ದಾವಣಗೆರೆ: ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾದ ಜಿಲ್ಲಾ ಉಸ್ತುವಾರಿ ಸಚಿವರು

ಸುದ್ದಿ360 ದಾವಣಗೆರೆ, ಜೂನ್ 28: ಜಿಲ್ಲಾ ಉಸ್ತುವಾರಿ ಸಚಿವರಾದ ಬೈರತಿ ಬಸವರಾಜ್, ಸಚಿವರಾದ ಎಸ್ ಟಿ ಸೋಮಶೇಖರ್ ಇಂದು ದಾವಣಗೆರೆಗೆ ಆಗಮಿಸಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಈ ಸಂದರ್ಭದಲ್ಲಿ ಸಂಸದರಾದ ಜಿಎಂ ಸಿದ್ದೇಶ್ವರ್, ಶಾಸಕರಾದ ರವೀಂದ್ರನಾಥ್,  ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ವರಿಷ್ಠಾಧಿಕಾರಿ ರಿಷ್ಯಂತ್ ಕುಮಾರ್, ಮಹಾಪೌರರಾದ ಜಯಮ್ಮ ಆರ್ ಗೋಪಿ ನಾಯ್ಕ್, ನಿಕಟಪೂರ್ವ ಮಹಾಪೌರರಾದ ಎಸ್ ಟಿ ವೀರೇಶ್ ಮಹಾನಗರ ಪಾಲಿಕೆ ಸದಸ್ಯರಾದ ಪ್ರಸನ್ನಕುಮಾರ್ ಇನ್ನು ಮುಂತಾದವರು ಉಪಸ್ಥಿತರಿದ್ದರು.

error: Content is protected !!