ಪಬ್ ನಲ್ಲಿ ವಿದ್ಯಾರ್ಥಿಗಳ ಪಾರ್ಟಿ: ಬಜರಂಗದಳ ಕಾರ್ಯಕರ್ತರಿಂದ ತಡೆ –ತಹಬದಿಗೆ ತಂದ ಪೊಲೀಸರು
ಸುದ್ದಿ360 ಮಂಗಳೂರು, ಜು.25: ನಗರದ ಬಲ್ಮಠದ ಪಬ್ ವೊಂದರಲ್ಲಿ ಕಾಲೇಜು ವಿದ್ಯಾರ್ಥಿಗಳು ಪಾನಮತ್ತರಾಗಿ ಅಸಭ್ಯವಾಗಿ ವರ್ತಿಸುತ್ತಿದ್ದರೆಂಬ ಕಾರಣದಿಂದ ಬಜರಂಗದಳ ಕಾರ್ಯಕರ್ತರು ಧಾಳಿ ನಡೆಸಿ ತಡೆಯೊಡ್ಡಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಎಲ್ಲರನ್ನೂ ಚದುರಿಸಿದ್ದಾರೆ. ನಗರದ ಬಲ್ಮಠದ ರಿ-ಸೈಕಲ್ ದಿ ಲಾಂಜ್ ಪಬ್ ನಲ್ಲಿ ನಗರದ ಖಾಸಗಿ ಕಾಲೇಜು ವಿದ್ಯಾರ್ಥಿಗಳು ಬೀಳ್ಕೊಡುಗೆ ಕಾರ್ಯಕ್ರಮದ ಅಂಗವಾಗಿ ಪಾರ್ಟಿ ಆಯೋಜಿಸಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪಾನಮತ್ತರಾಗಿ ಅಸಭ್ಯವಾಗಿ ವರ್ತಿಸುತ್ತಿದ್ದಾರೆಂಬ ಆರೋಪ ಹಿನ್ನಲೆಯಲ್ಲಿ ಬಜರಂಗದಳ ಕಾರ್ಯಕರ್ತರು … Read more