ದಾವಣಗೆರೆ: ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಅವರು ನಗರದ ವಿವಿಧ ಭಾಗಗಳಲ್ಲಿ ಅಂದಾಜು ರೂ. 6.ಕೋಟಿ ವೆಚ್ಚದಲ್ಲಿ ಹಮ್ಮಿಕೊಂಡಿದ್ದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆಯನ್ನು ನೀಡಿದರು.
ನಗರದ ವಾರ್ಡ್ ನಂ.44 ರಲ್ಲಿ ಬರುವ ಮಹಾಲಕ್ಷ್ಮೀ ಬಡಾವಣೆ ಮುಖ್ಯ ರಸ್ತೆಯಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿ, ವಾರ್ಡ್ ನಂ.19 ದಾವಣಗೆರೆ ಮಹಾನಗರ ಪಾಲಿಕೆಯ ಚಾಮರಾಜಪೇಟೆ ಸರ್ಕಲ್ ಹತ್ತಿರ ಇರುವ ಕೆ.ಆರ್. ಮಾರುಕಟ್ಟೆ ಕಟ್ಟಡಕ್ಕೆ ರ್ಯಾಂಪ್ ನಿರ್ಮಾಣ ಕಾಮಗಾರಿ, ವಾರ್ಡ್ ನಂ.41 ದಾವಣಗೆರೆ ವ್ಯಾಪ್ತಿಯ ಪೂನಾ ಬೆಂಗಳೂರು ರಸ್ತೆಯಲ್ಲಿರುವ ದೋಬಿ ಘಾಟ್ ಗೆ ವಿದ್ಯುತ್ ಲಾಂಡ್ರಿ ಮಿಷಿನ್ ಅಳವಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗಳಿಗೆ ಚಾಲನೆ ನೀಡಿ, ಉತ್ತಮ ಕಾಮಗಾರಿ ನಡೆಸುವಂತೆ ಸಂಬಂಧಿಸಿದವರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಗಂಗಾಧರ ಸ್ವಾಮಿ, ಮೇಯರ್ ಕೆ.ಚಮನ್ ಸಾಬ್, ಪಾಲಿಕೆಯ ಆಯುಕ್ತರಾದ ರೇಣುಕಾ, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸುಧಾ ಇಟ್ಟಿಗುಡಿ ಮಂಜುನಾಥ್, ಸವಿತಾ ಗಣೇಶ್ ಹುಲ್ಲುಮನೆ, ಪಾಲಿಕೆ ಸದಸ್ಯರಾದ ಏ.ನಾಗರಾಜ್, ರಹೀಖಾನ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಮಾಗನಳ್ಳಿ ಪರಶುರಾಮ್, ಕಾರ್ಮಿಕ ಮುಖಂಡ ಆವರಗೆರೆ ಉಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.