ಮಳೆ ಯಾವ ಪಕ್ಷವನ್ನೂ ನೋಡಿ ಬರೋಲ್ಲ – ಪ್ರವಾಹದ ವಿಚಾರದಲ್ಲಿ ರಾಜಕೀಯ ಬೇಡ: ಬಸವರಾಜ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಬೆಂಗಳೂರು, ಸೆ.06: ಮಳೆ ಪ್ರವಾಹದ ವಿಚಾರದಲ್ಲಿ ರಾಜಕೀಯ ಬೇಡ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮಳೆ, ಪ್ರವಾಹದ ವಿಷಯದಲ್ಲಿ ರಾಜಕೀಯವಾಗುತ್ತಿರುವುದು ದುರ್ದೈವದ ಸಂಗತಿ. ಮಳೆ ತಂದಿರುವ ಸಂಕಷ್ಟದ ಸಂದರ್ಭದಲ್ಲಿ ಎಲ್ಲರೂ ಯುದ್ಧೋಪಾದಿಯಲ್ಲಿ  ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಮಳೆ ಯಾವ ಪಕ್ಷವನ್ನೂ ನೋಡಿ ಬರುವುದಿಲ್ಲ. ಇಡೀ ರಾಜ್ಯದಲ್ಲಿ ಎಲ್ಲ ಕೆರೆಗಳೂ ತುಂಬಿದ್ದು, ದಾಖಲೆಯ ಮಳೆಯಾಗಿದೆ. ಚಿಕ್ಕಬಳ್ಳಾಪುರ ಹಾಗೂ ದೊಡ್ಡಬಳ್ಳಾಪುರದಲ್ಲಿ ಹೆಚ್ಚು ಮಳೆಯಾಗಿದೆ. ಬೆಂಗಳೂರಿನಲ್ಲಿ ಕೆರೆಗಳೆಲ್ಲಾ ತುಂಬಿ ಹರಿಯುತ್ತಿದೆ. ಜಲಪ್ರವಾಹದ … Read more

ಬೆಂಗಳೂರಿನ ಮಳೆ ಅವಘಡಕ್ಕೆ ಎಲ್ಲ ಪಕ್ಷದವರೂ ಪಾಲುದಾರರೇ . . . ದಾವಣಗೆರೆಯಲ್ಲಿ ಬಿ.ಸಿ. ಪಾಟೀಲ್ ಹೇಳಿಕೆ

ಸುದ್ದಿ360 ದಾವಣಗೆರೆ, ಸೆ. 06: ಬೆಂಗಳೂರಿನಲ್ಲಿ ಆಗಿರುವ ಮಳೆ ಅವಘಡಕ್ಕೆ ಯಾರನ್ನು ದೂಷಿಸುವುದು ಸರಿಯಲ್ಲ.  ಅವರು ಇವರೆನ್ನದೆ ಎಲ್ಲರೂ ಪ್ರಾಕೃತಿಕ ವಿಕೋಪಕ್ಕೆ ಕಾರಣರಾಗಿದ್ದಾರೆ ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ಹೇಳಿದರು. ದಾವಣಗೆರೆಯಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಂಗಳೂರಿನಲ್ಲಿ ಆಗಿರುವ ಮಳೆ ಅವಘಡಕ್ಕೆ ಯಾವುದೇ ಪಕ್ಷವನ್ನು ದೂಷಿಸುವಂತಹದ್ದಲ್ಲ. ಕೆಲವು ಸಂದರ್ಭಗಳಲ್ಲಿ ಸರಿಯಾದ ರೀತಿಯಲ್ಲಿ ಕಾಲುವೆ ವ್ಯವಸ್ಥೆಯನ್ನು ಮಾಡಿರದೇ ಇರುವುದು. ಟೌನ್ ಪ್ಲಾನಿಂಗ್ ಸಂದರ್ಭದಲ್ಲಿ ಬೇಕಾಬಿಟ್ಟಿ ಒಪ್ಪಿಗೆ ಕೊಟ್ಟಿರುವುದು ಸೇರಿದಂತೆ. ಬೆಂಗಳೂರು ಸಂಪೂರ್ಣ … Read more

