ಸಿದ್ದರಾಮಯ್ಯ ಹರಕೆಯ ಕುರಿಯಾಗಲಿದ್ದಾರೆ: ಎಚ್.ಡಿ.ಕೆ

ಸುದ್ದಿ360 ಕಲಬುರಗಿ ಜ.13: ಸಿದ್ಧರಾಮಯ್ಯನವರನ್ನು ಕೋಲಾರದಲ್ಲಿ ಕಣಕ್ಕಿಳಿಸುವ ಮೂಲಕ ಅವರ ಪಕ್ಷದವರೇ ಅವರನ್ನು ಹರಕೆಯ ಕುರಿಯನ್ನಾಗಿ ಮಾಡಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಶುಕ್ರವಾರ ಅವರು ಜಿಲ್ಲೆಯ ಕಡಣಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ಧರಾಮಯ್ಯರಿಗೆ  ಕೋಲಾರ ಕ್ಷೇತ್ರ ಸೇಫ್ ಅಲ್ಲ. ಅವರಿಗೆ ಅಲ್ಲಿ  ನಿಲ್ಲುವಂತೆ ಯಾರು ಒತ್ತಡ ಹಾಕಿದ್ದಾರೆ ಎಂಬುದು ಗೊತ್ತಿಲ್ಲ. ನಾನು ಸ್ವತಃ ಕೋಲಾರದಲ್ಲಿ ಸುತ್ತಾಡಿ, ಅಲ್ಲಿಯ ಜನರ ಭಾವನೆ ಅರಿತುಕೊಂಡಿದ್ದೇನೆ. ಕೋಲಾರದಲ್ಲಿ ಕಾಂಗ್ರೆಸ್ ಪಕ್ಷಕ್ಕಾಗಲಿ ಅಥವಾ ನಾಯಕರಿಗಾಗಲಿ ಮತ ಪಡೆಯುವ ಶಕ್ತಿ … Read more

ಸಿದ್ಧರಾಮಯ್ಯಗೆ ಕುರಿ – ಕಂಬಳಿಯೊಂದಿಗೆ ಭವ್ಯ ಸ್ವಾಗತ ನೀಡಿದ ಕಾರ್ಯಕರ್ತರು

ಸುದ್ದಿ360, ಬೆಳಗಾವಿ  ಜ.11: ಕಾಂಗ್ರೆಸ್ ನ ಬಸ್ ಯಾತ್ರೆ ಅಂಗವಾಗಿ ಚಿಕ್ಕೋಡಿಯಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದ ಮಾಜಿಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಚಿಕ್ಕೋಡಿ ತಾಲೂಕಿನ ಮಜಲಟ್ಟಿ ಗ್ರಾಮ ಬಳಿ ಭಾರಿ ಸ್ವಾಗತ ಕಾದಿತ್ತು. ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರು ಸಿದ್ಧರಾಮಯ್ಯರಿಗಾಗಿ ಕುರಿ ಮತ್ತು ಕಂಬಳಿಯನ್ನು ಉಡುಗೊರೆಯಾಗಿ ನೀಡಿ ಸ್ವಾಗತಿಸಿದರು. ಶಂಭು ಕಲ್ಲೋಳ್ಕರ್, ಧೂಳಗೌಡ ಪಾಟೀಲ್ ನೇತೃತ್ವದಲ್ಲಿ ರಾಯಭಾಗ ಮತಕ್ಷೇತ್ರದಿಂದ  ಬೈಕ್ ರ್ಯಾಲಿ ಮೂಲಕ ಮಜಲಟ್ಟಿ ಗ್ರಾಮ ಬಳಿ … Read more

ಬಾದಾಮಿಯಿಂದ ಸ್ಪರ್ಧಿಸಿದರೆ ಒಳ್ಳೆಯದಾಗುತ್ತೆ – ಸಿದ್ಧರಾಮಯ್ಯನವರಿಗೆ ಬನಶಂಕರಿ ದೇಗುಲದ ಅರ್ಚಕರ ಮನವಿ

