ಚಿಕಿತ್ಸೆಯ ಸಹಾಯಕ್ಕಾಗಿ ಕೈ ಚಾಚಿರುವ 13ರ ಬಾಲಕ ಕೌಶಿಕ್ ಗೆ ಯೋಧನಾಗುವ ಬಯಕೆ

kowshik

ಹೊಳೆಹೊನ್ನೂರು, (ಶಿವಮೊಗ್ಗ): ಆತನ  ಹೆಸರು ಕೌಶಿಕ್ ವಯಸ್ಸು 13 ವರ್ಷ,  ಊರು ಶಿವಮೊಗ್ಗ ಸಮೀಪದ ಹೊಳೆ ಹೊನ್ನುರು. ಆತನ ಬಹುದೊಡ್ಡ ಆಸೆ ದೇಶ ಕಾಯುವ ಸೈನಿಕನಾಗಬೇಕು, ರಕ್ಷಕನಾಗಬೇಕು ಎಂಬುದು. ಅದು ಫಲಿಸುತ್ತದೋ ಇಲ್ಲವೋ ತಿಳಿಯದು. ಆದರೆ ಅವನೀಗ ಅನಾರೋಗ್ಯದಿಂದ ಬಳಲುತ್ತಿದ್ದಾನೆ. ಈ ಮಗುವಿನ ಜೀವ ಉಳಿಸಲು ಮಣಿಪಾಲ ಆಸ್ಪತ್ರೆಯ ವೈದ್ಯರು ಬೋನ್ ಮ್ಯಾರೋ ಬದಲಾವಣೆ ಚಿಕಿತ್ಸೆಗೆ (ಮೂಳೆ ಮಜ್ಜೆಯ ಕಸಿ) ಸೂಚಿಸಿದ್ದಾರೆ. ಆ ಚಿಕಿತ್ಸೆಯ ಖರ್ಚು ಬರೋಬ್ಬರಿ  40 ಲಕ್ಷ ರೂಪಾಯಿ. ಒಂದೊತ್ತಿನ ಊಟಕ್ಕು ಇನ್ನೊಬ್ಬರ ಮುಂದೆ … Read more

ಶಿವಮೊಗ್ಗ: ಮಕ್ಕಳ ದಸರಾ ಪ್ರಯುಕ್ತ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿ

ಸುದ್ದಿ360 ಶಿವಮೊಗ್ಗ(Shivamogga) ಅ.11: ಶಿವಮೊಗ್ಗ ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಶಿವಮೊಗ್ಗ ಜಿಲ್ಲಾ ಕರಾಟೆ ಅಸೋಸಿಯೇಷನ್ ವತಿಯಿಂದ ಇದೇ ಅ.16 ರಂದು ಮಕ್ಕಳ ದಸರಾ ಪ್ರಯುಕ್ತ ನಗರದ  ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ 17 ವರ್ಷ ದೊಳಗಿನ ವಯಸ್ಸಿನ ಮಕ್ಕಳಿಗೆ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿ (State Level Karate Tournament for Childrens) ಆಯೋಜಿಸುತ್ತಿರುವುದಾಗಿ ಶಿವಮೊಗ್ಗ ಜಿಲ್ಲಾ ಕರಾಟೆ ಅಸೋಸಿಯೇಷನ್ ನ ಮುಖೀಬ್ ಅಹಮದ್ ತಿಳಿಸಿದ್ದಾರೆ. ಪಂದ್ಯಾವಳಿಯಲ್ಲಿ ಕುಮಿತಿ ವಿಭಾಗಗಳು ಇದ್ದು ಶಿವಮೊಗ್ಗ ನಗರದ ಮಕ್ಕಳಿಗೆ ಮೊದಲ ಆದ್ಯತೆಯಾಗಿದ್ದು … Read more

ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಆರಂಭ. . . ಹೇಗಿದೆ ರಾಜಬೀದಿ ಉತ್ಸವ. . .

ಸುದ್ದಿ360 ಶಿವಮೊಗ್ಗ, ಸೆ. 28: ನಗರದ ಕೋಟೆ ಭೀಮೇಶ್ವರ ಸ್ವಾಮಿ ದೇವಾಲಯ ಆವರಣದಲ್ಲಿ, ಹಿಂದೂ ಮಹಾಮಂಡಲದವತಿಯಿಂದ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆಗೆ ವಿದ್ಯುಕ್ತ ಚಾಲನೆ ದೊರೆತಿದೆ. ಶಾಸಕ ಚನ್ನಬಸಪ್ಪ ನೇತೃತ್ವದಲ್ಲಿ ನಡೆದ ವಿಶೇಷ ಪೂಜೆಯ ನಂತರ  ರಾಜಬೀದಿ ಉತ್ಸವ ಪ್ರಾರಂಭಗೊಂಡಿದೆ. ಶೃಂಗಾರಗೊಂಡ ರಸ್ತೆಗಳಲ್ಲಿ ಕಲಾತಂಡಗಳು ಡೊಳ್ಳು, ತಮಟೆ, ವೀರಗಾಸೆ, ಮಹಿಳಾ ಡೊಳ್ಳು ತಂಡ, ನಾದಸ್ವರ, ಗೊಂಬೆ ವೇಷದಾರಿಗಳು ಸೇರಿದಂತೆ ವಿವಿಧ ಕಲಾ ತಂಡಗಳೊಂದಿಗೆ ಸಾಗಿರುವ  ಮೆರವಣಿಗೆಯಲ್ಲಿ ಸಾವಿರಾರು ಭಕ್ತಸಮೂಹ ಹೆಜ್ಜೆ ಹಾಕಿದೆ. ವಿವಿಧ … Read more

