4ನೇ ದಿನಕ್ಕೆ ಕಾಲಿಟ್ಟ ಸಿ ಮತ್ತು ಡಿ ಗ್ರೂಪ್ ಹೊರಗುತ್ತಿಗೆ ನೌಕರರ ಮುಷ್ಕರ – ಜಿಲ್ಲಾಧಿಕಾರಿಗಳಿಗೆ ಮನವಿ

ಸುದ್ದಿ360 ದಾವಣಗೆರೆ, ಸೆ.09: ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನ ಸಿ ಮತ್ತು ಡಿ ಗ್ರೂಪ್ ಹೊರಗುತ್ತಿಗೆ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿರುವ ಮುಷ್ಕರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಎಐಯುಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಸಿದರು. ನಗರದ ಡೆಂಟಲ್ ಕಾಲೇಜು ರಸ್ತೆಯಲ್ಲಿರುವ ಯುಬಿಡಿಟಿ ಕಾಲೇಜಿನಿಂದ ಕಾಲ್ನಡಿಗೆಯಲ್ಲಿ ಹೊರಟ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿಗಳ ಕಚೇರಿ ತಲುಪಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ತಮ್ಮ ಬೇಡಿಕೆಗಳ ಈಡೆರಿಸುವಂತೆ ಘೋಷಣೆಗಳನ್ನು ಕೂಗಿದರು. ಕಾಲೇಜಿನಲ್ಲಿ … Read more

ದಾವಣಗೆರೆ: ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಯುಬಿಡಿಟಿ ಕಾಲೇಜಿನ ಎದುರು ಪ್ರತಿಭಟನೆ

ಸುದ್ದಿ360 ದಾವಣಗೆರೆ, ಸೆ.06: ಕಳೆದ 15 ವರ್ಷಗಳಿಂದ ದುಡಿಯುತ್ತಿರುವ ನೌಕರರಿಗೆ ಸರಕಾರದ ಆದೇಶದಂತೆ ಕನಿಷ್ಠ ವೇತನ ಜಾರಿಗೊಳಿಸಿಲ್ಲ. ಹಲವು ವರ್ಷಗಳಿಂದ ಮಾಸಿಕ ವೇತನವನ್ನು ಸರಿಯಾದ ಸಮಯಕ್ಕೆ ನೀಡುತ್ತಿಲ್ಲ ಎಂದು ಆರೋಪಿಸಿ, ನಗರದ ಡೆಂಟಲ್ ಕಾಲೇಜು ರಸ್ತೆಯಲ್ಲಿರುವ ಯುಬಿಡಿಟಿ ಕಾಲೇಜಿನ ಎದುರು ಮಂಗಳವಾರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕಾಲೇಜಿನ ಸಿ ಮತ್ತು ಡಿ ದರ್ಜೆ ಹೊರಗುತ್ತಿಗೆ ನೌಕರರು ಎಐಯುಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಎಐಯುಟಿಯುಸಿ ಜಿಲ್ಲಾಧ್ಯಕ್ಷ ಮಂಜುನಾಥ್ ಕೈದಾಳೆ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ … Read more

ಜು.11: ಯುಬಿಡಿಟಿಯಲ್ಲಿ ಅಭಿನಂದನಾ ಸಮಾರಂಭ

ಸುದ್ದಿ360, ದಾವಣಗೆರೆ, ಜು.9:  ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳು ವಿವಿಧ ಹೆಸರಾಂತ ಕಂಪನಿಗಳಿಗೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಜು.11ರಂದು ಬೆಳಿಗ್ಗೆ 11.30ಕ್ಕೆ ಕಾಲೇಜಿನ ವಿವೇಕಾನಂದ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾಲೇಜಿನ ಅಂತಿಮ ವರ್ಷದ ಇಂಜಿನಿಯರಿಂಗ್ ಓದುತ್ತಿರುವ ವಿವಿಧ ವಿಭಾಗಗಳ 400 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬೆಲ್, ಡಿಸಿಎಸ್, ಇನ್‌ಫೋಸಿಸ್, ವಿಪ್ರೋ, ಎಲ್ ಅಂಡ್ ಟಿ ಸೇರಿದಂತೆ ವಿವಿಧ ಹೆಸರಾಂತ ಕಂಪನಿಗಳಲ್ಲಿ ಆಯ್ಕೆಯಾಗಿರುವ ಕಾರಣ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯರು ತಿಳಿಸಿದ್ದಾರೆ.

ಜೂ. 28: ಯುಬಿಡಿಟಿಯಲ್ಲಿ ಚೈತ್ರ – 2022

ಸುದ್ದಿ 360 ದಾವಣಗೆರೆ, ಜೂ. 27:  ನಗರದ ವಿಶ್ವವಿದ್ಯಾನಿಲಯ ಬಿಡಿಟಿ ಇಂಜಿನಿಯರಿಂಗ್ (ಯುಬಿಡಿಟಿ) ಕಾಲೇಜ್‌ನಲ್ಲಿ ಜೂನ್ 28ರ ಸಂಜೆ 5 ಗಂಟೆಗೆ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಯ ಭವನದದಲ್ಲಿ ಚೈತ್ರ  2022 ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕಲಾವಿದ, ಕನ್ನಡ ಚಲನಚಿತ್ರ ಮಂಡಳಿ ನಿರ್ದೇಶಕ ನಾಗೇಂದ್ರ ಶಾ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಪಾಲಿಕೆ ಸದಸ್ಯ ಪ್ರಸನ್ನ ಕುಮಾರ್, ವನಿತಾ ಸಮಾಜ ಅಧ್ಯಕ್ಷೆ ಪದ್ಮ ಪ್ರಕಾಶ್ ಉಪಸ್ಥಿತರಿರುವರು. ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಮಲ್ಲಿಕಾರ್ಜುನ ಎಸ್. ಹೊಳಿ … Read more

error: Content is protected !!