ದಾವಣಗೆರೆಯಲ್ಲಿ ‘ದ ಜ್ಯುವೆಲರಿ ಷೋ’ ವಿನೂತನ ಆಭರಣ ಪ್ರದರ್ಶನ ಮತ್ತು ಮಾರಟ

ಸುದ್ದಿ360 ದಾವಣಗೆರೆ, ಜು.28: ದೇಶದ 15 ಅಗ್ರಶ್ರೇಣಿಯ ಆಭರಣ ತಯಾರಕರು ಭಾಗವಹಿಸುತ್ತಿರುವ “ದ ಜ್ಯುವೆಲರಿ ಷೋ” ಪ್ರದರ್ಶನ ಮತ್ತು ಮಾರಟ ಇದೇ ಜುಲೈ 29, 30 ಮತ್ತು 31ರಂದು ದಾವಣಗೆರೆಯ ‘ಎಸ್ ಎಸ್ ಕನ್ವೆಂಷನ್ ಸೆಂಟರ್’ ನಲ್ಲಿ ಆಯೋಜಿಸಲಾಗಿದೆ. ಅಮೋಘ ಭಾರತೀಯ ಒಡವೆಗಳ ಉತ್ಸವವನ್ನು ಜನಪ್ರಿಯ ನಟಿ ಧನ್ಯ ರಾಮ್‌ ಕುಮಾರ್ ಅವರು ಆಭರಣ ಮೇಳವನ್ನು ಜುಲೈ 29 ಮಧ್ಯಾಹ್ನ 12:30ಕ್ಕೆ ಉದ್ಘಾಟಿಸಲಿದ್ದಾರೆ. ಈ ಮೇಳದಲ್ಲಿ ಪ್ರಶಸ್ತಿ ವಿಜೇತ ಹಾಗೂ ಹೆಸರಾಂತ ಆಭರಣ ಮಳಿಗೆಗಳವರು ಭಾಗವಹಿಸುತ್ತಿದ್ದಾರೆ. ಅಲ್ಲದೆ … Read more

ಸೂತಕದ ಛಾಯೆ ನಡುವೆಯೇ ರಾಜ್ಯ ಬಿಜೆಪಿ ಸರ್ಕಾರದಿಂದ ನೂತನ ಯೋಜನೆಗಳ ಲೋಕಾರ್ಪಣೆ

ಎಸ್ ಸಿ /ಎಸ್ ಟಿ ಸಮುದಾಯಗಳಿಗೆ 75 ಯೂನಿಟ್ ಉಚಿತ ವಿದ್ಯುತ್ , ಸ್ವಯಂ ಉದ್ಯೋಗ ಯೋಜನೆ , 8000 ಶಾಲಾ ಕೊಠಡಿಗಳ ನಿರ್ಮಾಣ, ಸಮುದಾಯ ಆರೋಗ್ಯ ಕೇಂದ್ರಗಳಾಗಿ ಉನ್ನತೀಕರಣ, ‘ಸ್ತ್ರೀ ಸಾಮರ್ಥ್ಯ’ ಯೋಜನೆ, ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ, ಪುಣ್ಯಕೋಟಿ ದತ್ತು ಯೋಜನೆ, ವಿದ್ಯಾನಿಧಿ ಯೋಜನೆ.

ಡಾ.ತೋಂಟದ ಸಿದ್ಧರಾಮ ಶ್ರೀಗಳಿಗೆ ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ (ಜು.29)

ಸುದ್ದಿ360 ದಾವಣಗೆರೆ. ಜು.28: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮಾಗನೂರು ಬಸಪ್ಪ ಪ್ರತಿಷ್ಠಾನದ ವತಿಯಿಂದ 29ರ ಬೆಳಗ್ಗೆ 11ಕ್ಕೆ ನಗರದ ಕುವೆಂಪು ಕನ್ನಡ ಭವನದಲ್ಲಿ ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಬಿ.ವಾಮದೇವಪ್ಪ ಮಾಹಿತಿ ನೀಡಿದರು. ಇಂದು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಕಾರ್ಯಕ್ರಮದ ಸಾನಿಧ್ಯ ವಹಿಸಲಿರುವ ಗದಗ ತೋಂಟದಾರ್ಯ ಮಠದ ಡಾ.ತೋಂಟದ ಸಿದ್ಧರಾಮ ಶ್ರೀಗಳಿಗೆ ಈ ಬಾರಿ ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ … Read more

