ಎಸ್ ಎಸ್. ಮಲ್ಲಿಕಾರ್ಜುನ್ ರವರಿಗೆ,  ಜಿಲ್ಲಾ ಕ ಸಾ ಪ  ವತಿಯಿಂದ ಹೃದಯಸ್ಪರ್ಶಿ ಸನ್ಮಾನ

honour-davangere-kasapa-ssm

ಸುದ್ದಿ360 ದಾವಣಗೆರೆ: ಕರ್ನಾಟಕ ರಾಜ್ಯದ ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಸಚಿವರು  ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಎಸ್. ಎಸ್. ಮಲ್ಲಿಕಾರ್ಜುನ್ ರವರನ್ನು ಇಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಬಿ. ವಾಮದೇವಪ್ಪ ಅವರ ನೇತೃತ್ವದಲ್ಲಿ ಅವರ ನಿವಾಸಕ್ಕೆ ತೆರಳಿ  ಮಾನ್ಯ ಸಚಿವರನ್ನು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪರವಾಗಿ ಹಾಗೂ ಎಲ್ಲಾ ಕನ್ನಡದ ಮನಸುಗಳ ಪರವಾಗಿ ಅಭಿನಂದಿಸಿ ಹೃದಯಸ್ಪರ್ಶಿ ಸನ್ಮಾನವನ್ನು ಮಾಡಲಾಯಿತು. ಇದೇ ಸಂದರ್ಭದಲ್ಲಿ ಜಿಲ್ಲಾ ಕ ಸಾ ಪ … Read more

ರೈತರುಆತಂಕಕ್ಕೆ ಒಳಗಾಗದೇ ಬಿತ್ತನೆ ಕಾರ್ಯಕ್ಕೆ ಮುಂದಾಗಲು ಸಚಿವ ಎಸ್‍ಎಸ್‍ಎಂ ಕರೆ

ಸುದ್ದಿ360, ದಾವಣಗೆರೆ: ಮೇ ಕೊನೆ ವಾರದಲ್ಲಿ ಮುಂಗಾರು ಆರಂಭವಾಗಬೇಕಿದ್ದರೂ ಸಹ ಪ್ರಕೃತಿಯ ವೈಫರೀತ್ಯದಿಂದಾಗಿ ಮುಂಗಾರು ಜೂನ್‌ಕೊನೆಯ ವಾರದಲ್ಲಿಆರಂಭವಾಗಿದ್ದು, ಉತ್ತಮ ಮಳೆ ಬರುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದರಿಂದ ರೈತರು ಬಿತ್ತನೆ ಕಾರ್ಯವನ್ನು ಮುಂಬರುವ ದಿನಗಳಲ್ಲಿ ಚುರುಕುಗೊಳಿಸಬಹುದು ಎಂದು ತೋಟಗಾರಿಕೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್‌ ತಿಳಿಸಿದ್ದಾರೆ. ಕೃಷಿ ಇಲಾಖೆ ಅಭಿಪ್ರಾಯದಂತೆ ಜುಲೈವರೆಗೂ ಬಿತ್ತನೆ ಕಾರ್ಯ ಆರಂಭಿಸಬಹುದಾಗಿದ್ದು, ರೈತರಿಗೆ ತೊಂದರೆ ಆಗದಂತೆ ಅಗತ್ಯ ಇರುವಷ್ಟು ಬಿತ್ತನೆ ಬೀಜ ಮತ್ತುರಸಗೊಬ್ಬರ ದಾಸ್ತಾನು ಇದೆ. ರೈತರ ಬೇಡಿಕೆಗೆ … Read more

ಅವರ ಬಿಟ್ಟು ಅವರ ಬಿಟ್ಟು ಇವರ್ಯಾರು ?