ಸುದ್ದಿ360 ಬಾಗಲಕೋಟೆ ಜ.6: ಮುಂಬರುವ ಚುನಾವಣೆಯಲ್ಲಿ ಬಾದಾಮಿಯಿಂದ ಸ್ಫರ್ಧೆ ಮಾಡಿದರೆ ಸಿದ್ದರಾಮಯ್ಯ ಗೆ ಒಳ್ಳೆಯದಾಗುತ್ತದೆ ಎಂದು ಬಾದಾಮಿ ಬನಶಂಕರಿ ದೇಗುಲದ ಅರ್ಚಕರು ಹೇಳಿದ್ದಾರೆ. ಬನಶಂಕರಿ ಜಾತ್ರೆಯ ಮಹಾರಥೋತ್ಸವ ನಿಮಿತ್ತ ಬಾದಾಮಿಗೆ ಆಗಮಿಸಿದ್ದ ಸಿದ್ದರಾಮಯ್ಯರಿಗೆ ಇಲ್ಲಿನ ಅರ್ಚಕರು ಮನವಿ ಮಾಡಿದ್ದಾರೆ. ಸಿದ್ದರಾಮಯ್ಯನವರಿಂದ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಪೂಜಾ ಕೈಂಕರ್ಯ ಮುಗಿದ ಬಳಿಕ ಆಶೀರ್ವಾದ ಮಾಡಿದ ಅರ್ಚಕರು ಬಾದಾಮಿಯಿಂದ ಸ್ಫರ್ಧೆ ಮಾಡಿದರೆ ಒಳ್ಳೆಯದಾಗುತ್ತೆ ಎಂದು ಹೇಳಿದ್ದಾರೆ.

ಬನಶಂಕರಿ ನಿನ್ನ ಪಾದಕ ಶಂಭೂಕೋ – ಬನಶಂಕರಿ ರಥೋತ್ಸವಕ್ಕೆ ಸಂಭ್ರಮದ ಚಾಲನೆ

ಸುದ್ದಿ360 ಬಾಗಲಕೋಟೆ ಜ.6: ಜಿಲ್ಲೆಯ ಬಾದಾಮಿಯ ಬನಶಂಕರಿ ರಥೋತ್ಸವಕ್ಕೆ ಶುಕ್ರವಾರ ಸಂಭ್ರಮದ ಚಾಲನೆ ದೊರೆತಿದ್ದು, ಮಾಜಿ ಮುಖ್ಯಮಂತ್ರಿ, ಬಾದಾಮಿ ಶಾಸಕ ಸಿದ್ದರಾಮಯ್ಯ ಪುಷ್ಪಾರ್ಪಣೆ ಮಾಡು ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ರಥೋತ್ಸವದಲ್ಲಿ ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ನೆರೆದಿದ್ದ ಜನ ಸಾಗರದಿಂದ “ಬನಶಂಕರಿ ನಿನ್ನ ಪಾದಕ ಶಂಭೂಕೋ” ಎಂಬ ಉದ್ಘೋಷ ಕೇಳಿಬರುತ್ತಿತ್ತು. ಉದ್ಘೋಷದೊಂದಿಗೆ ನಮಿಸಿದ ಭಕ್ತಸಾಗರ ದೇವಿಯ ಕೃಪೆಗೆ ಪಾತ್ರರಾದರು. ಒಂದು ತಿಂಗಳ ಜಾತ್ರೆ ಇದಾಗಿದ್ದು ಇಂದಿನಿಂದ ಅಧಿಕೃತವಾಗಿ ಪ್ರಾರಂಭಗೊಂಡಿದೆ.

ಚುನಾವಣಾ ಗಿಮಿಕ್ ಗೆ ಮುಂದಾಗಿರುವ ಸರ್ಕಾರದಿಂದ ಮೀಸಲಾತಿ ಗೊಂದಲ : ಸಿದ್ಧರಾಮಯ್ಯ

ಸುದ್ದಿ360 ದಾವಣಗೆರೆ, ಡಿ.30: ಮೀಸಲಾತಿಯಲ್ಲಿ ರಾಜಕೀಯ ಗಿಮಿಕ್ ಮಾಡುತ್ತಿರುವ ಬಜೆಪಿಯ ಡಬ್ಬಲ್ ಇಂಜಿನ್ ಸರ್ಕಾರ ಗೊಂದಲದಲ್ಲಿದೆ. ಚುನಾವಣೆ ಸಮೀಪಿಸುತ್ತಿದ್ದಂತೆ ಮತವೊಲಿಕೆಯ ರಾಜಕಾರಣ ಮಾಡುತ್ತಿದೆ ಎಂದು ಮೀಸಲಾತಿ ಕುರಿತು ಮಾಜಿ ಮುಖ್ಯಮಂತ್ರಿ ಮತ್ತು ವಿಧಾನಸಭೆ ವಿರೋಧಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು. ಅವರು ದಾವಣಗೆರೆಯಲ್ಲಿ ನಡೆಯುತ್ತಿರುವ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಿಸರ್ವೇಷನ್ 50 ಪರ್ಸೆಂಟ್‍ಗಿಂತ ಹೆಚ್ಚಾಗಬಾರದು ಎಂದು 1992ರಲ್ಲಿ ಸುಪ್ರೀಂಕೋರ್ಟ್ ಬೆಂಚ್ ಬಹಳ ಸ್ಪಷ್ಟವಾಗಿ ಹೇಳಿದೆ.  ಆದರೆ ಈ ಮೊದಲು … Read more