ಸಿಇಟಿ / ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆ ; ತಜ್ಞರೊಂದಿಗೆ ವಿಶೇಷ ಸಂವಾದ

cet comed-k seminar shimoga jnnce college

ಶಿವಮೊಗ್ಗ ಜೆಎನ್‍ಎನ್‍ಇ ಕಾಲೇಜಿನಲ್ಲಿ ಸಂವಾದ ಕಾರ್ಯಕ್ರಮ. ವಿವಿಧ ಎಂಜಿನಿಯರಿಂಗ್‌ ವಿಭಾಗಗಳ ಪರಿಚಯ, ಉದ್ಯೋಗವಕಾಶಗಳು, ವಿವಿಧ ವಿದ್ಯಾರ್ಥಿ ವೇತನಗಳ ಕುರಿತಾಗಿ ತಜ್ಞರಿಂದ ಮಾಹಿತಿ ಸುದ್ದಿ360 ಶಿವಮೊಗ್ಗ: ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆ ಕುರಿತು ನಗರದ ಜೆಎನ್‌ಎನ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಜು.09 ರ ಭಾನುವಾರದಂದು ಶಿಕ್ಷಣ ತಜ್ಞರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ. ಅಂದು ಬೆಳಗ್ಗೆ 11:00 ಗಂಟೆಗೆ ಕಾಲೇಜಿನ ಎಂಬಿಎ-ಎಂಸಿಎ ಸಭಾಂಗಣದಲ್ಲಿ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆಯನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಲಾಗುತ್ತದೆ. ಜೊತೆಯಲ್ಲಿ ವಿವಿಧ … Read more

ಶಾಲೆಗೆ ಹೊರಟ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ಸುದ್ದಿ360, ಶಿವಮೊಗ್ಗ ಜ.11:  ಎಂದಿನಂತೆ ಶಾಲೆಗೆ ತೆರಳಲು ಸಿದ್ಧನಾಗುತ್ತಿದ್ದ10ನೆಯ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದಾಗಿ ಸಾವು ಕಂಡಿದ್ದು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಜಯಂತ್ ಎಂಬ ಬಾಲಕನೇ ಮೃತ ದುರ್ದೈವಿ. ಇಂದು ಮುಂಜಾನೆ ಶಾಲೆಗೆ ಹೋಗಲು ತಯಾರಾಗುತ್ತಿದ್ದ ವೇಳೆ ಬಾಲಕನಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಆತನನ್ನು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಆದರೆ ಅಷ್ಟೊತ್ತಿಗಾಗಲೇ ವಿದ್ಯಾರ್ಥಿ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಆಟ – ಪಾಠಗಳಲ್ಲಿ … Read more

ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಶಿವಮೊಗ್ಗದ ಅಜಯ್ ದ್ವಿತೀಯ

ಸುದ್ದಿ360 ಶಿವಮೊಗ್ಗ ನ. 12: ಶಿವಮೊಗ್ಗದ ಆಕ್ಸ್ ಫರ್ಡ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ ಹಾಗೂ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನ ಕ್ರೀಡಾಂಗಣದಲ್ಲಿ  ಕರಾಟೆ ತರಬೇತಿ ದಾರರಾದ  ಸನ್ ಸೈ  ಶ್ರೇಯಸ್ ರವರ ವಿದ್ಯಾರ್ಥಿ ಯಾದ  ಅಜಯ್ ಮಂಗಳೂರಿನ ಕಟೀಲಿನಲ್ಲಿ ನಡೆಯುತ್ತಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ 60 ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು  ಪಡೆದಿದ್ದಾರೆ. ವಿಜೇತ ಕ್ರೀಡಾಪಟುವಿಗೆ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ಶಿವಮೊಗ್ಗ ವಿನೋದ್ ಅಭಿನಂದಿಸಿದ್ದಾರೆ.

ಶಿವಮೊಗ್ಗ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ದೀಪಕ್ ಸಿಂಗ್ ನೇಮಕ

ಸುದ್ದಿ360 ಶಿವಮೊಗ್ಗ,ನ.11: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ದೀಪಕ್ ಸಿಂಗ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕಮಾಡಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು ನೇಮಕಾತಿ ಆದೇಶ ಹೊರಡಿಸಿದ್ದಾರೆ. ದೀಪಕ್ ಸಿಂಗ್ ಅವರು ತಕ್ಷಣ ಶಿವಮೊಗ್ಗ ಉತ್ತರ ಬ್ಲಾಕ್ ಕಾಂಗ್ರೆಸ್‌ನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಲಾಗಿದೆ.

