ಶಾಲೆಗೆ ಹೊರಟ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ಸುದ್ದಿ360, ಶಿವಮೊಗ್ಗ ಜ.11:  ಎಂದಿನಂತೆ ಶಾಲೆಗೆ ತೆರಳಲು ಸಿದ್ಧನಾಗುತ್ತಿದ್ದ10ನೆಯ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದಾಗಿ ಸಾವು ಕಂಡಿದ್ದು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಎಣ್ಣೆಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಜಯಂತ್ ಎಂಬ ಬಾಲಕನೇ ಮೃತ ದುರ್ದೈವಿ. ಇಂದು ಮುಂಜಾನೆ ಶಾಲೆಗೆ ಹೋಗಲು ತಯಾರಾಗುತ್ತಿದ್ದ ವೇಳೆ ಬಾಲಕನಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಆತನನ್ನು ಎಣ್ಣೆಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಆದರೆ ಅಷ್ಟೊತ್ತಿಗಾಗಲೇ ವಿದ್ಯಾರ್ಥಿ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಆಟ – ಪಾಠಗಳಲ್ಲಿ … Read more

error: Content is protected !!