ಬಿಸಿಯೂಟ ತಯಾರಕರ ವೇತನ ಹೆಚ್ಚಳಕ್ಕೆ ಎಐಟಿಯುಸಿ ಮನವಿ

ಸುದ್ದಿ360 ದಾವಣಗೆರೆ: ಮಧ್ಯಾಹ್ನ ಉಪಹಾರ ಯೋಜನೆ ಅಡಿಯಲ್ಲಿ ರಾಜ್ಯಾದ್ಯಂತ ಇರುವ ಶಾಲೆಗಳಲ್ಲಿಅಡುಗೆ ಕೆಲಸ ನಿರ್ವಹಿಸುತ್ತಿರುವ ಬಿಸಿಯೂಟ ತಯಾರಕರ ವೇತನವನ್ನು ಆರು ಸಾವಿರ ರೂ. ಗಳಿಗೆ ಹೆಚ್ಚಿಸುವಂತೆ ಬಿಸಿಯೂಟ ತಯಾರಕರ ಫೆಡರೇಷನ್ (ಎಐಟಿಯುಸಿ ಸಂಯೋಜಿತ) ರಾಜ್ಯ ಸಮಿತಿ ಕರೆಯ ಮೇರೆಗೆ ದಾವಣಗೆರೆ ಜಿಲ್ಲಾ ಸಮಿತಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿತು. 2023 ಜುಲೈ ತಿಂಗಳನಲ್ಲಿ ಮಂಡಿಸುವ ಬಜೆಟ್‌ನಲ್ಲಿ ರಾಜ್ಯ ಸರ್ಕಾರವು ಬಿಸಿಯೂಟ ತಯಾರಕರಿಗೆ ಅವರ ವೇತನವನ್ನು ಆರು ಸಾವಿರ … Read more

ದಶಪಥ ಹೆದ್ದಾರಿಯಲ್ಲಿ ದುಬಾರಿ ಸಂಚಾರ – ಪ್ರಯಾಣಿಕರ ಜೇಬಿಗೆ ಕತ್ತರಿ – ಯಾವ ವಾಹನಕ್ಕೆ ಎಷ್ಟು?

ಸುದ್ದಿ360 ರಾಮನಗರ: ದಶಪಥ ಹೆದ್ದಾರಿಯಲ್ಲಿ ಸಂಚಾರ ಮತ್ತಷ್ಟು ದುಬಾರಿಯಾಗಿದ್ದು, ಎಕ್ಸ್‌ಪ್ರೆಸ್‌ ಟೋಲ್ ದರ ಸದ್ದಿಲ್ಲದೇ  ಹೆಚ್ಚಾಗಿದೆ. ಈ ಹಿಂದೆ ಏ.1ರಂದೇ ದರ ಏರಿಕೆ ಮಾಡಿದ್ದ ಹೆದ್ದಾರಿ ಪ್ರಾಧಿಕಾರ ಸಾರ್ವಜನಿಕ ಆಕ್ರೋಶದ ಹಿನ್ನಲೆಯಲ್ಲಿ ದರ ಹೆಚ್ಚಳ ವಾಪಸ್ಸ್ ಪಡೆದಿತ್ತು. ಇದೀಗ ಮತ್ತೆ ಟೋಲ್ ದರ ಏರಿಕೆ ಮಾಡಿದೆ. ಶೇ.22ರಷ್ಟು ಟೋಲ್ ದರ ಏರಿಕೆ ಮಾಡಿರೋ ಹೆದ್ದಾರಿ ಪ್ರಾಧಿಕಾರ ಜೂನ್ 1ರಿಂದಲೇ ದುಬಾರಿ ಶುಲ್ಕ ವಸೂಲಿ ಮಾಡುತ್ತಿದೆ. ಪ್ರಯಾಣಿಕರ ಜೇಬಿಗೆ ಕತ್ತರಿ ಫಾಸ್ಟ್ ಟ್ಯಾಗ್ ಇರೋ ಕಾರಣ ವಾಹನ ಸವಾರರ … Read more

