ಮಡಿಕೇರಿಯಲ್ಲಿ ಭಾರೀ ಸದ್ದಿನೊಂದಿಗೆ ಭೂಕಂಪನದ ಅನುಭವ

ಸುದ್ದಿ360 ಮಡಿಕೇರಿ ಜು.2: ತಾಲೂಕಿನ ಪರಾಜೆ ಗ್ರಾಮದಲ್ಲಿ ಶನಿವಾರ ರಾತ್ರಿ 8.25ರ ಸುಮಾರಿಗೆ ಭೂಮಿಯಿಂದ ಭಾರೀ ಪ್ರಮಾಣದ ಶಬ್ಧ ಕೇಳಿ ಬಂದಿದ್ದು, ಗ್ರಾಮಸ್ಥರನ್ನು ಭಯಬೀತಗೊಳಿಸಿದೆ. ಭೂಕಂಪನದ ಭಯದಿಂದ ಮನೆಯೊಳಗಡೆ ಇದ್ದವರು ಹೊರಗೆ ಓಡಿ ಬಂದಿದ್ದಾರೆ. ಇಲ್ಲಿನ ಚೆಂಬು, ಸಂಜಾಜೆ, ಗೂನಡ್ಕ ಭಾಗಗಳಲ್ಲಿ ಈ ಶಬ್ಧ ಕೇಳಿ ಬಂದಿದ್ದು, ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಇದು ಭೂಕಂಪನ ಹೌದೋ ಇಲ್ಲೋ ಎಂದು ಇನ್ನು ಸ್ಪಷ್ಟಪಡಿಸಿಲ್ಲ.

ಅನುದಾನ ನೀಡಿಕೆಯಲ್ಲಿ ತಾರತಮ್ಯ – ಬಿಜೆಪಿಯಿಂದ ಸೇಡಿನ ರಾಜಕೀಯ

ಪಾಲಿಕೆ ವಿಪಕ್ಷ ನಾಯಕ : ಜಿ. ಎಸ್. ಮಂಜುನಾಥ್ ಗಡಿಗುಡಾಳ್‌ ಗಂಭೀರ ಆರೋಪ ಸುದ್ದಿ360 ದಾವಣಗೆರೆ, ಜು.02:  ಮಹಾನಗರ ಪಾಲಿಕೆ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಯುಜಿಡಿ ತುರ್ತು ಕಾಮಗಾರಿ ಸೇರಿದಂತೆ ಮೂಲಭೂತ ಸೌಲಭ್ಯ ಕಲ್ಪಿಸಲು ಕೂಡ ಕಾಂಗ್ರೆಸ್ ವಾರ್ಡ್ಗಳಿಗೆ ಹಣ ನೀಡದೆ ಆಡಳಿತ ಪಕ್ಷ ಬಿಜೆಪಿ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಜಿ. ಎಸ್. ಮಂಜುನಾಥ್ ಗಡಿಗುಡಾಳ್ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಹಾನಗರ ಪಾಲಿಕೆ … Read more

ಜು.11ಕ್ಕೆ ರೈತರಿಂದ ಮುಖ್ಯಮಂತ್ರಿ ಮನೆಗೆ ಮುತ್ತಿಗೆ

ಸುದ್ದಿ360 ದಾವಣಗೆರೆ, ಜು.02: ಕಬ್ಬು ಬೆಳೆಗೆ ಕನಿಷ್ಠ ಬೆಲೆ ನಿಗದಿ, ಹಳೇ ಬಾಕಿ ಪಾವತಿ ಹಾಗೂ ಕರ ನಿರಾಕರಣೆ ಚಳವಳಿಯಲ್ಲಿ ಕಟ್ಟದ ಗೃಹ ವಿದ್ಯುತ್ ಬಿಲ್ ಬಲತ್ಕಾರ ವಸೂಲಿ ಕ್ರಮದ ವಿರುದ್ಧ ಜು.11ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿ, ಅಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಮುಖ್ಯಮಂತ್ರಿಗಳ … Read more