ನಾಳೆ ದಾವಣಗೆರೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ನಗರದಲ್ಲಿ ಶ್ರೀ ಎಲ್.ಬಿ.ಕೆ. ಕಲ್ಯಾಣ ಟ್ರಸ್ಟ್ ವತಿಯಿಂದ 7 ನೇ ಬಾರಿಗೆ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮವನ್ನು ಡಿ.30ರಂದು ಬೆಳಿಗ್ಗೆ11 ಗಂಟೆಗೆ ನಗರದ ಶ್ರೀ ರಾಜವೀರ ಮದಕರಿ ನಾಯಕ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ. ಹರಿಹರ ರಾಜನಹಳ್ಳಿ ವಾಲ್ಮೀಕಿ ಸಂಸ್ಥಾನದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ, ಕಾಗಿನೆಲೆ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಕೂಡಲಸಂಗಮದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ, ಚಿತ್ರದುರ್ಗದ ಶ್ರೀ ಮಾದರ ಚನ್ನಯ್ಯ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರ ಸಾನಿಧ್ಯದಲ್ಲಿ ಜರುಗುವ ವಿವಾಹ ಮಹೋತ್ಸವ ಕಾರ್ಯಕ್ರಮವನ್ನು ಮಾಜಿ … Read more

ಓಪಿಎಸ್: ಹೈಕಮಾಂಡ್‍ನೊಂದಿಗೆ ಚರ್ಚೆ – ಸಿದ್ಧರಾಮಯ್ಯ

ಸುದ್ದಿ360  ದಾವಣಗೆರೆ ಡಿ.25: ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ ಕುರಿತು ಪಕ್ಷದ ಹೈಕಮಾಂಡ್‍ನೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ. ಹೊಸ ಪಿಂಚಣಿ ಯೋಜನೆ (ಎನ್ ಪಿ ಎಸ್) ರದ್ದುಗೊಳಿಸಿ  ಓಪಿಎಸ್ ಜಾರಿಗೊಳಿಸುವಂತೆ ಆಗ್ರಹಿಸಿ ಸರ್ಕಾರಿ ನೌಕರರು ರಾಜಧಾನಿಯ ಸ್ವಾತಂತ್ರ್ಯ  ಉದ್ಯಾನವನದಲ್ಲಿ ಹಮ್ಮಿಕೊಂಡಿರುವ ಅನಿರ್ಧಿಷ್ಟಾವಧಿ ಧರಣಿ ಸ್ಥಳಕ್ಕೆ ಶನಿವಾರ ಭೇಟಿ ನೀಡಿ ಧರಣಿ ನಿರತರ ಅಹವಾಲು ಸ್ವೀಕರಿಸಿ ಮಾತನಾಡಿದರು. ನಾನ್ನ ಅಧಿಕಾರಾವಧಿಯಲ್ಲಿ  ಓಪಿಎಸ್ ಜಾರಿ ಮಾಡಲು ಸಾಧ್ಯವಿಲ್ಲ ಎಂದು ನಾನು … Read more