12ನೇ ತಾರೀಖಿನೊಳಗೆ ನೆರೆ ಪರಿಹಾರ ಫಲಾನುಭವಿಗಳ ಖಾತೆಗೆ: ಕೃಷಿ ಸಚಿವ ಬಿ ಸಿ ಪಾಟೀಲ್

18 ಕೋಟಿ ವೆಚ್ಚದಲ್ಲಿ ಶೀಥಿಲೀಕರಣ ಘಟಕ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಸುದ್ದಿ360 ದಾವಣಗೆರೆ, ಸೆ. 06: ರೈತರು ತಾವು ಬೆಳೆದಂತಹ ಬೆಳೆಗೆ  ಕಟಾವು ಸಂದರ್ಭದಲ್ಲಿ ಉತ್ತಮ ಬೆಲೆ ದೊರಕದೆ ಕಂಗಾಲಾಗುವುದನ್ನು ತಪ್ಪಿಸಲು ಶಿಥೀಲೀಕರಣ ಘಟಕ ಸಹಕಾರಿಯಾಗಲಿದೆ ಎಂದು  ಕೃಷಿ ಸಚಿವ ಬಿ ಸಿ ಪಾಟೀಲ್ ಹೇಳಿದರು. ನಗರದ ಲೋಕಿಕೆರೆ ರಸ್ತೆಯ ಕೈಗಾರಿಕಾ ಪ್ರದೇಶದಲ್ಲಿ ನಬಾರ್ಡ್ ಆರ್ ಐ ಡಿ ಎಫ್ 27ರಲ್ಲಿ 9 ಕೋಟಿ 50 ಲಕ್ಷ ರೂ. ವೆಚ್ಚದಲ್ಲಿ ಶಿಥಿಲೀಕರಣ ಘಟಕ, 4 ಕೋಟಿ … Read more

ದಾವಣಗೆರೆ: ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಯುಬಿಡಿಟಿ ಕಾಲೇಜಿನ ಎದುರು ಪ್ರತಿಭಟನೆ

ಸುದ್ದಿ360 ದಾವಣಗೆರೆ, ಸೆ.06: ಕಳೆದ 15 ವರ್ಷಗಳಿಂದ ದುಡಿಯುತ್ತಿರುವ ನೌಕರರಿಗೆ ಸರಕಾರದ ಆದೇಶದಂತೆ ಕನಿಷ್ಠ ವೇತನ ಜಾರಿಗೊಳಿಸಿಲ್ಲ. ಹಲವು ವರ್ಷಗಳಿಂದ ಮಾಸಿಕ ವೇತನವನ್ನು ಸರಿಯಾದ ಸಮಯಕ್ಕೆ ನೀಡುತ್ತಿಲ್ಲ ಎಂದು ಆರೋಪಿಸಿ, ನಗರದ ಡೆಂಟಲ್ ಕಾಲೇಜು ರಸ್ತೆಯಲ್ಲಿರುವ ಯುಬಿಡಿಟಿ ಕಾಲೇಜಿನ ಎದುರು ಮಂಗಳವಾರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕಾಲೇಜಿನ ಸಿ ಮತ್ತು ಡಿ ದರ್ಜೆ ಹೊರಗುತ್ತಿಗೆ ನೌಕರರು ಎಐಯುಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಎಐಯುಟಿಯುಸಿ ಜಿಲ್ಲಾಧ್ಯಕ್ಷ ಮಂಜುನಾಥ್ ಕೈದಾಳೆ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ … Read more

ಪ್ರತಿ ತಾಲೂಕಲ್ಲಿ ಪತ್ರಕರ್ತ ಭವನ ನಿರ್ಮಾಣ ಗುರಿ – ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿಕೆ

ಸುದ್ದಿ360 ದಾವಣಗೆರೆ: ರಾಜ್ಯದ ಪ್ರತಿ ತಾಲೂಕು ಕೇಂದ್ರಗಳಲ್ಲಿ ಪತ್ರಕರ್ತರ ಭವನ ನಿರ್ಮಾಣ ಮಾಡಬೇಕೆಂಬ ಮಹತ್ವಾಕಾಂಕ್ಷೆಯ ಗುರಿ ಸಂಘಕ್ಕಿದೆ. ಸದ್ಯ 120 ಕಡೆಗಳಲ್ಲಿ ಭವನಗಳಿದ್ದು, ಉಳಿದೆಡೆಯೂ ಭವನ ಸ್ಥಾಪಿಸುವ ಉದ್ದೇಶವಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದರು. ನಗರದ ವರದಿಗಾರರ ಕೂಟದಲ್ಲಿ ಭಾನುವಾರ, ಜಿಲ್ಲಾ ವರದಿಗಾರರ ಕೂಟ ಹಾಗೂ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಸಂಘಟನೆ ಬಲವಾಗಿದ್ದರೆ ಏನನ್ನಾದರೂ ಸಾಧಿಸಬಹುದು ಎಂಬುದಕ್ಕೆ ಉದಾಹರಣೆಯಾಗಿ ಕಾರ್ಯನಿರತ ಪತ್ರಕರ್ತರ … Read more

ಶಿಕ್ಷಕರ ದಿನಾಚರಣೆಯಲ್ಲಿ – ನಾಡಗೀತೆಗೆ ಅಪಮಾನ?

ದೇಶದ ಪ್ರಗತಿಗೆ ಶಿಕ್ಷಕರ ಪಾತ್ರ ಮಹತ್ವದ್ದು: ಜಿ.ಎಂ. ಸಿದ್ದೇಶ್ವರ ಸುದ್ದಿ360 ದಾವಣಗೆರೆ, ಸೆ.05: ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಮಹತ್ವದ ಕಾರ್ಯವನ್ನು ಶಿಕ್ಷಕರು ಮಾಡುತ್ತಿದ್ದಾರೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು. ನಗರದ ಹದಡಿ ರಸ್ತೆಯ ಶಾಮನೂರು ಪಾರ್ವತಮ್ಮ ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ದೇಶದ ಆರ್ಥಿಕ ಪ್ರಗತಿಗೆ ಶಿಕ್ಷಣ ಕ್ಷೇತ್ರದ ಪ್ರಗತಿ ಕೂಡ ಅತಿ ಮುಖ್ಯ … Read more

ಬಡಾವಣೆಗಳು ಜಲಾವೃತ: ಕಾಂಗ್ರೆಸ್ ಸರ್ಕಾರದ ದುರಾಡಳಿತದ ಫಲ – ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಸೆ.06: ಹಿಂದೆ ಇದ್ದ ಕಾಂಗ್ರೆಸ್ ಸರ್ಕಾರದ ಯೋಜನಾ ರಹಿತ ಹಾಗೂ ದುರಾಡಳಿತದ ಫಲವಾಗಿ ಈ ಬಡಾವಣೆಗಳು ಜಲಾವೃತಗೊಳ್ಳುವ ಸ್ಥಿತಿ  ಎದುರಿಸಬೇಕಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ  ಮಾತನಾಡಿ, ಎಗ್ಗಿಲ್ಲದೆ ಕೆರೆಗಳಲ್ಲಿ, ಕೆರೆ ಬಂಡ್ ಹಾಗೂ ಬಫರ್ ವಲಯಗಳಲ್ಲಿ ಅನುಮತಿಗಳನ್ನು ನೀಡಿದ್ದಾರೆ. ಈ ಪರಿಸ್ಥಿತಿಗೆ ಕಾಂಗ್ರೆಸ್ ಕಾರಣ. ಕೆರೆಗಳ ನಿರ್ವಹಣೆಯ ಬಗ್ಗೆ ಅವರು ಯೋಚಿಸಿಯೂ ಇಲ್ಲ. ನಾನು ಇದನ್ನು ಸವಾಲಾಗಿ ಸ್ವೀಕರಿಸಿದ್ದು 1500 ಕೋಟಿ … Read more

ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರ ನೇಮಕಾತಿಗೆ ವ್ಯವಸ್ಥೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಸೆ.05: ಮುಂಬರುವ ದಿನಗಳಲ್ಲಿ ಪ್ರತಿ ವರ್ಷ ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರನ್ನು ಹಿಂದಿನ ವರ್ಷವೇ ನೇಮಿಸಿ, ತರಬೇತಿ ನೀಡಿ, ನಿವೃತ್ತಿ ಹೊಂದಲಿರುವ ಶಿಕ್ಷಕರ ಸ್ಥಾನಕ್ಕೆ ಅವರನ್ನು ನೇಮಿಸುವ ವ್ಯವಸ್ಥೆಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು  ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಾಜಿ ರಾಷ್ಟ್ರಪತಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಶಿಕ್ಷಣ ಕ್ಷೇತ್ರಕ್ಕೆ 25 ಸಾವಿರ ಕೋಟಿ ರೂ. … Read more

ದಾವಣಗೆರೆ ಜಿಲ್ಲಾ ಕ ಸಾ ಪ ದಿಂದ ಸಮಸ್ತ ಶಿಕ್ಷಕ ಬಂಧುಗಳಿಗೆ ಹೃದಯಸ್ಪರ್ಶಿ  ಶುಭಾಶಯಗಳು

ಜಿಲ್ಲಾ “ಅತ್ಯುತ್ತಮ ಶಿಕ್ಷಕ ಪ್ರಶಸ್ತಿ” ಪುರಸ್ಕೃತರು ಹಾಗೂ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರೂ ಆದ ಬಿ. ವಾಮದೇವಪ್ಪ ಅವರು ಶಿಕ್ಷಕರ ದಿನಾಚರಣೆಯ ಈ ಸಂದರ್ಭದಲ್ಲಿ ಶಿಕ್ಷಕ ಬಂಧುಗಳಿಗೆ ಹೃದಯಸ್ಪರ್ಶಿ ಶುಭಾಶಯ ಕೋರಿದ್ದಾರೆ. ಅಕ್ಷರ ವಿದ್ಯೆ ಕಲಿಸಿದ, ಜೀವನ ಪಾಠ ಕಲಿಸಿದ ಗುರುಹಿರಿಯರನ್ನು ಗೌರವದಿಂದ ಸ್ಮರಿಸುವ ಪವಿತ್ರವಾದ ದಿನ. II ಗುರು ಬ್ರಹ್ಮ  ಗುರು ವಿಷ್ಣು  ಗುರುದೇವೋ ಮಹೇಶ್ವರಃ IIII ಗುರು ಸಾಕ್ಷಾತ್ ಪರಬಹ್ಮ ತಸ್ಮೈಶ್ರೀ ಗುರುವೇ ನಮಃ II ಅಜ್ಞಾನದಿಂದ ಸುಜ್ಞಾನದತ್ತ…ಕತ್ತಲೆಯಿಂದ ಬೆಳಕಿನತ್ತ…ಭಯದಿಂದ ನಿರ್ಭಯದತ್ತ… … Read more

‘ಮುರುಘಾ ಶ್ರೀಗಳ ಪ್ರಕರಣ ಸಿಬಿಐಗೆ ವಹಿಸಿ’ –  ವಿದ್ಯಾರ್ಥಿಗಳ ರಕ್ಷಣೆಗೆ ಪ್ರಗತಿಪರರ ಒತ್ತಾಯ

ಸುದ್ದಿ360 ದಾವಣಗೆರೆ, ಸೆ.02: ಮುರುಘಾ ಶ್ರೀಗಳ ವಿರುದ್ಧದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರು ಹಾಗೂ ಸದಸ್ಯರು ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಸಿ, ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಉಪವಿಭಾಗಾಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ನಿವೃತ್ತ ಪ್ರಾಧ್ಯಾಪಕ ಪ್ರೊ.ಎ.ಬಿ. ರಾಮಚಂದ್ರಪ್ಪ, ಪೋಕ್ಸೋ ಪ್ರಕರಣ ದಖಾಲಾದ ಆರು ದಿನಗಳ ಬಳಿಕವಾದರೂ ಮುರುಘಾ ಶರಣರನ್ನು ಬಂಧಿಸಿರುವುದು ಸ್ವಾಗತದ ವಿಷಯವಾಗಿದೆ. ಆದರೆ, ಶ್ರೀಗಳು ಪ್ರಭಾವಿಗಳಾಗಿರುವ ಕಾರಣ … Read more

error: Content is protected !!