ಬಿಜೆಪಿಯಲ್ಲಿ ಮಾತ್ರ ಮಹಿಳೆಗೆ ಸೂಕ್ತ ಸ್ಥಾನಮಾನ : ವೀರೇಶ ಹನಗವಾಡಿ ಅಭಿಮತ

ಸುದ್ದಿ360 ದಾವಣಗೆರೆ, ಜು.02:  ಇತರೆ ರಾಜಕೀಯ ಪಕ್ಷಗಳು ಮಹಿಳೆಯರನ್ನು ಮತ ಬ್ಯಾಂಕ್‌ಗಾಗಿ ಮಾತ್ರವೇ ಉಪಯೋಗಿಸಿಕೊಳ್ಳುತ್ತವೆ. ಬಿಜೆಪಿಯಲ್ಲಿ ಮಾತ್ರವೇ ಮಹಿಳೆಯರಿಗೆ ಸೂಕ್ತ ಸ್ಥಾನಮಾನ ಸಿಗುತ್ತದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಎಸ್.ಎಂ.ವೀರೇಶ ಹನಗವಾಡಿ ತಿಳಿಸಿದರು. ನಗರದ ಅರ್ಬನ್ ಬ್ಯಾಂಕ್ ಸಮುದಾಯ ಭವನದಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಹಮ್ಮಿಕೊಂಡಿರುವ 2 ದಿನಗಳ ಪ್ರಶಿಕ್ಷಣ ಶಿಬಿರವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಕಾಂಗ್ರೆಸ್ ಪಕ್ಷವು ಒಂದು ಕುಟುಂಬದ ಮೇಲೆ ನಿಂತಿದೆ. ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ನೆಹರೂ ಕುಟುಂಬದವರನ್ನು ಬಿಟ್ಟರೆ ಬೇರೆ ಯಾರಿಗೂ ಅವಕಾಶವಿಲ್ಲ. … Read more

ಪೌರಕಾರ್ಮಿಕರ ಖಾಯಮಾತಿಗೆ ಸರ್ಕಾರದ ತಾತ್ವಿಕ ಒಪ್ಪಿಗೆ: ಸಿಎಂ ಬೊಮ್ಮಾಯಿ

shimoga-riots-were-the-result-of-the-governments-appeasement-policy-basavaraj-bommai

ಸುದ್ದಿ360 ಬೆಂಗಳೂರು.ಜು.02: ಪೌರಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಹಾನುಭೂತಿ ಹಾಗೂ ಮಾನವೀಯತೆಯಿಂದ ಕ್ರಮ ತೆಗೆದುಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ತೆಲಂಗಾಣಕ್ಕೆ ತೆರಳುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ನೇರ ಪಾವತಿ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಖಾಯಂಗೊಳಿಸಲು ತಾತ್ವಿಕವಾಗಿ  ಸರ್ಕಾರ ಒಪ್ಪಿಕೊಂಡಿದೆ. ಕಾನೂನಾತ್ಮಕ ವಾಗಿ ಹಾಗೂ ತಾಂತ್ರಿಕವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಪೌರಕಾರ್ಮಿಕರ ಹಾಗೂ ಅಧಿಕಾರಿಗಳ ಜಂಟಿ ಸಮಿತಿಯನ್ನು … Read more