ಕಳಪೆ ಬೀಜ ವಿತರಣೆ-ಅಧಿಕಾರಿಗಳೇ ಹೊಣೆ: ಸಚಿವ ಚಲುವರಾಯಸ್ವಾಮಿ

ಮುಂಗಾರು ವಿಳಂಬ: ಸಮರ್ಪಕ ಬೀಜ ದಾಸ್ತಾನು, ವಿತರಣೆಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಬೆಳಗಾವಿ: ರಾಜ್ಯದಲ್ಲಿ ಮುಂಗಾರು ವಿಳಂಬವಾಗಿರುವುದರಿಂದ ಬಿತ್ತನೆ ಕೂಡ ತಡವಾಗುತ್ತಿದೆ. ಆದ್ದರಿಂದ ಮಳೆಯಾದ ಕೂಡಲೇ ಎಲ್ಲೆಡೆ ಏಕಕಾಲಕ್ಕೆ ಬಿತ್ತನೆ ಆರಂಭಗೊಳ್ಳಲಿದೆ. ಈ ಸಂದರ್ಭದಲ್ಲಿ ಬೀಜ-ಗೊಬ್ಬರ ಕೊರತೆಯಾಗದಂತೆ ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಕಳಪೆ ಬೀಜ ವಿತರಣೆ ಕಂಡುಬಂದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಕೃಷಿ ಇಲಾಖೆಯ ಸಚಿವರಾದ ಎನ್.ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದರು. ಮುಂಗಾರು ಸಿದ್ಧತೆ ಪರಿಶೀಲನೆಗೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ  ನಡೆದ … Read more

ಮಹಿಳೆಯರಿಗೆ ಉಚಿತ ಪ್ರಯಾಣ ಅಂತಾರೆ. . . ನಮ್ಮ ಗೋಳು ಕೇಳೋರ್ಯಾರು?

ಸುದ್ದಿ360 ಬಾಗಲಕೋಟೆ : ಮಹಿಳೆಯರಿಗೆ ಉಚಿತ ಪ್ರಯಾಣ ಅಂತಾರೆ ಹಾಗಾದ್ರೆ ನಮ್ಮಂತವರ ಗೋಳು ಕೇಳೋರ್ಯಾರು ? ಈ ಕೂಗು ಕೇಳಿ ಬಂದದ್ದು  ಬಾಗಲಕೋಟೆ ಜಿಲ್ಲೆಯ ಇಳಕಲ್ ಪಟ್ಟಣದಲ್ಲಿ ಸಂಚರಿಸುತ್ತಿದ್ದ ಕೆ.ಎಸ್.ಆರ್‍.ಟಿ.ಸಿ ಬಸ್ನಲ್ಲಿ. ನಮ್ಮ ಲಗೇಜ್ ಹಾಕಿದ್ರೆ ನಡುದಾರಿಯಲ್ಲಿ ತೆಗೆದು ಹಾಕ್ತಿವಿ ಅಂತ ಕಂಡಕ್ಟರ್ ಹೇಳ್ತಾರೆ ಎಂಬುದು ಮಹಿಳೆಯ ಆರೋಪ. ಇಳಕಲ್ ದಿಂದ ಮುದಗಲ್ ಕಡೆಗೆ ತೆರಳುತ್ತಿದ್ದ ಬಸ್ನಲ್ಲಿ ಲಗೇಜ್ ವಿಚಾರದಲ್ಲಿ ಸಾರಿಗೆ ಸಿಬ್ಬಂದಿ, ಪ್ರಯಾಣಿಕರ ಮಧ್ಯೆ ವಾಗ್ವಾದ ನಡೆದು ತೀವ್ರ ಮಾತಿನ ಚಕಮಕಿಗೆ ಕಾರಣವಾಗಿದೆ. ವ್ಯಾಪಾರಕ್ಕೆಂದು ಪ್ಲಾಸ್ಟಿಕ್ … Read more

ಎಸ್‌ಎಸ್ 93ನೇ ಜನ್ಮದಿನ: ಅಭಿಮಾನಿಗಳಿಂದ ವಿವಿಧ ಸೇವಾ ಕಾರ್ಯಕ್ರಮ

ಸುದ್ದಿ360 ದಾವಣಗೆರೆ: ದಕ್ಷಿಣ ವಿಧಾನಸಭೆ ಕ್ಷೇತ್ರದ ಹಿರಿಯ ಶಾಸಕರು, ಅಖಿಲ ಭಾರತ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷರೂ ಆದ  ಶಾಮನೂರು ಶಿವಶಂಕರಪ್ಪನವರು ಇದೇ ಜೂ.16ರಂದು 93 ವಸಂತಗಳನ್ನು ಪೂರೈಸಲಿದ್ದಾರೆ. ಈ ಪ್ರಯುಕ್ತ ಅವರ ಅಭಿಮಾನಿ ಬಳಗ ನಗರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಎಸ್‌ಎಸ್ ಜನ್ಮದಿನದ ಪ್ರಯುಕ್ತ ವಿನ್ಯಾಸಗೊಳಿಸಿರುವ ಲೋಗೋ ಬಿಡುಗಡೆ ಮಾಡಿ ಮಾತನಾಡಿದ ಅವರು, ಎಸ್‌ಎಸ್ ಜನ್ಮದಿನದ ಅಂಗವಾಗಿ ಅಂದು ನಗರದ ಎಲ್ಲ ಅನಾಥಾಶ್ರಮ, ವೃದ್ಧಾಶ್ರಮಗಳ … Read more

