ದಾವಣಗೆರೆ ವಿ ವಿ ಕುಲಪತಿಯಾಗಿ ಪ್ರೊ.ಬಿ.ಡಿ. ಕುಂಬಾರ ನೇಮಕ

ಸುದ್ದಿ360, ದಾವಣಗೆರೆ, ಜು.12: ಕರ್ನಾಟಕ ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಡಿ.ಕುಂಬಾರ ಅವರು ದಾವಣಗೆರೆ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ನೇಮಕವಾಗಿದ್ದಾರೆ. ಕುಲಪತಿಯಾಗಿದ್ದ ಪ್ರೊ. ಶರಣಪ್ಪ ವಿ.ಹಲಸೆ ಅವರು ಮಾರ್ಚ್ 26ರಂದು ನಿವೃತ್ತಿಯಾಗಿದ್ದರು. ಪ್ರೊ.ಪಿ.ಲಕ್ಷ್ಮಣ ಅವರು ಹಂಗಾಮಿ ಕುಲಪತಿಯಾಗಿದ್ದರು. ಪ್ರೊ. ಕುಂಬಾರ ಅವರು ಸೋಮವಾರ ವಿಶ್ವವಿದ್ಯಾನಿಲಯದ ನಾಲ್ಕನೇ ಕುಲಪತಿಯಾಗಿ ಅಧಿಕಾರ ವಹಿಸಿಕೊಂಡರು.

ಹಂದಿ ಹಾವಳಿ ತಡೆಗೆ ರೈತರ ಆಗ್ರಹ

ಸುದ್ದಿ360, ದಾವಣಗೆರೆ, ಜು.12: ನಗರದ ಹೊರವಲಯದ ಗ್ರಾಮಗಳಲ್ಲಿ ಭತ್ತದ ಸಸಿ ಮಡಿ ಮತ್ತಿತರ ಬೆಳೆಗಳ ಮೇಲೆ ಹಂದಿಗಳು ದಾಳಿ ಮಾಡಿ ಹಾನಿ ಮಾಡುತ್ತಿರುವುದನ್ನು ತಡೆಯುವಂತೆ ಆಗ್ರಹಿಸಿ ಅಖಿಲ ಭಾರತ ಹಿಸಾನ್ ಸಭಾ ಜಿಲ್ಲಾ ಸಮಿತಿ ನೇತೃತ್ವದಲ್ಲಿ ರೈತರು ಸೋಮವಾರ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದ ರೈತರು, ದೊಡ್ಡ ಬೂದಿಹಾಳ್, ಚಿಕ್ಕ ಬೂದಿಹಾಳ್ ಹಾಗೂ ಯರಗುಂಟೆ ಗ್ರಾಮಗಳಲ್ಲಿ ರೈತರ ವಿವಿಧ ಬೆಳೆಗಳ ಮೇಲೆ ದಾಳಿ ಮಾಡುತ್ತಿರುವ ಹಂದಿಗಳ ಕಾಟ ತಡೆಯುವಂತೆ ಆಗ್ರಹಿಸಿದರು. ಈ … Read more

