ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರ ಸಾಲಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಸುದ್ದಿ360 ದಾವಣಗೆರೆ.ಜು.01: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ ಹಾಗೂ ಅರಿವು ಶೈಕ್ಷಣಿಕ ಸಾಲ (ನವೀಕರಣ)ಯೋಜನೆಗಳ ಅನುಷ್ಠಾನಕ್ಕಾಗಿ ಹಿಂದುಳಿದ ವರ್ಗಗಳ ಪ್ರವರ್ಗ-1ರ 6(ಎ) ರಿಂದ 6(ಎಕೆ) ವರೆಗಿದ ಬೆಸ್ತ, ಕೋಳಿ, ಕಬ್ಬಲಿಗ ಇತ್ಯಾದಿ ಜಾತಿ/ಉಪಜಾತಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಜುಲೈ.14 ಕೊನೆಯ ದಿನಾಂಕವಾಗಿದ್ದು, ಅರ್ಜಿಗಳನ್ನು ಸುವಿಧಾ ತಂತ್ರಾಂಶದ Suvida.karnataka.gov. ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಜಶರಣ ಅಂಬಿಗರ ಚೌಡಯ್ಯ, … Read more

ಸುಶ್ರುತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಸಂಶೋಧನ ಕೇಂದ್ರ ಉದ್ಘಾಟನೆ

ಶಿಷ್ಯೋಪನಯನ ಸಂಸ್ಕಾರ – ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಗೈದಿರುವ ಸಾಧಕರಿಗೆ ಸನ್ಮಾನ ಸುದ್ದಿ360 ದಾವಣಗೆರೆ. ಜೂ.30: ಸುಶ್ರುತ ಆರೋಗ್ಯ ಪ್ರತಿಷ್ಠಾನದಿಂದ ನಗರದ ಲೋಕಿಕೆರೆ ರಸ್ತೆಯ ಶ್ರೀರಾಮ ನಗರದ ಶ್ರೀದೇವಿ ರೈಸ್ ಮಿಲ್ ಹತ್ತಿರ ನೂತನವಾಗಿ ನಿರ್ಮಿಸಿರುವ ಸುಶ್ರುತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಸಂಶೋಧನ ಕೇಂದ್ರದ ಉದ್ಘಾಟನೆ, ಮತ್ತು 2021-22ನೇ ಸಾಲಿನ ವಿದ್ಯಾರ್ಥಿಗಳಿಗೆ ಶಿಷ್ಯೋಪನಯನ ಸಂಸ್ಕಾರ ಹಾಗೂ ವಿಶ್ವ ವೈದ್ಯರ ದಿನಾಚರಣೆ ಪ್ರಯುಕ್ತ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಗೈದಿರುವ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಜು.1ರಂದು ಬೆಳಗ್ಗೆ 10 … Read more

ಕನ್ನಯ್ಯಲಾಲ್ ಹತ್ಯೆ; ಹಂತಕರನ್ನು ಗುಂಡಿಕ್ಕಿ ಕೊಲ್ಲಬೇಕು: ಶ್ರೀನಿವಾಸ್ ದಾಸಕರಿಯಪ್ಪ

ಸುದ್ದಿ360 ದಾವಣಗೆರೆ, ಜೂ.30: ರಾಜಸ್ತಾನದ ಉದಯಪುರದಲ್ಲಿ ಕನ್ನಯ್ಯ ಲಾಲ್ ಹೆಸರಿನ ವ್ಯಕ್ತಿಯನ್ನು ಕೊಂದು ಹಾಕಿದ ಹಂತಕರನ್ನು ಗುಂಡಿಟ್ಟಿ ಕೊಲ್ಲಬೇಕು ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ್ ದಾಸಕರಿಯಪ್ಪ ಹೇಳಿದ್ದಾರೆ. ನಗರದ ಜಯದೇವ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆ ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಗುರುವಾರ ಹಮ್ಮಿಕೊಂಡಿದ್ದ ಪ್ರತಿಭಟನೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು. ರಾಜಸ್ತಾನದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಇಲ್ಲವೇ ಗುಂಡಿಟ್ಟು ಕೊಲ್ಲಬೇಕು. ತಪ್ಪಿದಲ್ಲಿ ದೇಶದಲ್ಲಿ ಹಿಂದೂಗಳ ಶಕ್ತಿ ಏನೆಂಬುದನ್ನು ತೋರಿಸಬೇಕಾಗುತ್ತದೆ ಎಂದು … Read more