ದಾವಣಗೆರೆ: ಜೂ.4ರಂದು ಮಾಧ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ-ಬಿರುದು-ಸಮ್ಮಾನ

ದಾವಣಗೆರೆ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಜೂನ್. 4 ರಂದು ಬೆಳಿಗ್ಗೆ 10. 45ಕ್ಕೆ ನಗರದ ದೇವರಾಜು ಅರಸು ಬಡಾವಣೆಯಲ್ಲಿನ ಶಿವಧ್ಯಾನ ಮಂದಿರದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ 2022 ನೇ ಸಾಲಿನ ಮಾಧ್ಯಮ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನ, ವಿವಿಧ ಪ್ರಶಸ್ತಿಗಳ ಪುರಸ್ಕೃತ ಪತ್ರಕರ್ತರಿಗೆ ಗೌರವಾರ್ಪಣೆ, ಮಹಿಳಾ ಪತ್ರಕರ್ತರಿಗೆ ಸನ್ಮಾನ ಹಾಗೂ ಪತ್ರಕರ್ತರಿಗೆ ಧನಸಹಾಯ ವಿತರಣಾ ಕಾರ್ಯಕ್ರಮ ಜರುಗಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಇ.ಎಂ ಮಂಜುನಾಥ್ ತಿಳಿಸಿದರು. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ … Read more

ಮಾಜಿಯಿಂದ ಹಾಲಿ ಮುಖ್ಯಮಂತ್ರಿಗಳಿಗೆ ಹೀಗೊಂದು ಪತ್ರ

ಸನ್ಮಾನ್ಯ ಮುಖ್ಯಮಂತ್ರಿಗಳೆ,  ತಾವು ಮುಖ್ಯಮಂತ್ರಿ ಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು ತಮಗೆ ನನ್ನ ಅಭಿನಂದನೆಗಳು. ಕಳೆದ ಎರಡು ವಾರದಿಂದ ತಾವು ತಮ್ಮ ಪಕ್ಷ ನೀಡಿರುವ ಐದು ಗ್ಯಾರೆಂಟಿಗಳ ಅನುಷ್ಠಾನಕ್ಕಾಗಿ ಹಲವಾರು ಸಭೆಗಳನ್ನು ನಡೆಸಿದ್ದೀರಿ. ಅದರಲ್ಲಿಯೂ ಆರ್ಥಿಕ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿರುವುದು ಎಲ್ಲರಿಗೂ ತಿಳಿದಿದೆ‌. ತಾವೇ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿರುವಂತೆ ಎಲ್ಲ ಗ್ಯಾರೆಂಟಿ ಯೋಜನೆಗಳನ್ನು ಅನುಷ್ಠಾನ ಮಾಡಲು ಸುಮಾರು ಐವತ್ತು ಸಾವಿರ ಕೋಟಿ ರೂಪಾಯಿ ಬೇಕೆಂದು ರಾಜ್ಯದ ಜನತೆಗೆ ತಿಳಿಸಿದ್ದೀರಿ. ಈ ಯೋಜನೆಗಳ ಅನುಷ್ಠಾನದ ಸಂದರ್ಭದಲ್ಲಿ … Read more

ದಾವಣಗೆರೆ ದಕ್ಷಿಣ ಪಕ್ಷೇತರ ಅಭ್ಯರ್ಥಿ ಎಂ. ಬಿ. ಪ್ರಕಾಶ್‍ ನಾಮಪತ್ರ ವಾಪಸ್ – ಕಾಂಗ್ರೆಸ್‍ಗೆ ಬೆಂಬಲ

