ಶ್ರೀ ಚಾಮುಂಡೇಶ್ವರಿಗೆ ಆಷಾಡ ಶುಕ್ರವಾರದ ನಿಮಿತ್ತ ವಿಶೇಷ ಅಲಂಕಾರ
ಸುದ್ದಿ360, ಮೈಸೂರು ಜು.08: ನಾಡದೇವತೆ ಮಹಿಷಾಸುರ ಮರ್ದಿನಿ ಚಾಮುಂಡೇಶ್ವರಿ ಅಮ್ಮನವರಿಗೆ ಆಷಾಡ ಮಾಸದ ಎರಡನೇ ಶುಕ್ರವಾರವಾದ ನಿಮಿತ್ತ ವಿಶೇಷ ಅಲಂಕಾರ ಮಾಡಲಾಗಿದೆ. ಚಿತ್ರ ವರದಿ: ಮಹೇಶ್ ಕುಮಾರ್ ಆರ್.
ಸುದ್ದಿ360, ಮೈಸೂರು ಜು.08: ನಾಡದೇವತೆ ಮಹಿಷಾಸುರ ಮರ್ದಿನಿ ಚಾಮುಂಡೇಶ್ವರಿ ಅಮ್ಮನವರಿಗೆ ಆಷಾಡ ಮಾಸದ ಎರಡನೇ ಶುಕ್ರವಾರವಾದ ನಿಮಿತ್ತ ವಿಶೇಷ ಅಲಂಕಾರ ಮಾಡಲಾಗಿದೆ. ಚಿತ್ರ ವರದಿ: ಮಹೇಶ್ ಕುಮಾರ್ ಆರ್.
ಸುದ್ದಿ360, ಬೆಂಗಳೂರು, ಜು.08: ರಾಜ್ಯದಲ್ಲಿ ಅತಿಯಾಗಿ ಸುರಿಯುತ್ತಿರುವ ಮಳೆ ಹಾಗೂ ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿಇಂದು ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ 13 ಜಿಲ್ಲೆಗಳ ಉಸ್ತುವಾರಿ ಹಾಗೂ ಸಂಬಂಧಪಟ್ಟ ಇಲಾಖೆಗಳ ಸಚಿವರು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿ ಇ ಒ ಮತ್ತು ಇತರೆ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಕರೆದಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಮಧ್ಯಾಹ್ನ 2:30ಕ್ಕೆ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗಿದೆ? ಎಷ್ಟು … Read more
ಸುಸುದ್ದಿ360, ದಾವಣಗೆರೆ, ಜು.08: ಕೇಂದ್ರ ಸರ್ಕಾರವು ಗೃಹ ಬಳಕೆಯ ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆ ನಿರ್ಧಾರ ಖಂಡಿಸಿ ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಸಮಿತಿಯಿಂದ ನಗರದ ಗಾಂಧಿ ವೃತ್ತದ ಬಳಿ ಗುರುವಾರ ಪ್ರತಿಭಟಿಸಲಾಯಿತು. ಕೇಂದ್ರ ಸರ್ಕಾರ ಬೆಲೆ ಏರಿಕೆ ನೀತಿಯ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಾ ಆಗ್ರೋಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಎಸ್.ಯು.ಸಿ.ಐ (ಸಿ) ಜಿಲ್ಲಾ ಸಂಘಟನಾ ಸಮಿತಿಯ ಕಾರ್ಯದರ್ಶಿ ಕಾಂ. ಕೈದಾಳೆ ಮಂಜುನಾಥ್ ರವರು ಮಾತನಾಡುತ್ತಾ “ಕೇಂದ್ರ ಸರ್ಕಾರ ಗೃಹ ಬಳಕೆಯ ಗ್ಯಾಸ್ ಸಿಲೆಂಡರ್ ಬೆಲೆಯನ್ನು … Read more