ಮಾಜಿ ಸಿಎಂ ಸಿದ್ಧರಾಮಯ್ಯಗೆ ಯಾವ ಕ್ಷೇತ್ರವೂ ಸುರಕ್ಷಿತವಾಗಿಲ್ಲ: ಸಚಿವ ಗೋವಿಂದ ಕಾರಜೋಳ ಲೇವಡಿ

ಚಾಮುಂಡೇಶ್ವರಿ ಕ್ಷೇತ್ರದ ಜನರು ಕೈಬಿಟ್ಟಾಗ ಬಾದಾಮಿ ಜನರು ಸಿದ್ದರಾಮಯ್ಯ ಕೈ ಹಿಡಿದಿದ್ದರು. ಅವರ ಸೇವೆ ಮಾಡುವುದು ಬಿಟ್ಟು ಈಗ ಬೇರೆ ಕ್ಷೇತ್ರ ಕ್ಕೆ ಹೋಗುತ್ತಿದ್ದಾರೆ. ಕೋಲಾರದಲ್ಲಿ ಸ್ಥಿತಿ ಸರಿಯಿಲ್ಲ, ಅಲ್ಲಿ ಮುನಿಯಪ್ಪನವರನ್ನು ಕಾಂಗ್ರೆಸ್ ನವರೇ ಸೋಲಿಸಿದ್ದಾರೆ. ಈ ಸರತಿ ಎಲ್ಲರಿಗೂ ಬರಲಿದೆ ಎಂದು ಹೇಳಿದ ಅವರು, ಕಷ್ಟ ಕಾಲದಲ್ಲಿ ಕೈ ಹಿಡಿದವರನ್ನು ಮರೆಯಬಾರದು’ .

‘ಸಿ.ಟಿ. ರವಿ’ಯವರಿಗೆ ‘ಲೂಟಿ ರವಿ’ ಎಂದದ್ದು ಸಿದ್ಧರಾಮಯ್ಯರಲ್ಲ. . .

ಸುದ್ದಿ360 ದಾವಣಗೆರೆ, ಸೆ.13: ಸಿ .ಟಿ .ರವಿಯವರಿಗೆ ‘ಲೂಟಿ ರವಿ’ ಎಂಬ ಅನ್ವರ್ಥನಾಮ ಇಟ್ಟಿದ್ದು ಸಿದ್ದರಾಮಯ್ಯರಲ್ಲ. ಸ್ವತಃ ಅವರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರೇ ರವಿಯವರನ್ನು ಲೂಟಿ ರವಿ ಎನ್ನುತ್ತಾರೆ. ಇದನ್ನು ಸಿದ್ದರಾಮಯ್ಯ‌ ಹೇಳಿದ್ದೇ ರವಿಯವರಿಗೆ ಚೇಳು ಕಡಿದಂತಾಗಿದೆ. ಹಾಗಾಗಿ ಸಿದ್ದರಾಮಯ್ಯರ ವಿರುದ್ಧ ಕೀಳು‌ ಪದಪ್ರಯೋಗ ಮಾಡಿ ರವಿ ತಮ್ಮ ಹೊಲಸು ನಾಲಗೆ ಪ್ರದರ್ಶಿಸಿದ್ದಾರೆ ಎಂದು ಯುವ ಕಾಂಗ್ರೆಸ್ ದಾವಣಗೆರೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಸಿಟಿ ರವಿಯವರ ಮಾತುಗಳನ್ನು ತೀವ್ರವಾಗಿ ಖಂಡಿಸಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯರ … Read more

ಕೊಡಗು ಘಟನೆಗೆ  ಮಹಬೂಬ್ ಭಾಷಾ ತೀವ್ರ ಖಂಡನೆ

ಸುದ್ದಿ360 ದಾವಣಗೆರೆ, ಆ.22: ಕೊಡಗಿಗೆ ಜನರ ಸಮಸ್ಯೆ ಆಲಿಸಲು ಹೋಗಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಯನ್ನು ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ತೀವ್ರವಾಗಿ ಖಂಡಿಸಿದ್ದಾರೆ. ಸಿದ್ದರಾಮಯ್ಯ ಅವರಿಗೆ ಭದ್ರತೆ ಒದಗಿಸುವುದರಲ್ಲಿ ವಿಫಲವಾಗಿರುವುದನ್ನು ನೋಡಿದರೆ ಈ ಸರ್ಕಾರ ವಿರೋಧ ಪಕ್ಷಗಳ ನಾಯಕರನ್ನು ಅಪಮಾನಿಸುವ ದುರುದ್ದೇಶ ಹೊಂದಿರುವುದು ಸ್ಪಷ್ಟವಾಗಿದೆ. ಈ ದೇಶಕ್ಕೆ ಪ್ರಜಾಪ್ರಭುತ್ವದ ಗಟ್ಟಿ ಅಡಿಪಾಯವಿದೆ. ಅಭಿಪ್ರಾಯ, ವಿಚಾರ ಹಂಚಿಕೊಳ್ಳಲು ಸಂವಿಧಾನದಲ್ಲಿಯೇ ಪ್ರತಿಯೊಬ್ಬರಿಗೂ ಅವಕಾಶವಿದೆ. … Read more

error: Content is protected !!