ಬಿಗ್ ಶಾಕಿಂಗ್ – ಪ್ರಸಿದ್ಧ ಗಾಯಕ ಶಿವಮೊಗ್ಗ ಸುಬ್ಬಣ್ಣ ಇನ್ನಿಲ್ಲ

ಸುದ್ದಿ360 ಬೆಂಗಳೂರು, ಆ.11: ತಮ್ಮ ಮೋಹಕ ಕಂಠದಿಂದ ನಾಡಿನಾದ್ಯಂತ ಜನಪ್ರಿಯರೂ, ಕರ್ನಾಟಕ ಸುಗಮ ಸಂಗೀತದ ಪ್ರಸಿದ್ಧ ಗಾಯಕರೂ ಆಗಿದ್ದ ಶಿವಮೊಗ್ಗ ಸುಬ್ಬಣ (83) ಅವರು ಹೃದಯಾಘಾತದಿಂದ ಗುರುವಾರ ರಾತ್ರಿ ಇಹಲೋಕ ತ್ಯಜಿಸಿದರು. ಕಾಡು ಕುದುರೆ ಓಡಿಬಂದಿತ್ತಾ… ಕೋಡಗನ ಕೋಳಿ ನುಂಗಿತ್ತಾ… ಬಿದ್ದಿಯಬ್ಬೇ ಮುದುಕಿ ಬಿದ್ದೀಯಬ್ಬೇ.. ಹಾಡುಗಳ ಮೂಲಕ ಮನೆಮಾತಾಗಿದ್ದ ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ ಇನ್ನಿಲ್ಲ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಗಾಯನಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದ ಮೊದಲ ಕನ್ನಡಿಗರು ಎಂಬ ಖ್ಯಾತಿ ಹೊಂದಿದ್ದರು. … Read more

ಶಿವಮೊಗ್ಗ ನಗರದಲ್ಲಿ ಮತ್ತೊಂದು ಭೀಕರ ಕೊಲೆ

ಸುದ್ದಿ360 ಶಿವಮೊಗ್ಗ, ಆ.03: ರೌಡಿ ಶೀಟರ್ ಹಂದಿ ಅಣ್ಣಿ ಕೊಲೆ ಆಗಿ19 ದಿನಗಳು ಕಳೆದಿದ್ದು, ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಕೊಲೆ ಶಿವಮೊಗ್ಗ ಜನರನ್ನ‌ಬೆಚ್ಚಿ ಬೀಳಿಸಿದೆ. ನಗರದ ಸಾಗರ ರಸ್ತೆಯ ಬಾರೊಂದರ ಬಳಿ ಓರ್ವ ಯುವಕನನ್ನು ಬಿಯರ್ ಬಾಟಲಿಯಿಂದ ಇರಿದು, ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಸುದ್ದಿ ವರದಿಯಾಗಿದೆ. ಕೊಲೆಯಾದ ಯುವಕನನ್ನ ಪುಚ್ಚಿ ಕಿರಣ್ ಎಂದು ಗುರುತಿಸಲಾಗಿದ್ದು, ಹೊಸಮನೆ ಏರಿಯಾದ ಹುಡುಗನಾಗಿರುವ ಈತ ನಿನ್ನೆ ರಾತ್ರಿ ಕುಡಿಯಲು ತೆರಳಿದ್ದನು. ಕಿರಣ್ ಜೊತೆ ಇಬ್ವರು ಸ್ನೇಹಿತರು ತೆರಳಿದ್ದು … Read more

ಶಿವಮೊಗ್ಗ ನಗರದಲ್ಲಿ ವಿಶೇಷ ಕಾರ್ಯಾಚರಣೆ – ಮಾರಕಾಸ್ತ್ರಗಳು ಪೊಲೀಸರ ವಶ

ಪೊಲೀಸರು ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆದಿರುವ ಮಾರಕಾಸ್ತ್ರಗಳು.

ಬಿ.ಎಸ್.ಯಡಿಯೂರಪ್ಪ ಚುನಾವಣಾ ರಾಜಕೀಯ ನಿವೃತ್ತಿ? –  ಬಿ.ವೈ. ವಿಜಯೇಂದ್ರ ಶಿಕಾರಿಪುರದಿಂದ ಸ್ಪರ್ಧೆ. . .

ಸುದ್ದಿ360, ಶಿವಮೊಗ್ಗ, ಜು.22: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರದಿಂದ ಬಿ.ವೈ. ವಿಜಯೇಂದ್ರ ಸ್ಪರ್ಧೆ ಮಾಡಲಿದ್ದು, ಜನರು ಆಶೀರ್ವಾದ ಮಾಡಬೇಕು ಎಂದು ಮಾಜಿ ಮುಖ್ಯಮೂರ್ತಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. ಇದು ರಾಜಕೀಯ ವಲಯದಲ್ಲಿ ದೊಡ್ಡ ಸಂಚಲನವನ್ನು ಮೂಡಿಸಿದ್ದು, ಇದರ ಜೊತೆಗೆ ಯಡಿಯೂರಪ್ಪನವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವ ಸುಳಿವು ಎಂದೇ ವಿಶ್ಲೇಷಿಸಲಾಗುತ್ತಿದೆ. ಶಿಕಾರಿಪುರ ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ನಡೆದ ಚೆಕ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿರುವ ಯಡಿಯೂರಪ್ಪನವರು, ಸಂಸದ ಬಿ.ವೈ. ರಾಘವೇಂದ್ರ ಅವರೊಂದಿಗೆ ವಿಜಯೇಂದ್ರ ಅವರು ಕೂಡ ತಾಲೂಕಿನಾದ್ಯಂತ … Read more