ಸುದ್ದಿ360 ದಾವಣಗೆರೆ, ಏ.25: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿ ಸಲ್ಲಿಸಿದ್ದ ನಾಮಪತ್ರವನ್ನು ಹಿಂಪಡೆದಿರುವುದಾಗಿ ಎಂ.ಬಿ. ಪ್ರಕಾಶ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನಾಗಿ ಕೆಲಸ ನಿರ್ವಹಿಸಿರುವ ನಾನು  ಹಲವು ವರ್ಷಗಳಿಂದ ಬಿಜೆಪಿಯಲ್ಲಿ ಕೆಲಸ ಮಾಡಿದ್ದೇನೆ. ದಾವಣಗೆರೆಯನ್ನು ಅಭಿವೃದ್ಧಿ ಪಥದತ್ತ ಮುನ್ನಡೆಸುವ ಪಣ ತೊಟ್ಟಿರುವ ಶಾಮನೂರು ಶಿವಶಂಕರಪ್ಪ ಮತ್ತು ಎಸ್ ಎಸ್. ಮಲ್ಲಿಕಾರ್ಜುನ್ ಅವರನ್ನು ಬೆಂಬಲಿಸಿ ನನ್ನ ನಾಮಪತ್ರ ವಾಪಸ್ ಪಡೆದು ಚುನಾವಣೆಯಲ್ಲಿ ಕಾಂಗ್ರೆಸ್ನ ಈ ಇಬ್ಬರು ಅಭ್ಯರ್ಥಿಗಳ … Read more

ಕರ್ನಾಟಕ ನಂ.1 ರಾಜ್ಯವಾಗಿಸುವ ಗುರಿ: ಸಚಿವ ಸರ್ಬಾನಂದ್ ಸೋನೋವಾಲ

ಸುದ್ದಿ360 ದಾವಣಗೆರೆ ಏ. 25:  ಕರ್ನಾಟಕದ ಸರ್ವತೋಮುಖ ಅಭಿವೃದ್ಧಿ ಬಿಜೆಪಿಯ ಉದ್ದೇಶ. ರಾಜ್ಯದಲ್ಲಿ ಮತ್ತೊಮ್ಮೆ ಪಕ್ಷವನ್ನು ಅಧಿಕಾರಕ್ಕೆ ತಂದು ಕರ್ನಾಟಕವನ್ನು ದೇಶದ ನಂ.1 ರಾಜ್ಯವನ್ನಾಗಿಸುವ ಗುರಿ ನಮ್ಮದಾಗಿದೆ ಎಂದು ಕೇಂದ್ರ ಬಂದರು ಮತ್ತು ಆಯುಷ್ ಸಚಿವ ಸರ್ಬಾನಂದ್ ಸೋನೋವಾಲ ಹೇಳಿದರು. ನಗರದ ಜಿಎಂಐಟಿ ಅತಿಥಿಗೃಹದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 9 ವರ್ಷಗಳ ಹಿಂದೆ ಭಾರತ ವಿಶ್ವದ ಅತಿ ದೊಡ್ಡ ಆರ್ಥಿಕತೆ ದೇಶಗಳ ಪೈಕಿ 11ನೇ ಸ್ಥಾನದಲ್ಲಿತ್ತು. ಪ್ರಧಾನಿ ಮೋದಿ ಆಡಳಿತದ ಅವಧಿಯಲ್ಲಿ ದೇಶ ಆರ್ಥಿಕವಾಗಿ ಪ್ರಗತಿ … Read more

ದಾವಣಗೆರೆ ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ ಡಾ. ಕೆ ಅರುಣ್ ಅಧಿಕಾರ ಸ್ವೀಕಾರ

ಸುದ್ದಿ360 ದಾವಣಗೆರೆ, ಏ. 24: ದಾವಣಗೆರೆ ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ ಡಾ. ಕೆ ಅರುಣ್ ಐಪಿಎಸ್ ರವರು  ಇಂದು ಅಧಿಕಾರ ವಹಿಸಿಕೊಂಡರು. ನೂತನ ಅಧಿಕಾರಿ ಡಾ. ಅರುಣ್ ಅವರು  ಈ ಮೊದಲು ವಿಜಯನಗರ ಹಾಗೂ ಚಿತ್ರದುರ್ಗ ಜಿಲ್ಲೆಯ ರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದು, ಕಲಬುರಗಿಯ ಪೊಲೀಸ್ ತರಬೇತಿ ಶಾಲೆಯ ಪ್ರಾಚಾರ್ಯರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಈ ಮೊದಲು ಜಿಲ್ಲೆಯ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಸಿ.ಬಿ. ರಿಷ್ಯಂತ್‍ ಅವರು ಚುನಾವಣೆ ಮಾರ್ಗಸೂಚಿಯನ್ವಯ ವರ್ಗಾವಣೆ ಹೊಂದಿದ್ದಾರೆ. ಸಿ. ಬಿ. ರಿಷ್ಯಂತ್‍ ಅವರ … Read more

error: Content is protected !!