ಧರ್ಮಸಂಸತ್ ಆಶಯದಂತೆ ಪಂಚ ಪೀಠಗಳು ಒಂದಾಗಲಿವೆ : ಕೇದಾರ ಶ್ರೀ

ಎಸ್.ಎಸ್. ಮಲ್ಲಿಕಾರ್ಜುನ್ ನಿವಾಸದಲ್ಲಿಇಷ್ಟಲಿಂಗ ಮಹಾಪೂಜೆ ನೆರವೇರಿಸಿದ ಶ್ರೀಗಳು ಸುದ್ದಿ360, ದಾವಣಗೆರೆ ಜು.11: ಸಿದ್ಧಾಂತ ಶಿಖಾಮಣಿಯಲ್ಲಿ ಹೇಳಿದಂತೆ ಧರ್ಮಸಂಸತ್ ಎಂಬ ಸಂವಿಧಾನವಿದ್ದು, ಅದರ ಆಶಯದಂತೆ ಪಂಚ ಪೀಠಗಳು ಒಂದಾಗಲಿವೆ ಎಂದು ಕೇದಾರ ಪೀಠದ ಶ್ರೀಭೀಮಾಶಂಕರಲಿಂಗ ಜಗದ್ಗುರು ತಿಳಿಸಿದರು. ನಗರದ ಎಂಸಿಸಿ ಬಿ ಬ್ಲಾಕ್‌ನಲ್ಲಿರುವ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ನಿವಾಸದಲ್ಲಿ ಸೋಮವಾರ ಶಾಸಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಕುಟುಂಬದ ಕೋರಿಕೆ ಮೇರೆಗೆ ಇಷ್ಟಲಿಂಗ ಮಹಾಪೂಜೆ ನೆರವೇರಿಸಿದ ನಂತರ ಆಶೀರ್ವಚನ ನೀಡಿದರು. ಪಂಚ … Read more

ದಾವಣಗೆರೆ ನೂತನ ಜಿಲ್ಲಾಧಿಕಾರಿಯಾಗಿ ಶಿವಾನಂದ ಕಾಪಶಿ

ಸುದ್ದಿ360, ದಾವಣಗೆರೆ ಜು.11: ದಾವಣಗೆರೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಶಿವಾನಂದ ಕಾಪಶಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ತಕ್ಷಣದಿಂದಲೇ ಆದೇಶ ಜಾರಿಗೆ ಬರುವಂತೆ ದಾವಣಗೆರೆ ಜಿಲ್ಲಾಧಿಕಾರಿಯನ್ನಾಗಿ ಸರ್ಕಾರ ನೇಮಿಸಿದೆ. ಶಿವಾನಂದ ಕಾಪಶಿ ಅವರು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ‌ ವ್ಯವಸ್ಥಾಪಕ ನಿರ್ದೇಶಕರಾಗಿ ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ದಾವಣಗೆರೆ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಮಹಾಂತೇಶ್ ಬೀಳಗಿ ಅವರಿಗೆ ವರ್ಗಾವಣೆ ಆಗಿದ್ದು ಈವರೆಗೂ ಯಾವುದೇ ಸ್ಥಳ ತೋರಿಸಿಲ್ಲ. ಕರ್ನಾಟಕ ರಾಜ್ಯಪಾಲರ ಆದೇಶದ … Read more

ಮೀಸಲಾತಿ: ಜಿಲ್ಲಾಡಳಿತ ಕಚೇರಿ ಮುತ್ತಿಗೆಗೆ ಮುಂದಾದ ಎಸ್ಸಿ-ಎಸ್ಟಿ ಸಂಘಟನೆಗಳು

ಅರ್ಧಗಂಟೆಗೂ ಹೆಚ್ಚು ಕಾಲ ಜಿಲ್ಲಾಡಳಿತ ಭವನ ಮುಖ್ಯ ದ್ವಾರದ ಎದುರು ಪಿಬಿ ರಸ್ತೆ ತಡೆ ಸುದ್ದಿ360, ದಾವಣಗೆರೆ ಜು.11: ಕರ್ನಾಟಕ ಸ್ವಾಭಿಮಾನಿ ಎಸ್ಸಿ-ಎಸ್ಟಿ ಸಂಘಟನೆಗಳ ಒಕ್ಕೂಟ ಮತ್ತು ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ಸದಸ್ಯರು, ನ್ಯಾ. ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೆ ಆಗ್ರಹಿಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲು ಮುಂದಾದ ಘಟನೆ ಸೋಮವಾರ ನಗರದಲ್ಲಿ ಜರುಗಿತು. ಮುನ್ನೆಚ್ಚರಿಕೆ ಕ್ರಮವಾಗಿ ಪಿಬಿ ರಸ್ತೆಗೆ ಹೊಂದಿಕೊಂಡಿರುವ ಜಿಲ್ಲಾಡಳಿತ ಭವನದ ಮುಖ್ಯದ್ವಾರದ ಕಮಾನು ಬಳಿಯೇ ಪೊಲೀಸರು ಬ್ಯಾರಿಕೇಡ್ … Read more

ಪಿಂಚಣಿಗಾಗಿ ಹಿರಿಯ ಜೀವಗಳ ಪರದಾಟ – ಇದೇನು ಅಧಿಕಾರಿಗಳ ಜಾಣ ಕಿವುಡೇ ?