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆ ಕೊಲೆ ಪ್ರಕರಣ: ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಸಿಎಂ ಮಾಹಿತಿ

ಸುದ್ದಿ360 ಮಂಗಳೂರು, ಜು.28: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರೆಯ ಕೊಲೆಯಾದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರವೀಣ್ ಪರಿವಾರಕ್ಕೆ ಸಾಂತ್ವನ ಹೇಳುವ ಮತ್ತು ಅವರೊಂದಿಗೆ ಮಾತುಕತೆ ನಡೆಸಿ, ಪರಿಸ್ಥಿತಿಯ ಅವಲೋಕಿಸುವ ಉದ್ದೇಶದಿಂದ ಮಂಗಳೂರಿಗೆ ತೆರಳಿ ಅಲ್ಲಿಂದ ಬೆಳ್ಳಾರೆ ಗ್ರಾಮಕ್ಕೆ ಪ್ರಯಾಣ ಬೆಳೆಸಿದರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮುಖ್ಯಮಂತ್ರಿ ಬೊಮ್ಮಾಯಿಯವರು ಮಾತನಾಡಿದರು. ಇದರ ಒಂದು ವೀಡಿಯೋ ಬೈಟ್ ನಿಮಗಾಗಿ.

ಚರ್ಮ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಸುದ್ದಿ360, ದಾವಣಗೆರೆ ಜು.27: ಲಿಡ್‍ಕರ್ ನಿಗಮದಿಂದ ಚರ್ಮವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ನಗರದ ಎ.ವಿ.ಕೆ ಕಾಲೇಜ್ ರಸ್ತೆಯಲ್ಲಿರುವ ರಂಗಮಹಲ್ ಹಾಲ್‍ನಲ್ಲಿ ಏರ್ಪಡಿಸಲಾಗಿದೆ. ಮಾರಾಟ ಮೇಳದಲ್ಲಿ ಅಪ್ಪಟ ಚರ್ಮದ ಪಾದರಕ್ಷೆ, ಶೂ, ಬೆಲ್ಟ್, ಪರ್ಸ್, ಮಹಿಳೆಯರ ಪರ್ಸ್, ವ್ಯಾನಟಿ ಬ್ಯಾಗ್‍ಗಳು ಹೊಸ ಮಾದರಿಯಲ್ಲಿ ಲಭ್ಯವಿದ್ದು, ದಾಸ್ತಾನುಗಳ ಮೇಲೆ ಶೇ.20 ರಷ್ಟು ರಿಯಾಯಿತಿ ಹಾಗೂ ಆಯ್ದ ವಸ್ತುಗಳ ಮೇಲೆ ಶೇ.30 ಹಾಗೂ ಶೇ.40 ರಷ್ಟು ರಿಯಾಯಿತಿ ದರಕ್ಕೆ ಮಾರಾಟ ಲಭ್ಯವಿದೆ ಎಂದು ಲಿಡ್‍ಕರ್ ನಿಗಮದ ವ್ಯವಸ್ಥಾಪಕ ಎ.ಎಸ್ ರುದ್ರೇಶಿ … Read more

ಕರಾಟೆ ತರಬೇತಿದಾರರನ್ನು ಒದಗಿಸಲು ಅರ್ಜಿ ಆಹ್ವಾನ

ಸುದ್ದಿ360, ದಾವಣಗೆರೆ ಜು.28: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಮತ್ತು ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯಗಳ ತರಬೇತಿ ನೀಡುವ “ಓಬವ್ವ ಆತ್ಮ ರಕ್ಷಣಾ ಕಲೆ” ಯೋಜನೆಯನ್ನು ಅನುಷ್ಟಾನಗೊಳಿಸುವ ಸಲುವಾಗಿ ಮಾನ್ಯತೆ ಪಡೆದಿರುವ ಅರ್ಹ ತರಬೇತಿ ಸಂಸ್ಥೆಗಳಿಂದ ಮಹಿಳಾ ಕರಾಟೆ ತರಬೇತಿದಾರರನ್ನು ಒದಗಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲ್ಲಿಸುವವರು ಆಗಸ್ಟ್.03 ರ ಸಂಜೆ 05.30 ಗಂಟೆಯ ಒಳಗಾಗಿ ದಾವಣಗೆರೆ ಜಿಲ್ಲಾಡಳಿತ ಭವನದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳ … Read more