ಶಿವಮೊಗ್ಗ ಜಿಲ್ಲಾ ಒಳಾಂಗಣ ಕ್ರೀಡಾಂಗಣ ಶಟಲ್ ಗಾಗಿ ಮೀಸಲಾಯಿತೇ. . .?

ಇತರೆ ಕ್ರೀಡೆಗಳೆಡೆ ಮಹಾನಗರ ಪಾಲಿಕೆ, ಜಿಲ್ಲಾಡಳಿತದ ಧೋರಣೆಯಾದರೂ ಏನು..? ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಶನ್ ಹಾಗೂ ಕ್ರೀಡಾಪಟುಗಳಿಂದ ಪ್ರತಿಭಟನೆ ಸುದ್ದಿ360 ಶಿವಮೊಗ್ಗ, ಸೆ. 18: ಶಿವಮೊಗ್ಗ ನಗರದಲ್ಲಿರುವ ನೆಹರೂ ಒಳಾಂಗಣ ಕ್ರೀಡಾಂಗಣವನ್ನು ಇಲಾಖಾ ಕ್ರೀಡಾ ಚಟುವಟಿಕೆಗಳಿಗೆ ನೀಡಲು ನಿರಾಕರಿಸುತ್ತಿರುವ ಕ್ರೀಡಾಧಿಕಾರಿಯ ಧೋರಣೆಯನ್ನು ಖಂಡಿಸಿ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಶನ್ ಹಾಗೂ ಕ್ರೀಡಾಪಟುಗಳು ಭಾನುವಾರ ಕ್ರೀಡಾಂಗಣದ ಎದುರು ಪ್ರತಿಭಟನೆ ನಡೆಸಿದರು. ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ಸ್ಮಾರ್ಟ್ ಸಿಟಿ ಅಡಿಯಲ್ಲಿ ಶಟಲ್ ಕೋರ್ಟ್ ಗಳಿಗಾಗಿ ಸಿಂಥೆಟಿಕ್ ಅಳವಡಿಕೆಯಿಂದ ಇತರೆ ಕ್ರೀಡೆಗಳಿಗೆ … Read more

ನೇಣಿಗೆ ಶರಣಾದ ಯುವಕ

ಸುದ್ದಿ360 ಶಿವಮೊಗ್ಗ, ಸೆ,16: ಶಿಕಾರಿಪುರ ತಾಲ್ಲೂಕಿನ ಯುವಕನೊಬ್ಬ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೋಕ್ಸೊ ಕಾಯ್ದೆಯಡಿ ಬಂಧನಕ್ಕೆ ಒಳಗಾಗಿ, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಈತ, ತಾನು ಬಂಧನಕ್ಕೊಳಗಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಿ ಮಾಡಿಕೊಳ್ಳಲು ದೂರುದಾರ ಬಾಲಕಿಯ ತಂದೆ, ತಾಯಿ ಹಾಗೂ ಸಂಬಂಧಿಕರು ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎಂಬುದಾಗಿ ಪತ್ರ ಬರೆದಿದ್ದಾನೆ. ಬಡವನಾದ ನನ್ನಿಂದ ಹಣ ನೀಡಲು ಸಾಧ್ಯವಿಲ್ಲ, ಆದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ನನ್ನ ಮಗ ಪತ್ರದಲ್ಲಿ ಉಲ್ಲೇಖಿಸಿದ್ದಾನೆ. ಈ ಸಂಬಂಧ ಬಾಲಕಿಯ ತಂದೆ, ತಾಯಿ … Read more

ನಾಡಹಬ್ಬ ದಸರಾ ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಲು ಸಂಸದ ಬಿ.ವೈ.ರಾಘವೇಂದ್ರ ಕರೆ

ಶಿವಮೊಗ್ಗ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ಸುದ್ದಿ360 ಶಿವಮೊಗ್ಗ, ಸೆ.15: ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ವಯಸ್ಸಿನ ಇತಿ-ಮಿತಿ ಇಲ್ಲ. ಮನಸ್ಸು ಉಲ್ಲಸಿತವಾಗಿ, ಸಂತಸದಿಂದಿರಲು ಕ್ರೀಡೆ ಸಹಕಾರಿಯಾಗಿದ್ದು, ಎಲ್ಲರೂ ನಾಡಹಬ್ಬ ದಸರಾ ಪ್ರಯುಕ್ತ ಹಮ್ಮಿಕೊಂಡಿರುವ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವಂತೆ ಸಂಸದ ಬಿ.ವೈ.ರಾಘವೇಂದ್ರ ಕರೆ ನೀಡಿದರು. ನಗರದ ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿವಿಧ ಕ್ರೀಡಾ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಇಂದು ಏರ್ಪಡಿಸಲಾಗಿದ್ದ 2022-23 ನೇ … Read more

error: Content is protected !!