ಉದಯಪುರ ಘಟನೆಯ ಹಿಂದೆ ಭಯೋತ್ಪಾದಕ ಸಂಸ್ಥೆಗಳಿವೆ ಸಿಎಂ ಬೊಮ್ಮಾಯಿ

ಸುದ್ದಿ360 ಬೆಂಗಳೂರು, ಜೂನ್ 30: ಉದಯಪುರದಲ್ಲಿ ಆಗಿರುವುದು  ಅಮಾನವೀಯ ಹಾಗೂ ಅತ್ಯಂತ ಹೇಯ ಕೃತ್ಯ. ಇದರ ಹಿಂದೆ ವ್ಯಕ್ತಿ ಗಳಷ್ಟೇ ಅಲ್ಲ ಭಯೋತ್ಪಾದಕ ಸಂಸ್ಥೆ ಗಳಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಇದು  ಭಯೋತ್ಪಾದನೆಯ ಒಂದು ಕ್ರಮವಾಗಿದೆ. ಅದರ ಹಿಂದೆ  ದೊಡ್ಡ ಅಂತರರಾಷ್ಟ್ರೀಯ ಷಡ್ಯಂತ್ರವಿದೆ. ಅದರ ಸಂಪೂರ್ಣ ತನಿಖೆಯಾಗಬೇಕು.  ಅಪರಾಧಿಗಳನ್ನು ಪತ್ತೆ ಹಚ್ಚಿ ಗಲ್ಲಿಗೇರಿಸಬೇಕು.  ರಾಜಸ್ತಾನ ಸರ್ಕಾರ ಸಂಪೂರ್ಣ ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಜರುಗಿಸಬೇಕು … Read more

ಮುಳುಗಿತೇ ಮಂಗಳೂರಿನ ಸ್ಮಾರ್ಟ್ !?

ಸುದ್ದಿ360 ಮಂಗಳೂರು, ಜೂ.30:  ಸ್ಮಾರ್ಟ್ ಸಿಟಿಯಾಗಲು ದಾಪುಗಾಲು ಇಟ್ಟಿರುವ ಮಂಗಳೂರು ನಗರ ಈ ಹಿಂದಿನ ವರ್ಷಗಳಂತೆಯೇ ಜಲಾವೃತಗೊಂಡಿದೆ. ಮಳೆಗಾಲ ಪ್ರಾರಂಭವಾದರೆ ಮಂಗಳೂರು ಜಲಾವೃತಗೊಳ್ಳುವುದು ಕಳೆದ ಹಲವು ವರ್ಷಗಳಿಂದ ಸಾಮಾನ್ಯವಾಗಿಬಿಟ್ಟಿದೆ. ಬುದ್ದಿವಂತರ ಜಿಲ್ಲೆ ಮಂಗೂಳೂರಿನ ಈ ಸಮಸ್ಯೆಯನ್ನು ಬಗೆಹರಿಸುವಲ್ಲಿ ಇಚ್ಛಾಶಕ್ತಿಯ ಕೊರತೆ ಎದ್ದು ಕಾಣುತ್ತಿದೆ. ಚರಂಡಿ ವ್ಯವಸ್ಥೆಯೇ ಇಲ್ಲದ ಹೆದ್ದಾರಿಗಳು, ಅವೈಜ್ಞಾನಿಕ ಕಾಮಗಾರಿಗಳು, ಹೊಂಡದಿಂದ ಕೂಡಿದ ರಸ್ತೆಗಳು, ಮಳೆಗಾಲಕ್ಕೂ ಮುನ್ನ ನೀರು ಸರಾಗವಾಗಿ ಹರಿಯುವಂತೆ ಚರಂಡಿಗಳನ್ನು ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳದ ಪಾಲಿಕೆ ಅಧಿಕಾರಿಗಳು, ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಬಿಸಾಡುವ ಸಾರ್ವಜನಿಕರು … Read more

ಮಾರಕಾಸ್ತ್ರಗಳಿಂದ ವ್ಯಕ್ತಿಯನ್ನು ಅಟ್ಟಾಡಿಸಿ ಕೊಲೆ

ಸುದ್ದಿ360 ಬೆಳಗಾವಿ, ಜೂ.30:  ನಗರದ ಮದ್ಯಭಾಗದಲ್ಲಿ ವ್ಯಕ್ತಿಯೋರ್ವನನ್ನು ನಡುರಸ್ತೆಯಲ್ಲೇ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ತಾಲ್ಲೂಕಿನ ಮಜಗಾವಿ ಗ್ರಾಮದ ಅಂಬೇಡ್ಕರ್ ಗಲ್ಲಿಯ ನಿವಾಸಿ, 27ರ ವಯೋಮಾನದ ಯಲ್ಲೇಶ ಶಿವಾಜಿ ಕೊಲ್ಕರ್ ಕೊಲ್ಲಲ್ಪಟ್ಟ ವ್ಯಕ್ತಿಯಾಗಿದ್ದು, ಅನೈತಿಕ ಸಂಬಂಧದ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಉದ್ಯಮಭಾಗ ಠಾಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಆರೋಪಿಯ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