ಪ್ರವೀಣ್ ನೆಟ್ಟಾರು ಹತ್ಯೆ- ಸಾಮೂಹಿಕ ರಾಜೀನಾಮೆಗೆ ಮುಂದಾದ ದಾವಣಗೆರೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳು

ಸುದ್ದಿ360 ದಾವಣಗೆರೆ ಜು.27: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು‌‌ ಕೊಲೆ ಖಂಡಿಸಿ, ದಾವಣಗೆರೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳು ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ. ಹಾಗೂ ಹತ್ಯೆ ಕಾರಣರಾದವರನ್ನು ಕೂಡಲೇ ಬಂಧಿಸಿ ಉಗ್ರಶಿಕ್ಷೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಈ ಬಗ್ಗೆ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಆರ್. ಎಲ್. ಶಿವಪ್ರಕಾಶ್‌‌ ಅವರು, ಜಿಲ್ಲಾಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಹಿಂದೆ ನಡೆದಂತ ಬಿಜೆಪಿ ಕಾರ್ಯಕರ್ತರ … Read more

ಶಿವಮೊಗ್ಗ ನಗರದಲ್ಲಿ ವಿಶೇಷ ಕಾರ್ಯಾಚರಣೆ – ಮಾರಕಾಸ್ತ್ರಗಳು ಪೊಲೀಸರ ವಶ

ಪೊಲೀಸರು ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆದಿರುವ ಮಾರಕಾಸ್ತ್ರಗಳು.

ಪ್ರವೀಣ್ ಹತ್ಯೆ ಪ್ರಕರಣ – ದುಷ್ಕರ್ಮಿಗಳ ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜು. 27 : ಸಮಾಜದಲ್ಲಿ ಹಿಂಸೆ, ಕ್ಷೋಭೆ ಉಂಟು ಮಾಡುವಂತಹ ದುಷ್ಕೃತ್ಯವನ್ನು ಎಸಗಿರುವ ದುಷ್ಕರ್ಮಿಗಳನ್ನು ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಇಂದು ಆರ್ ಟಿ ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿ, ಮಂಗಳೂರಿನಲ್ಲಿ ನಿನ್ನೆ ನಡೆದ ಪ್ರವೀಣ್ ಹತ್ಯೆ ವಿಚಾರವಾಗಿ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ.  ಅಪರಾಧಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಆದೇಶ ನೀಡಲಾಗಿದೆ. ಕೇರಳ ರಾಜ್ಯದ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿರಲಾಗಿದೆ. ಮಂಗಳೂರು ಹಾಗೂ ಕಾಸರಗೋಡು … Read more

ದಾವಣಗೆರೆ ಜಿಲ್ಲಾ ಕಾಂಗ್ರೆಸ್‍ನಿಂದ ಕಾರ್ಗಿಲ್ ವಿಜಯ ದಿವಸ್ – ಕೇಂದ್ರ ಸರ್ಕಾರ ಸೈನಿಕರನ್ನು ಗೌರವದಿಂದ ಕಾಣಲಿ: ದಿನೇಶ್ ಕೆ.ಶೆಟ್ಟಿ

ಸುದ್ದಿ360, ದಾವಣಗೆರೆ ಜು.26: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ಕಾರ್ಗಿಲ್ ವಿಜಯ ದಿವಸ್‍ನ್ನು ದಾವಣಗೆರೆ ನಗರದ ಹರಳೆಣ್ಣೆ ಕೊಟ್ರಬಸಪ್ಪ (ರಾಂ ಅಂಡ್ ಕೋ) ವೃತ್ತದಲ್ಲಿ ಮಂಗಳವಾರ ಆಚರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಮಾತನಾಡಿ ಇಡೀ ದೇಶ ಇಂದು ಕಾರ್ಗಿಲ್ ವಿಜಯ ದಿವಸವನ್ನು ಆಚರಿಸುತ್ತಿದೆ. ದೇಶಕ್ಕಾಗಿ ಹುತಾತ್ಮರಾದ ಎಲ್ಲ ಭಾರತೀಯ ಸೈನಿಕರಿಗೂ … Read more

error: Content is protected !!