ಸುದ್ದಿ360: ರಾಜಕಾರಣಿಗಳು ತಮ್ಮ ತಮ್ಮ ಸ್ತರದಲ್ಲಿ ನಡೆಯುವ ವಿದ್ಯಮಾನಗಳಿಗಿಂತಲೂ ವಿರೋಧಿ ಪಾಳಯದಲ್ಲಿನ ಆಗುಹೋಗುಗಳಲ್ಲಿ ಅತೀವ ಆಸಕ್ತಿ ವಹಿಸಿರುತ್ತಾರೆ. ಅಲ್ಲದೆ ಅದರಿಂದ ರಾಜಕೀಯವಾಗಿ ಆಗುವ ಲಾಭದ ಲೆಕ್ಕಾಚಾರದಲ್ಲಿ ಸದಾ ಇರುತ್ತಾರೆ ಎಂದರೆ ತಪ್ಪಾಗಲಾರದು.  ಇದು ಚುನಾವಣೆಗಳು ಸಮೀಪಿಸುತ್ತಿದ್ದಂತೆ ಮತ್ತಷ್ಟು ಬಿರುಸುಗೊಳ್ಳುತ್ತದೆ. ಹಾಗೆಯೇ ಕೆಸರೆರೆಚಾಟವೂ ಶುರುವಾಗುತ್ತೆ ನೋಡಿ… ಮತದಾರ ಮಾತ್ರ ಹೈರಾಣಾಗಿ ಹೋಗುತ್ತಾನೆ. ನಾವು ಮತ ಚಲಾಯಿಸಿದ್ದು ಈ ವ್ಯಕ್ತಿಗಾ. . .!? ಎಂಬ ಆಶ್ಚರ್ಯದಾಯಕ ಪ್ರಶ್ನೆಗಳು ಉದ್ಭವಿಸೋದ್ರಲ್ಲಿ ಸಂಶಯವಿಲ್ಲ. ಬಲ್ಲವನೇ ಬಲ್ಲ ಬೆಲ್ಲದಾ ಸವಿಯ… ಎಂಬಂತೆ ರಾಜಕಾರಣಿಗಳಿಗಷ್ಟೇ ಗೊತ್ತು … Read more

‘ಅಮಿತ್ ಶಾ ಹತ್ರ ಏನು ಮಂತ್ರದಂಡ ಇಲ್ಲ – ನರೇಂದ್ರ ಮೋದಿ ಬಂದ್ರು ಇಲ್ಲಿ ಗೆಲ್ಲಲ್ಲ’

ಸುದ್ದಿ360 ದಾವಣಗೆರೆ, ಡಿ.30: ಅಮಿತ್ ಶಾ ರಾಜ್ಯಭೇಟಿ ಕುರಿತಂತೆ, ಅಮಿತ್ ಶಾ ಹತ್ರ ಏನು ಮಂತ್ರದಂಡ ಇದೆಯಾ, ಅವರು ಎಷ್ಟು ಬಾರಿ ಬಂದ್ರು ಅಷ್ಟೇ, ಅವರ ಜಾದೂ ಇಲ್ಲೆನು ನಡೆಯಲ್ಲ. ನರೇಂದ್ರ ಮೋದಿಯವರೇ ಬಂದ್ರೂ ಬಿಜೆಪಿ ಗೆಲ್ಲಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಮಧ್ಯಮದವರಿಗೆ ಪ್ರತಿಕ್ರಿಯಿಸಿದರು. ಅವರು ದಾವಣಗೆರೆಯಲ್ಲಿ ನಡೆಯುತ್ತಿರುವ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂದರ್ಭದಲ್ಲಿ ನಗರದ ಬಾಪೂಜಿ ಕಾಲೇಜು ಗ್ರೌಂಡ್‍ನಲ್ಲಿ ಸಿದ್ಧರಾಮಯ್ಯನವರು ಹೆಲೆಕಾಪ್ಟರ್‍ನಿಂದ ಇಳಿಯುತ್ತಿದ್ದ ಹಾಗೆ ಚಾಮುಂಡೇಶ್ವರಿ ತಾಯಿ … Read more