ಸುದ್ದಿ360, ದಾವಣಗೆರೆ ಜು.11: ಇದೇನು ನಮ್ಮ ಹಿರಿಯ ನಾಗರೀಕರು ಹೀಗೆ ತಮ್ಮ ಜೋಡು ಬಿಟ್ಟು ಸರತಿ ಸಾಲಿನಲ್ಲಿ ಕೂತಿದ್ದಾರೆ ಎಂದು ಆಶ್ಚರ್ಯ ಪಡುತ್ತಿದ್ದೀರಾ… ಇದು ದಾವಣಗೆರೆ  ನಗರದ ಗಡಿಯಾರ ಕಂಬದ ಬಳಿ ಇರುವ ಮುಖ್ಯ ಅಂಚೆ ಕಚೇರಿಯ ಮುಂಭಾಗ ಸೋಮವಾರ ಕಂಡು ಬಂದ ದೃಶ್ಯ. ಹೌದು ಸ್ವಾಮಿ ಇವರೆಲ್ಲಾ ಸಾಮಾಜಿಕ ಭದ್ರತಾ ಯೋಜನೆಯಡಿ ಪ್ರತಿ ತಿಂಗಳು ನೀಡುವ ಪಿಂಚಣಿ ಪಡೆಯಲು ಹೀಗೆ ಬೆಳಗ್ಗೆ 5 ಗಂಟೆಯಿಂದಲೇ ಕಚೇರಿ ಬಳಿ ಸಾಲು ಸಾಲಾಗಿ ನಿಂತು ಕೊನೆಗೆ ನಿಲಲು ಆಗದೆ … Read more

ಜು.17ಕ್ಕೆ ಕುರುಬರ ಸಂಸ್ಕೃತಿ ದರ್ಶನ ಮಾಲಿಕೆ – ಹದಿಮೂರು ಗ್ರಂಥಗಳ ಅನಾವರಣ

ಸುದ್ದಿ360, ದಾವಣಗೆರೆ ಜು.11: ಕುರುಬರ ಸಾಂಸ್ಕೃತಿಕ ಪರಿಷತ್ತು, ಬೆಂಗಳೂರು ಹಾಗೂ ದಾವಣಗೆರೆ ಜಿಲ್ಲಾ ಕುರುಬರ ಸಮಾಜದ ಎಲ್ಲಾ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಜು.17ರ ಸಂಜೆ 3 ಗಂಟೆಗೆ ಕುರುಬರ ಸಾಂಸ್ಕೃತಿಕ ದರ್ಶನ ಮಾಲಿಕೆ ಮತ್ತು ಹದಿಮೂರು ಗ್ರಂಥಗಳ ಅನಾವರಣ ಕಾರ್ಯಕ್ರಮ ದಾವಣಗೆರೆಯಲ್ಲಿ ಆಯೋಜಿಸಲಾಗಿದೆ ಎಂದು ಕರುಬರ ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷ ಎಚ್.ಎಂ. ರೇವಣ್ಣ ತಿಳಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ನಗರದ ವಿದ್ಯಾನಗರ ಮುಖ್ಯರಸ್ತೆಯಲ್ಲಿನ ಕುವೆಂಪು ಕನ್ನಡ ಭವನದಲ್ಲಿ ಪುರಾಣ, ಧರ್ಮ, ಕಲೆ … Read more

ಸಿದ್ಧರಾಮೋತ್ಸವ ಅಲ್ಲ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವ: ಎಚ್. ಎಮ್. ರೇವಣ್ಣ