ಸುದ್ದಿ360, ದಾವಣಗೆರೆ, ಜು.07: ಮಾದಕ ವಸ್ತು ನಿಯಂತ್ರಿಸುವ ನಿಟ್ಟಿನಲ್ಲಿ ಮಾದಕ ಸೇವಿಸುವವರ ಮೇಲೆಯೂ ಕಠಿಣ ಕ್ರಮ ಜರುಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಕುಮಾರ್ ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ದಾವಣಗೆರೆ ಹಾಗೂ ಚಿತ್ರದುರ್ಗ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ನೌಕರರು, ವಿದ್ಯಾರ್ಥಿಗಳು ಆಗಿರುತ್ತಾರೆ ಎಂಬ ಕಾರಣದಿಂದ ಮಾದಕ ದ್ರವ್ಯ ಸೇವಿಸುವವರ ಮೇಲೆ ಮೃದು ಧೋರಣೆಯನ್ನು ಹೊಂದಲಾಗಿತ್ತು. … Read more
ಸುದ್ದಿ360 ದಾವಣಗೆರೆ.ಜು.07: ಶ್ರೀ ಮದ್ ರಂಭಾಪುರಿ ಜಗದ್ಗುರುಗಳ ಹಾಗೂ ಶ್ರೀ ಹಿಮವತ್ಕೇದಾರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಪರಂಪರೆ ಪುನರ್‌ಮನನ ಧರ್ಮ ಸಮಾರಂಭ ಹಾಗೂ ಶ್ರೀ ಕೇದಾರ ಜಗದ್ಗುರುಗಳ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ ಸಮಾರಂಭ ಜು.9 ಮತ್ತು 10ರಂದು ನಗರದ ಪಿಬಿ ರಸ್ತೆಯ ತ್ರಿಶೂಲ್ ಕಲಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪೂಜಾ ಸಮಿತಿ ಸದಸ್ಯರು, ಧೂಡ ಅಧ್ಯಕ್ಷರೂ ಆದ ಕೆ.ಎಂ. ಸುರೇಶ್ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆಧುನಿಕತೆಯ ಇಂದಿನ ದಿನಮಾನಗಳಲ್ಲಿ ಕೂಡು ಕುಟುಂಬದ ಪರಿಕಲ್ಪನೆ ಮರೆಯಾಗಿದ್ದು, ಪತಿ, ಪತ್ನಿ … Read more
ಸುದ್ದಿ360 ದಾವಣಗೆರೆ.ಜು.06: ಹಿರಿಯ ನಾಗರೀಕರಿಗೆ ಮತ್ತು ಅಂಗವಿಕಲರಿಗೆ ಉಚಿತ ಕಿವಿ ಮೂಗು ಮತ್ತು ಗಂಟಲು ತಪಾಸಣೆ ಶಿಬಿರವು ಜುಲೈ 9ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1: 30 ಗಂಟೆವರೆಗೆ ನಗರದ ಎವಿಕೆ ಕಾಲೇಜು ರಸ್ತೆಯಲ್ಲಿರುವ ಶ್ರೀ ಭಗವಾನ್ ಮಹಾವೀರ ಜೈನ್ ಆಸ್ಪತ್ರೆ (ಹಳೆ ಅಶ್ವಿನಿ ಆಸ್ಪತ್ರೆ)ಯಲ್ಲಿ ನುರಿತ ಕಿವಿ, ಮೂಗು ಮತ್ತು ಗಂಟಲು ಶಸ್ತ್ರಚಿಕಿತ್ಸೆ ತಜ್ಞ ವೈದ್ಯರಿಂದ ನಡೆಯಲಿದೆ. ಶಿಬಿರದಲ್ಲಿ ವೈದ್ಯರ ಸಲಹೆ ಮೇರೆಗೆ ಉಚಿತವಾಗಿ ಔಷಧಿ ವಿತರಣೆ ಮತ್ತು ಉಚಿತವಾಗಿ ಶ್ರವಣಯಂತ್ರಗಳನ್ನು ನೀಡಲಾಗುತ್ತಿದ್ದು, ಶಾ … Read more
ಸುದ್ದಿ360 ದಾವಣಗೆರೆ.ಜು.06: ಜಿಲ್ಲಾ ಒಕ್ಕಲಿಗರ ಸಂಘದ ವತಿಯಿಂದ 2021-22ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.80 ಕ್ಕಿಂತ ಅಧಿಕ ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಿದೆ. ಜಿಲ್ಲಾ ಒಕ್ಕಲಿಗರ ಸಂಘದಿಂದ ಜುಲೈ 24 ರಂದು ನಗರದ ಸರಕಾರಿ ಬಸ್ ನಿಲ್ದಾಣ ಪಕ್ಕ ಇರುವ ಶ್ರೀ ಸಾಯಿ ಸಭಾಭವನದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ಏರ್ಪಡಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಜುಲೈ 15 ರೊಳಗೆ ಅಂಕಪಟ್ಟಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ವಿದ್ಯಾರ್ಥಿ ಭವನ ವೃತ್ತದಲ್ಲಿರುವ ಸಂಘದ … Read more