ಭದ್ರಾ ಡ್ಯಾಂ ಭರ್ತಿ: ಜಲಾಶಯದಿಂದ 12 ಸಾವಿರ ಕ್ಯೂಸೆಕ್ ನೀರು ನದಿಗೆ

ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಹರ್ಷ – ನದಿ ಪಾತ್ರದ ಜನರಿಗೆ ಎಚ್ಚರಿಕೆ ಸಂದೇಶ ಸುದ್ದಿ360, ಬಿಆರ್ ಪಿ, ಜು.14: ಮುಂಗಾರು ಮಳೆ ಮುಂದುವರೆದಿದ್ದು, ಭದ್ರಾ ಜಲಾಶಯ ಬಹುತೇಕ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದ ಸುರಕ್ಷತೆ ದೃಷ್ಟಿಯಿಂದ 12 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ. ಇಂದು (ಜು.14) ಜಲಾಶಯಕ್ಕೆ 43 ಸಾವಿರ ಕ್ಯೂಸೆಕ್ ನೀರು ಒಳ ಹರಿವಿದ್ದು, ಇಂದಿನ ನೀರಿನ ಮಟ್ಟ 183.2 ಅಡಿಗೆ ಏರಿಕೆಯಾಗಿದೆ. ಡ್ಯಾಂ ಭರ್ತಿಗೆ ಕೇವಲ ಮೂರು ಅಡಿ ಮಾತ್ರ ಬಾಕಿ … Read more

ಅಮರನಾಥ: ಶಿವಮೊಗ್ಗದ 16 ಮಹಿಳೆಯರು ಸೇಫ್

ಸುದ್ದಿ360, ಶಿವಮೊಗ್ಗ, ಜು.09: ಶಿವಮೊಗ್ಗದಿಂದ ಅಮರನಾಥ ಯಾತ್ರೆ ಕೈಗೊಂಡಿದ್ದ 16 ಮಹಿಳೆಯರು ಸುರಕ್ಷಿತವಾಗಿದ್ದು, ಇವರು ಈಗ ಹೆಲಿಪ್ಯಾಡ್ ಬಳಿ ತಂಗಿದ್ದು, ಶೀಘ್ರದಲ್ಲಿಯೇ ಶಿವಮೊಗ್ಗಕ್ಕೆ ಹಿಂತಿರುಗಲಿದ್ದಾರೆ. ಮೈಸೂರಿನಿಂದ ಯಾತ್ರೆ ಕೈಗೊಂಡಿದ್ದ ವಕೀಲರ ತಂಡ ಕೂಡ ಸುರಕ್ಷಿತವಾಗಿದೆ. ಬೀದರ್ ನಿಂದ ತೆರಳಿದ್ದ ಯುವಕರ ತಂಡ ಸಂಬಂಧಿಕರಿಗೆ ಮಾಹಿತಿ ರವಾನಿಸಿದ್ದು ಸುರಕ್ಷಿತವಾಗಿರುವುದಾಗಿ ತಿಳಿಸಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಇಂಡಿಯನ್ ಟಿಬೆಟ್ ಫೋರ್ಸ್ ಸೇರಿದಂತೆ  ಎಲ್ಲ ಘಟಕಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಸಹಾಯವಾಣಿಯ ವಿವರ: ಎನ್.ಡಿ.ಆರ್.ಎಫ್: 011-23438252, 011-23438253 ಕಶ್ಮೀರ್ ಡಿವಿಷನಲ್ … Read more

ಜು. 17 ಬಂಜಾರ ವಧುವರರ ಅನ್ವೇಷಣೆ – ಬಂಜಾರ ಸಾಂಸ್ಕೃತಿಕ ಉತ್ಸವ

ಸುದ್ದಿ360 ದಾವಣಗೆರೆ.ಜು.01: ಬೆಂಗಳೂರಿನ ವಸಂತನಗರದಲ್ಲಿರುವ ಬಂಜಾರ ಭವನದಲ್ಲಿ ಜು.17ರಂದು ರಾಜ್ಯ ಮಟ್ಟದ ಬಂಜಾರ ವಧುವರರ ಅನ್ವೇಷಣೆ ಮತ್ತು ಬಂಜಾರ ಸಾಂಸ್ಕೃತಿಕ ಉತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಬಂಜಾರ ಲಂಬಾಣಿ ಜನಸೇವಾ ಸಂಘದ ರಾಜ್ಯಾಧ್ಯಕ್ಷ ಎ.ಆರ್. ಹನುಮಂತ ನಾಯ್ಕ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಬಂಜಾರ ಲಂಬಾಣಿ ಸಮುದಾಯದ ಜನಸಂಖ್ಯೆ ಹೆಚ್ಚಾಗಿದೆ. ಈ ಜಿಲ್ಲೆಗಳೂ ಸೇರಿ, ಶಿವಮೊಗ್ಗ, ತುಮಕೂರು, ಹಾಸನ, ಬಿಜಾಪುರ ಜಿಲ್ಲೆಗಳ ಸಮುದಾಯದ ಜನರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ … Read more

error: Content is protected !!