ಎಸ್.ಪಿ.ಇ. ಕಾಯಿದೆ ಜಾರಿಗೆ ಕರ್ನಾಟಕ ರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘ ಒತ್ತಾಯ – ಮನವಿ
ಸುದ್ದಿ360, ದಾವಣಗೆರೆ, ಜು.19: ಔಷಧ ಮಾರಾಟ ಪ್ರತಿನಿಧಿಗಳ ರಕ್ಷಣೆಗೆ ಇರುವ ಎಸ್.ಪಿ.ಇ. ಕಾಯಿದೆಯನ್ನ ಜಾರಿಗೊಳಿಸದೇ ಔಷಧ ತಯಾರಕ ಕಂಪನಿಗಳು ಪ್ರತಿನಿಧಿಗಳನ್ನ ಶೋಷಣೆ ಮಾಡುತ್ತಿವೆ ಎಂದು ಆರೋಪಿಸಿ ನಗರದಲ್ಲಿ ಕರ್ನಾಟಕ ರಾಜ್ಯ ಔಷಧ ಮತ್ತು ಮಾರಾಟ ಪ್ರತಿನಿಧಿಗಳ ಸಂಘ ದಾವಣಗೆರೆ ಜಿಲ್ಲಾ ಘಟಕ ಮಂಗಳವಾರ ಪ್ರತಿಭಟನೆ ನಡೆಸಿತು. ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಔಷಧ ಮಾರಾಟಗಾರರು ನಂತರ ಜಿಲ್ಲಾಧಿಕಾರಿ ಕಚೇರಿ ತಲುಪಿ ಕೇಂದ್ರದ ಕಾರ್ಮಿಕ ಸಚಿವರಿಗೆ ಮನವಿ ಸಲ್ಲಿಸಿದರು. ನಮ್ಮ ಸಮಸ್ಯೆಗಳ ಬಗ್ಗೆ ಹಲವಾರು ಬಾರಿ ಸರ್ಕಾರಗಳ … Read more