ಸುದ್ದಿ360,ಬೆಂಗಳೂರು, ಜುಲೈ 06 : ಭಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದು, ರಕ್ಷಣಾ ಹಾಗೂ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಮ್ ಅವರ 36 ನೇ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕರಾವಳಿ ಮತ್ತು ಕೊಡಗು ಭಾಗಗಳಲ್ಲಿ ಮನೆಗಳಿಗೆ ಹಾನಿಯುಂಟಾಗಿರುವುದರಿಂದ ಎಸ್.ಡಿ.ಆರ್.ಎಫ್ ಮತ್ತು ಎನ್.ಡಿ.ಆರ್.ಎಫ್ ತಂಡವನ್ನು ನಿಯೋಜಿಸಿ … Read more
ಸುದ್ದಿ360 ದಾವಣಗೆರೆ.ಜು.06: ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 65ನೇ ಸ್ಮರಣೋತ್ಸವ ಪ್ರಯುಕ್ತ ಜು.12ರಿಂದ 14ರವರೆಗೆ ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದಾಗಿ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮೀಜಿ ತಿಳಿಸಿದರು. ನಗರದ ಶ್ರೀ ಶಿವಯೋಗಾಶ್ರಮದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಶ್ರೀಗಳು ಮಾಹಿತಿ ನೀಡಿದರು. ಶ್ರೀಗಳ 65ನೇ ಸ್ಮರಣೋತ್ಸವ ಪ್ರಯುಕ್ತ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಶರಣ ಸಂಸ್ಕೃತಿ ಉತ್ಸವ, ಮಹಾ ತಪಸ್ವಿ ಶ್ರೀ ಮುರುಘೇಂದ್ರ ಶಿವಯೋಗಿಗಳವರ ಲಿಂಗೈಕ್ಯ ಶತಮಾನೊತ್ಸವ, ಜಯದೇವಶ್ರೀ ಶೂನ್ಯಪೀಠ … Read more
ಸುದ್ದಿ360 ಹುಬ್ಬಳ್ಳಿ, ಜು.06 : ಸರಳ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಹತ್ಯೆ ಬಗ್ಗೆ ಆರೋಪಿ 5 ದಿನಗಳ ಹಿಂದೆಯೇ ಸುಳಿವು ನೀಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆರೋಪಿ ಮಹಾಂತೇಶ ಶಿರೂರ ಜೂ.30ರಂದು ತನ್ನ ಫೇಸ್ ಬುಕ್ ಖಾತೆಯಲ್ಲಿ ಹಾಕಿರುವ ಪೋಸ್ಟ್ ಈ ಶಂಖೆಗೆ ಪುಷ್ಟಿ ನೀಡುತ್ತದೆ. ತನ್ನ ಮುಖಪುಟದಲ್ಲಿ ಭಗದ್ಗೀತೆಯ ಶ್ಲೋಕ ‘ಅಧರ್ಮ ತಾಂಡವವಾಡುತ್ತಿರುವಾ ದುಷ್ಟರನ್ನು ನಾಶ ಮಾಡಲು ಮತ್ತು ಧರ್ಮವನ್ನು ಪುನಃ ಸ್ಥಾಪಿಸಲು ನೀನು ಬರುವುದಾಗಿ ವಚನ ನೀಡಿರುವೆ ಪ್ರಭು. ಇನ್ನ ವಿಳಂಬವೇಕೆ ಪ್ರಭುವೇ? … Read more