ಬಸ್ ಪಾಸ್ ಶೈಕ್ಷಣಿಕ ಅವಧಿಗೆ ವಿಸ್ತರಿಸಲು ಆಗ್ರಹಿಸಿ ಎಐಡಿಎಸ್ಓ ಪ್ರತಿಭಟನೆ

ಸುದ್ದಿ360 ದಾವಣಗೆರೆ.ಜು.02: ಇಂಜಿನಿಯರಿಂಗ್, ಡಿಪ್ಲೊಮಾ, ಐಟಿಐ, ಮೆಡಿಕಲ್ ಹಾಗೂ ಇನ್ನಿತರ ವಿದ್ಯಾರ್ಥಿಗಳ ಬಸ್ ಪಾಸಿನ ಅವಧಿಯನ್ನು ಪ್ರಸಕ್ತ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ವಿಸ್ತರಿಸುವಂತೆ ಆಗ್ರಹಿಸಿ ಎಐಡಿಎಸ್ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ನಗರದ KSRTC ಬಸ್ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಎಐಡಿಎಸ್ಓನ ಜಿಲ್ಲಾಕಾರ್ಯದರ್ಶಿ ಪೂಜಾನಂದಿಹಳ್ಳಿ ಮಾತನಾಡಿ, ರಾಜ್ಯದ ಎರಡನೇ ಮತ್ತು ಮೂರನೇ ವರ್ಷದ ಪದವಿ ಹಾಗೂ ಇನ್ನಿತರ ಉನ್ನತ ಶಿಕ್ಷಣದ ವಿದ್ಯಾರ್ಥಿಗಳಿಗೆ  ವಿದ್ಯಾರ್ಥಿ ಪಾಸ್ ಅನ್ನು ಸೆಪ್ಟಂಬರ್ 2021ರಲ್ಲಿ ನೀಡಲಾಗಿತ್ತು. ಆದರೆ ಅವರ ತರಗತಿಗಳು ನವೆಂಬರ್ ನಲ್ಲಿ … Read more

ಭಕ್ಷ್ಯಪ್ರಿಯರಿಗೆ ವಿದ್ಯಾರ್ಥಿಗಳ ಕೈರುಚಿ . . .

ಸುದ್ದಿ360 ದಾವಣಗೆರೆ.ಜು.01: ಗೋಬಿ ಮಂಚೂರಿ, ರೈಸ್ ಬಾತ್, ಗರಿ ಗರಿ ಪಕೋಡ, ಬಿಸಿ ಬಿಸಿ ಚಪಾತಿ, ರಸಗುಲ್ಲ. . . ಹೋ ಬಾಯಲ್ಲಿ ನೀರೂರುತ್ತಿದೆಯಾ. . ?  ಶುಕ್ರವಾರ ಬೆಳಗ್ಗೆ ನಗರದ ಶಾಮನೂರು ರಸ್ತೆಯ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಇಂಥದ್ದೇ ಇನ್ನೂ ತರಹೇವಾರಿ ಖಾದ್ಯಗಳು ರುಚಿ ರುಚಿಯಾಗಿ ಸವಿಯಲು ಸಿದ್ಧವಿದ್ದವು. ಹಾಗಂತ ಇದು ಯಾವುದೋ ಸಮಾರಂಭದ ಅಡುಗೆಯಾಗಿರದೆ, ನಗರದ ಸಿದ್ದವೀರಪ್ಪ ಬಡಾವಣೆಯ ಭದ್ರಾ ಪದವಿ ಹಾಗೂ ಸ್ನಾತಕೋತ್ತರ ಕಾಲೇಜಿನ ವಿದ್ಯಾರ್ಥಿಗಳು ತಾವು ಸ್ವತಃ ಸೌಟು ಹಿಡಿದು … Read more

ದೇಶದಲ್ಲಿ ಹೆಚ್ಚುತ್ತಿರುವ ಜಿಹಾದಿ ಮನಸ್ಥಿತಿ: ಕಾಂಗ್ರೆಸ್ಸಿಗರ ಮೌನವೇಕೆ ?

ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಪ್ರಶ್ನೆ ಸುದ್ದಿ360 ದಾವಣಗೆರೆ.ಜು.01: ಬಿಜೆಪಿ ಹೆಚ್ಚು ಹೆಚ್ಚು ಜನಪ್ರಿಯತೆ ಗಳಿಸುತ್ತಿರುವುದನ್ನು ಸಹಿಸದ ಕಾಂಗ್ರೆಸ್ ಅಗ್ನಿಪಥ್ ಯೋಜನೆ ವಿರೋಧಿಸಿ ಬೀದಿಗಿಳಿಯುತ್ತದೆ. ಆದರೆ ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ನುಗ್ಗಿ ಹಾಡ ಹಗಲೇ ಒಬ್ಬ ಸಾಮಾನ್ಯ ವ್ಯಕ್ತಿಯ ಕತ್ತು ಸೀಳಿ ಕೊಲೆ ಮಾಡಿದರೆ ಪ್ರತಿಭಟಿಸುವ ಗೋಜಿಗೆ ಹೋಗುವುದಿಲ್ಲ. ಇದು ಕಾಂಗ್ರೆಸಿಗರ ಅಲ್ಪಸಂಖ್ಯಾತ ತುಷ್ಟೀಕರಣಕ್ಕೆ ಸಾಕ್ಷಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜಸ್ಥಾನದ ಉದಯಪುರದಲ್ಲಿ ಜಿಹಾದಿ ಮನಸ್ಥಿತಿಯ ಕೆಲವರು … Read more

ಎಚ್ ಆರ್ ಬಸವರಾಜಪ್ಪಗೂ ರೈತಸಂಘಕ್ಕೂ ಸಂಬಂಧವಿಲ್ಲ

ಸುದ್ದಿಗೋಷ್ಠಿಯಲ್ಲಿ ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ ಹೇಳಿಕೆ ಸುದ್ದಿ360 ದಾವಣಗೆರೆ.ಜು.01: ರಾಜ್ಯ ರೈತ ಸಂಘಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಅವರೇ ಅಧ್ಯಕ್ಷರು, ಸ್ವಯಂಘೋಷಿತ ಅಧ್ಯಕ್ಷರಾಗಿರುವ ಎಚ್ ಆರ್ ಬಸವರಾಜಪ್ಪರಿಗೂ ರೈತ ಸಂಘಕ್ಕೂ ಯಾವುದೇ ಸಂಬಂಧವಿಲ್ಲ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ ಹೇಳಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, 2016ರಲ್ಲಿ ಎಚ್ ಆರ್ ಬಸವರಾಜಪ್ಪ ಭ್ರಷ್ಟಾಚಾರ ಮತ್ತು ಅವ್ಯವಹಾರ ನಡೆಸಿದ್ದಾರೆ ಎಂದು ಶಿವಮೊಗ್ಗ ಜಿಲ್ಲೆಯ ರೈತಸಂಘ ರಾಜ್ಯ ಸಂಘಕ್ಕೆ ಸಲ್ಲಿಸಿದ ದೂರಿನ … Read more

ಉಪ್ಪಾರ ಅಭಿವೃದ್ದಿ ನಿಗಮ-ಸಾಲ, ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಸುದ್ದಿ360 ದಾವಣಗೆರೆ.ಜು.01: ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮದಿಂದ 2022-23ನೇ ಸಾಲಿಗೆ ಈ ಕೆಳಕಂಡ ಯೋಜನೆಗಳ ಅನುಷ್ಠಾನಕ್ಕಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1ರ 53(ಎ) ರಿಂದ 5(ವಿ) ವರೆಗಿನ ಉಪ್ಪಾರ ಮತ್ತು ಇದರ ಉಪಜಾತಿಗೆ ಸೇರಿದ ಜನರ ಆರ್ಥಿಕ ಅಭಿವೃದ್ದಿಗಾಗಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗಕ್ಕಾಗಿ ನೇರಸಾಲ ಯೋಜನೆ, 2022-23ನೇ ಸಾಲಿನ ಅರಿವು ಶೈಕ್ಷಣಿಕ ಸಾಲ(ನವೀಕರಣ)(2019-20ನೇ ಸಾಲಿನ 4ನೇ ಕಂತು ಹಾಗೂ 2020-21ನೇ ಸಾಲಿನ 3 ಕಂತು) ಯೋಜನೆಯನ್ನು ಜಾರಿಗೊಳಿಸಿದ್ದು, ಯೋಜನೆಯನ್ನು ಜಾರಿಗೊಳಿಸಿದ್ದು, … Read more

error: Content is protected !!