ಸುದ್ದಿ360, ದಾವಣಗೆರೆ ಜು.11: ಸಿದ್ಧರಾಮೋತ್ಸವ ಅಲ್ಲ ಇದು ಸಿದ್ಧರಾಮಯ್ಯರ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವ. ಅವರ ಜೀವನದಲ್ಲಿನ ಒಂದು ಸಂಭ್ರಮದ ಸನ್ನಿವೇಶ ಇದಾಗಿದೆ ಎಂದು ಕುರುಬರ ಸಾಂಸ್ಕೃತಿಕ ಪರಿಷತ್ತಿನ ಅಧ್ಯಕ್ಷರಾದ ಎಚ್. ಎಮ್. ರೇವಣ್ಣ ತಿಳಿಸಿದರು. ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, ಸಿದ್ಧರಾಮಯ್ಯನವರು ತಮ್ಮ ರಾಜಕೀಯ ಜೀವನದಲ್ಲಿ ಕಳಂಕರವಹಿತವಾಗಿ ಉತ್ತಮ ಜೀವನ ನಡೆಸುವುದರ ಜೊತೆಗೆ, ಕಷ್ಟ-ಸುಖಗಳನ್ನು ಅನುಭವಿಸಿ, ರಾಜ್ಯದಲ್ಲಿ ಬಲಿಷ್ಟ ನಾಯಕನಾಗಿ ಬೆಳೆದು, ಐದು ವರ್ಷ ಉತ್ತಮ ಆಡಳಿತ ಕೊಟ್ಟಿದ್ದಾರೆ. ನೆಚ್ಚಿನ ನಾಯಕ 75 ವಸಂತಗಳನ್ನು ಕಳೆದಿರುವ … Read more

ಮಳೆ ಪೀಡಿತ  ಜಿಲ್ಲೆಗಳಿಗೆ ಸಿಎಂ ಪ್ರವಾಸ

ಸ್ಥಿತಿಗತಿ ಪರಿಶೀಲಿಸಿ ಪರಿಹಾರಕ್ಕೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುದ್ದಿ360, ಬೆಂಗಳೂರು, ಜು.11: ಅತಿವೃಷ್ಟಿ ಯಿಂದ ಹಾನಿಗೊಳಗಾದ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ನಾಳೆ ಪ್ರವಾಸ ಕೈಗೊಳ್ಳುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಮಲೆನಾಡು, ಕೊಡಗು, ಕರಾವಳಿ ಹಾಗೂ ಉತ್ತರ ಕನ್ನಡ ಭಾಗದಲ್ಲಿಕಳೆದ 10 ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿದೆ. ಈಗಾಗಲೇ ಸಂಬಂಧಿಸಿದ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ ಹಾಗೂ ನೇರವಾಗಿಯೂ ಮಾತನಾಡಿದ್ದು, ಮಳೆ … Read more

ಭೂಕುಸಿತ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ನಿರ್ಭಂಧ: ಬದಲಿ ಸಂಚಾರ ವ್ಯವಸ್ಥೆ

ಸುದ್ದಿ360, ಶಿವಮೊಗ್ಗ ಜು.10: ಭಾರಿ ಮಳೆಯಿಂದಾಗಿ ಆಗುಂಬೆ ಘಾಟಿಯ 11ನೇ ತಿರುವಿನಲ್ಲಿ ಗುಡ್ಡಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಸ್ಥಳದಲ್ಲಿ ಭೂ ಕುಸಿತದ ಮಣ್ಣು ಮತ್ತು ಮರಮಟ್ಟುಗಳನ್ನು ತೆರವುಗೊಳಿಸುವ ಕಾರ್ಯವನ್ನು ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ವಾಹನಗಳ ಸಂಚಾರವನ್ನು ಜುಲೈ 12ರ ಮುಂಜಾನೆ 8ಗಂಟೆಯವರೆಗೆ ನಿರ್ಬಂಧಿಸಲಾಗಿದೆ. ಆ ಬಳಿಕ ಜುಲೈ 30ರವರೆಗೆ ಈ ಮಾರ್ಗದಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗುವುದು. … Read more

error: Content is protected !!