ಬಿಸಿಯೂಟ ತಯಾರಕರಿಂದ ಪ್ರತಿಭಟನೆ

ಬೇಡಿಕೆ ಈಡೇರಿಸುವಂತೆ ಮುಖ್ಯಮಂತ್ರಿಗೆ ಮನವಿ ಸುದ್ದಿ360 ದಾವಣಗೆರೆ, ಜೂ.29:  ಬಿಸಿಯೂಟ ತಯಾರಕರಿಗೆ ಇಡುಗಂಟು ಹಣ, ನಿವೃತ್ತಿ ವೇತನ  ಇತರೆ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ನಗರೆದಲ್ಲಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ (ಎಐಟಿಯುಸಿ) ಪ್ರತಿಭಟನೆ ನಡೆಸಿತು. ಇಲ್ಲಿನ  ತಾಲ್ಲೂಕು ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದ ಬಿಸಿಯೂಟ ತಯಾರಕರು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಹಸೀಲ್ದಾರ್ ರವರ ಮೂಲಕ ಮುಖ್ಯ ಮಂತ್ರಿಗಳಿಗೆ ಮತ್ತು ಶಿಕ್ಷಣ ಮಂತ್ರಿಗಳಿಗೆ ಮನವಿ ಸಲ್ಲಿಸಿದರು. ರಾಜ್ಯಾದ್ಯಂತ 60 ವರ್ಷ ವಯಸ್ಸಾಗಿ ಬಿಡುಗಡೆಗೊಳಿಸುತ್ತಿರುವ ಬಿಸಿಯೂಟ … Read more

ಸಾಮೂಹಿಕ ಸನ್ನಿಯಂತೆ ಕಾಡುತ್ತಿರುವ ಮಾದಕ ವಸ್ತು ಸೇವನೆ

ಯುವಪೀಳಿಗೆ ಜಾಗರೂಕರಾಗಲು ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ ಬಿ ರಿಷ್ಯಂತ್ ಕರೆ ಸುದ್ದಿ360 ದಾವಣಗೆರೆ. ಜೂ.29: ಸಾಮಾಜಿಕ ಜಾಲತಾಣಗಳು ಇಂದಿನ ಯುವಪೀಳಿಗೆಗೆ ದೊಡ್ಡ ಪಿಡುಗಾಗಿ ಮಾರ್ಪಟ್ಟಿದ್ದು ಯುವಪೀಳಿಗೆಯನ್ನು ಸಮಸ್ಯೆಯತ್ತ ದೂಡುತ್ತಿವೆ ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲರೂ ಒಂದಾಗಬೇಕಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ ಬಿ ರಿಷ್ಯಂತ್ ಹೇಳಿದರು. ನಗರದ ಎಸ್ ಎಸ್ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ … Read more

ಸುಶ್ರುತ ಆಯುರ್ವೇದ ವೈದ್ಯಕೀಯ ಕಾಲೇಜು , ಸಂಶೋಧನ ಕೇಂದ್ರ ಲೋಕಾರ್ಪಣೆ (ಜು.1)

ಸುದ್ದಿ360 ದಾವಣಗೆರೆ. ಜೂ.29:  ಸುಶ್ರುತ ಆರೋಗ್ಯ ಪ್ರತಿಷ್ಠಾನದಿಂದ ನಗರದ ಲೋಕಿಕೆರೆ ರಸ್ತೆಯ ಶ್ರೀರಾಮ ನಗರದ ಶ್ರೀದೇವಿ ರೈಸ್ ಮಿಲ್ ಹತ್ತಿರ ನೂತನವಾಗಿ ನಿರ್ಮಿಸಿರುವ ಸುಶ್ರುತ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಸಂಶೋಧನ ಕೇಂದ್ರದ ಉದ್ಘಾಟನೆಯು ಬರುವ ಜು.1ರಂದು ಬೆಳಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಸುಶ್ರುತ ಆರೋಗ್ಯ ಪ್ರತಿಷ್ಠಾನದ ಕಾರ್ಯದರ್ಶಿ ಡಾ. ಬಿ.ಜಿ. ಸತೀಶ್  ಇಂದು  ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮದಲ್ಲಿ ವಿಶ್ವ ವೈದ್ಯರ ದಿನಾಚರಣೆ ಪ್ರಯುಕ್ತ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಗೈದಿರುವ ಸಾಧಕರಿಗೆ ಸನ್ಮಾನಿಸಲಾಗುವುದು. ಮತ್ತು … Read more

ಜಿಎಂಐಟಿಯಲ್ಲಿ ಡಿಆರ್ ಡಿಓ ಸೆಮಿನಾರ್ (ಜು.1)

ಸುದ್ದಿ360 ದಾವಣಗೆರೆ. ಜೂ.29:  ಜಿಎಂಐಟಿ ಕಾಲೇಜಿನಲ್ಲಿ  ಆಜಾದಿ ಕ ಅಮೃತ್ ಮಹೋತ್ಸವ ಟ್ಯಾಗ್ ಲೈನ್ ಅಡಿ  ಜುಲೈ 1 ರಿಂದ ಜುಲೈ 3 ರ ವರೆಗೆ ಮೂರು ದಿನಗಳ ಸೆಮಿನಾರ್ ಮತ್ತು ಪ್ರಾಜೆಕ್ಟ್ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಮಾಹಿತಿ ನೀಡಿದರು. ನಗರದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಅವರು,  ಭಾರತಕ್ಕೆ ಸ್ವಾತಂತ್ರ ಬಂದು 75 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಡಿ ಆರ್ ಡಿ ಓ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಜಿಎಂಐಟಿ ಹಾಗೂ  ಡಿಆರ್ … Read more

error: Content is protected !!