ವನ್ಯಜೀವಿ ಪತ್ತೆ ಪ್ರಕರಣ: ಎಸ್ ಎಸ್ ಮಲ್ಲಿಕಾರ್ಜುನ್ ಬಂಧನಕ್ಕೆ ಆಗ್ರಹ

ಉಪ್ಪು ತಿಂದವರು ನೀರು ಕುಡಿಯಲೇಬೇಕು- ಜಿ.ಎಂ. ಸಿದ್ದೇಶ್ವರ್ ಸುದ್ದಿ360 ದಾವಣಗೆರೆ ಡಿ.25:  ನಗರದ ಕಲ್ಲೇಶ್ವರ ರೈಸ್ ಮಿಲ್ ನಲ್ಲಿ ವನ್ಯಜೀವಿಗಳ ಪತ್ತೆಯಾಗಿದ್ದು, ಇದು ಮಾಜಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ರ ಒಡೆತನದ ಮಿಲ್ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವಾಗಿದೆ. ಹೀಗಿದ್ದರೂ ಆರೋಪಿಗಳನ್ನು ಬಂಧಿಸುವಲ್ಲಿ ಅಧಿಕಾರಿಗಳು ಹಿಂದೆಬಿದ್ದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿಎಫ್ಓ ಯಾರದೋ ಒತ್ತಡಕ್ಕೆ ಮಣಿದಂತೆ ಕಾಣುತ್ತಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಅನುಮಾನ ವ್ಯಕ್ತಪಡಿಸಿದರು. ಅವರು ಇಂದು ಜಿಎಂಐಟಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಕರಣದಲ್ಲಿ … Read more

ಸಿದ್ಧರಾಮೋತ್ಸವ ಬಳಿಕ ಬೆಣ್ಣೆನಗರಿಯಲ್ಲಿ ಮತ್ತೊಂದು ಬೃಹತ್ ಸಮಾವೇಶ

ಎಸ್‌ಎಸ್‌ಎಂ 55  ಅದ್ದೂರಿ ಕಾರ್ಯಕ್ರಮಕ್ಕೆ ಭೂಮಿಪೂಜೆ ಸುದ್ದಿ360 ದಾವಣಗೆರೆ, ಸೆ.09: ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನರವರ 55ನೇ ಜನ್ಮದಿನಾಚರಣೆ ಇದೇ ತಿಂಗಳ 22 ರಂದು ನಡೆಯಲಿದ್ದು, ಜನ್ಮದಿನಾಚರಣೆ ಅಂಗವಾಗಿ ನಗರದ ಎಸ್‌ಎಸ್ ಲೇಔಟ್ ಬಿ ಬ್ಲಾಕ್‌ನಲ್ಲಿರುವ ಬಾಪೂಜಿ ಇನ್ಸ್ಟಿಟ್ಯೂಟ್ ಆಫ್ ಹೈಟೆಕ್ ಎಜುಕೇಷನ್ (ಎಂಬಿಎ ಕಾಲೇಜು) ಮೈದಾನದಲ್ಲಿ ಶುಕ್ರವಾರ ಎಸ್‌ಎಸ್‌ಎಂ 55ನೇ ಜನ್ಮದಿನ ಸಮಾರಂಭದ ವೇದಿಕೆ ನಿರ್ಮಾಣಕ್ಕೆ ಇಂದು ಭೂಮಿ ಪೂಜೆ ನೆರವೇರಿಸಲಾಯಿತು. ಎಸ್‌ಎಸ್‌ಎಂ ಅಭಿಮಾನಿ ಬಳಗ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ಬೆಣ್ಣೆನಗರಿಯಲ್ಲಿ ಯಶಸ್ವಿಯಾಗಿ ಮತ್ತು ಅದ್ದೂರಿಯಾಗಿ … Read more

