍ಗಿಂತ ಹೆಚ್ಚಾಗಬಾರದು ಎಂದು 1992ರಲ್ಲಿ ಸುಪ್ರೀಂಕೋರ್ಟ್ ಬೆಂಚ್ ಬಹಳ ಸ್ಪಷ್ಟವಾಗಿ ಹೇಳಿದೆ.  ಆದರೆ ಈ ಮೊದಲು … Read more

ಓಬಿಸಿ ಪಟ್ಟಿಯಲ್ಲಿ ಸೇರಿಸುವಂತೆ ವೀರಶೈವ ಲಿಂಗಾಯತ ಸಮುದಾಯದಿಂದ ಪ್ರತಿಭಟನೆ – ಮನವಿ

ಸುದ್ದಿ360, ದಾವಣಗೆರೆ ಆ. 01: ವೀರಶೈವ ಲಿಂಗಾಯತ ಸಮುದಾಯದ ಎಲ್ಲಾ ಪಂಗಡಗಳನ್ನು ಕೇಂದ್ರ ಸರ್ಕಾರದ ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸಬೇಕು ಎಂದು ಒತ್ತಾಯಿಸಿ ದಾವಣಗೆರೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಮಹಾತ್ಮಗಾಂಧಿ ವೃತ್ತದಲ್ಲಿ ಜಮಾಯಿಸಿದ ವೀರಶೈವ ಲಿಂಗಾಯುತ ಸಮುದಾಯದವರು, ಅವರಗೊಳ್ಳ ಪುರ ವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ, ತಾವರಗೆರೆ ಸಿದ್ಧಲಿಂಗ ಶಿವಾಚಾರ್ಯ ಶ್ರೀ, ಚನ್ನಗರಿ ಕೇದಾರ ಶಿವ ಶಾಂತವೀರ ಶ್ರೀ ಇವರುಗಳನ್ನೊಳಗೊಂಡ ಪ್ರತಿಭಟನಾಕಾರರು ಉಪವಿಭಾಗಾಧಿಕಾರಿಗಳ ಮೆರವಣಿಗೆ ಮೂಲಕ ಕಚೇರಿ ತಲುಪಿದರು. ಉಪವಿಭಾಗಾಧಿಕಾರಿಗಳ ಮೂಲಕ … Read more

ಕಾಂಗ್ರೆಸ್ ನ್ನು ಜನರೇ ಮನೆಗೆ ಚಲೋ ಮಾಡಲಿದ್ದಾರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ದಾವಣಗೆರೆ ಜೂ.16:  ಭ್ರಷ್ಟಾಚಾರ ಪ್ರಕರಣದ ತನಿಖೆ ವಿರುದ್ದ ಹೋರಾಟ ಮಾಡುತ್ತಿರುವುದು ಕಾಂಗ್ರೆಸ್‍ನ ದುರಂತವೇ ಸರಿ. ಕಾಂಗ್ರೆಸ್‍ನ ಇಂತಹ ನಿರ್ಧಾರಗಳಿಂದ ಜನರೇ ಕಾಂಗ್ರೆಸ್ ನ್ನು ಮನೆಗೆ ಚಲೋ ಮಾಡಲಿದ್ದಾರೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವ್ಯಂಗ್ಯವಾಡಿದರು. ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ದಾವಣಗೆರೆಗೆ ಆಗಮಿಸಿದ್ದ ಮುಖ್ಯಮಂತ್ರಿಗಳು. ಜಿಎಂಐಟಿ ಹೆಲಿಪ್ಯಾಡ್ ನಲ್ಲಿ ಎದುರಾದ ಸುದ್ದಿಗಾರರೊಂದಿಗೆ ಮಾತನಾಡಿ, ಜಾರಿ ನಿರ್ದೇಶನಾಲಯ ಕಾಂಗ್ರೆಸ್  ಮುಖಂಡರಿಗೆ ವಿಚಾರಣೆಗೆ ಆಗಮಿಸುವಂತೆ ನೋಟೀಸ್ ನೀಡಿರುವುದನ್ನು ವಿರೋಧಿಸಿ ಕಾಂಗ್ರೆಸ್ ನವರು ರಾಜಭವನ ಚಲೋ ಮಾಡುತ್ತಿರುವುದು ಕಾಂಗ್ರೆಸ್‍ನ ದುರಂತ. ಕಾಂಗ್ರೆಸ್‍ನ  … Read more

error: Content is protected !!