ಕಾಂಗ್ರೆಸ್ ಪಕ್ಷದಲ್ಲಿ ಪಕ್ಷ ಪೂಜೆಗೆ ಆದ್ಯತೆ, ವ್ಯಕ್ತಿ ಪೂಜೆಗಲ್ಲ: ಎಸ್ ಎಸ್ ಮಲ್ಲಿಕಾರ್ಜುನ್

ಸಿದ್ದರಾಮಯ್ಯ ಅಮೃತಮಹೋತ್ಸವ ಅಭಿಮಾನಿಗಳಿಂದಲೇ ರೂಪುಗೊಂಡಿರುವ ಕಾರ್ಯಕ್ರಮ ಸುದ್ದಿ360, ದಾವಣಗೆರೆ, ಜು.18: ಸಿದ್ದರಾಮಯ್ಯ ಅವರು ನಮ್ಮ ಬಲವಂತಕ್ಕೆ ಮಣಿದು ಅಮೃತ ಮಹೋತ್ಸವಕ್ಕೆ ಒಪ್ಪಿ  ಸಮ್ಮತಿ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಪಕ್ಷ ಪೂಜೆಗೆ ಆದ್ಯತೆ ಇದೆಯೇ ಹೊರತು ವ್ಯಕ್ತಿ ಪೂಜೆಗಲ್ಲ. ಹೀಗಾಗಿ ಸಿದ್ಧರಾಮಯ್ಯ ಅವರ ಅಮೃತ ಮಹೋತ್ಸವ ವ್ಯಕ್ತಿ ಪೂಜೆಯಲ್ಲ ಎಂದು  ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೇಳಿದರು. ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮಯ್ಯ ಅಮೃತ ಮಹೋತ್ಸವ ಸಮಾರಂಭದ ವೇದಿಕೆ ನಿರ್ಮಾಣ ಕಾರ್ಯಕ್ರಮಕ್ಕೆ ಸೋಮವಾರ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರ ಜತೆ … Read more

ಬಿಜೆಪಿಯವರಿಗೆ ಅಭಿವೃದ್ಧಿಯ ಇಚ್ಛಾಶಕ್ತಿ ಇಲ್ಲ – ಎಸ್ ಎಸ್ ಮಲ್ಲಿಕಾರ್ಜುನ್ ಆರೋಪ

ಸುದ್ದಿ360, ದಾವಣಗೆರೆ, ಜು.18:  ಯಾವುದೇ ಕಾಮಗಾರಿಗಳು ಪರಿಪೂರ್ಣಗೊಳ್ಳಲು ಕ್ರಮಬದ್ಧವಾದ ಯೋಜನೆ ಇರಬೇಕು. ಆದರೆ ಬಿಜೆಪಿ ಜನಪ್ರತಿನಿಗಳಿಗೆ ಅಭಿವೃದ್ಧಿ ಕಾರ್ಯಗಳ ಬಗ್ಗೆ ಇಚ್ಛಾಶಕ್ತಿ ಇಲ್ಲ ಎಂದು ನಗರದಲ್ಲಿನ ಕಾಮಗಾರಿಗಳ ಬಗ್ಗೆ ಎಸ್ ಎಸ್ ಮಲ್ಲಿಕಾರ್ಜುನ್  ಆರೋಪಿಸಿದರು. ನಗರದ ಹೊರವಲಯದ ಪೂನ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿನ ಜಮೀನಿನಲ್ಲಿ ಸೋಮವಾರ ಸಿದ್ದರಾಮಯ್ಯ ಅಮೃತ ಮಹೋತ್ಸವ ಸಮಾರಂಭದ ವೇದಿಕೆ ನಿರ್ಮಾಣ ಕಾರ್ಯಕ್ರಮಕ್ಕೆ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು. ಕುಂದವಾಡ ಕೆರೆ ಏರಿ ಅಭಿವೃದ್ಧಿ ಕುಂಟುತ್ತಾ ಸಾಗಿದ್ದು, ನಗರದೆಲ್ಲೆಡೆ ಕಳಪೆ ಕಾಮಗಾರಿಗಳು … Read more

error: Content is protected !!